ಬೆಳಗಾವಿ, ಬೀದರ್‌ನಲ್ಲಿ ನೆಲೆಸಿರುವ ಮರಾಠಿಗರಿಗಾಗಿ ₹2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ ಸರ್ಕಾರ

Date:

ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.

- Advertisement -

ಈ ಹಿಂದೆ, ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ವಿಮಾ ಯೋಜನೆಗೆ ನಿರ್ದಿಷ್ಟವಾಗಿ ಮರಾಠಿ ಮಾತನಾಡುವ ಜನಸಂಖ್ಯೆಯನ್ನು ನೋಂದಾಯಿಸಲು ಬೆಳಗಾವಿಯಾದ್ಯಂತ ಸೇವಾ ಕೇಂದ್ರಗಳನ್ನು ತೆರೆದಿತ್ತು. ಇದೀಗ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಲೋಕಸಭೆ ಚುನಾವಣೆಯ ಘೋಷಣೆಗೆ ಒಂದು ದಿನ ಮೊದಲು (ಮಾರ್ಚ್ 16 ರಂದು) ಹಣವನ್ನು ಬಿಡುಗಡೆ ಮಾಡಿದೆ ಎಂದು ಮಾಹಿತಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ಹಣವನ್ನು ಬೆಳಗಾವಿ ಮತ್ತು ನಿಪ್ಪಾಣಿಯಲ್ಲಿ ತಲಾ ₹25 ಲಕ್ಷ ವೆಚ್ಚದಲ್ಲಿ ಮಹಾರಾಷ್ಟ್ರ ಸಾಂಸ್ಕೃತಿಕ ಭವನ (ಮಹಾರಾಷ್ಟ್ರ ಸಾಂಸ್ಕೃತಿಕ ಸಭಾಂಗಣ) ನಿರ್ಮಾಣಕ್ಕೆ ಬಳಸಲಾಗುವುದು” ಎಂದು ಸ್ಥಳೀಯರು ತಿಳಿಸಿದ್ದಾರೆ.

“ಬೀದರ್‌ನಲ್ಲಿ ಮರಾಠಿ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ರಘುನಾಥ ಮಹಾರಾಜ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವಂತೆ ₹25 ಲಕ್ಷ ಮಂಜೂರು ಮಾಡಿದ್ದು, ಅದೇ ಜಿಲ್ಲೆಯ ಸತ್ಯಂ ಶಿವಂ ಸುಂದರಂ ಅಭಿವೃದ್ಧಿ ಸಂಘಕ್ಕೆ ಮರಾಠಿಗರಲ್ಲಿ ತನ್ನ ಸಾಮಾಜಿಕ ಕಾರ್ಯವನ್ನು ಮುಂದುವರಿಸಲು ₹25 ಲಕ್ಷವನ್ನು ಬಿಡುಗಡೆ ಮಾಡಲಾಗಿದೆ” ಎಂದು ಸ್ಥಳೀಯ ಮಾಹಿತಿಯಿಂದ ತಿಳಿದುಬಂದಿದೆ.

ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗೆ ಶಿಕ್ಷಣ ಸಂಬಂಧಿತ ಸ್ಟೇಷನರಿ ವಸ್ತುಗಳು, ಪಠ್ಯಪುಸ್ತಕಗಳು ಮತ್ತು ಆಂಬ್ಯುಲೆನ್ಸ್‌ ಸೇರಿದಂತೆ ಆಸ್ಪತ್ರೆಗಳಿಗೆ ಸಂಬಂಧಿಸಿದ ಉಪಕರಣಗಳನ್ನು ಖರೀದಿಸಲು ಈ ಹಣವನ್ನು ಬಳಸಿಕೊಳ್ಳಲು ಸಂಘಕ್ಕೆ ಸೂಚನೆ ನೀಡಲಾಗಿದೆ.

“ಕರ್ನಾಟಕ ಸರ್ಕಾರಕ್ಕೆ ಹೋಲಿಸಿದರೆ ಮಹಾರಾಷ್ಟ್ರ ಸರ್ಕಾರದ ಚಟುವಟಿಕೆಗಳು ಗಡಿ ಪ್ರದೇಶದ ಬಗ್ಗೆ ಎಷ್ಟು ಕಾಳಜಿ ವಹಿಸುತ್ತದೆ ಎಂಬುದನ್ನು ತೋರಿಸುತ್ತದೆ” ಎಂದು ಹಿರಿಯ ಕನ್ನಡ ಮುಖಂಡ ಮತ್ತು ಕರ್ನಾಟಕ ಗಡಿ ಸಂರಕ್ಷಣಾ ಸಮಿತಿಯ ಸದಸ್ಯ ಅಶೋಕ್ ಚಂದರಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಲೋಕಯುಕ್ತರ ಬಲೆಗೆ ಬಿದ್ದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್

ಬೆಳಗಾವಿಯ ಮಹಾರಾಷ್ಟ್ರ ಪರ ಸಂಘಟನೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು, “ಬಿಡುಗಡೆ ಮಾಡಿದ ಮೊತ್ತವು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ರಾಜ್ಯದ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಾಯ ಮಾಡುತ್ತದೆ” ಎಂದು ಸಂತಸ ವ್ಯಕ್ತಪಡಿಸಿದರು.

ಎಂಇಎಸ್ ವಕ್ತಾರ ವಿಕಾಸ ಕಲಘಟಗಿ ಮಾತನಾಡಿ, “ಸರ್ಕಾರದಿಂದ ಬಿಡುಗಡೆಯಾಗುವ ಮೊತ್ತವನ್ನು ರಾಜ್ಯದ ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಸಂಸ್ಕೃತಿಯನ್ನು ಜೀವಂತವಾಗಿಡಲು ಮತ್ತು ಮರಾಠಿ ಭಾಷೆಯಲ್ಲಿ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಬಳಸಲಾಗುತ್ತದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...