ʼವ್ಯಸನ ಮುಕ್ತ ಸಮಾಜಕ್ಕಾಗಿ ದುಶ್ಚಟಗಳ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿʼ

Date:

ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ ಸಂಗ್ರಹಿಸಿ ದೊರೆತ ಧವಸ ಧಾನ್ಯಗಳಿಂದ ಮಠಗಳಲ್ಲಿ ಓದುವ ಬಡ ಮಕ್ಕಳಿಗೆ ಪ್ರಸಾದ ನೀಡುವ ಕಾರ್ಯ ಸಾಮಾನ್ಯ. ಆದರೆ, ಇದಕ್ಕೆ ವಿರುದ್ದವಾಗಿ ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುರ್ವ್ಯಸನಗಳು, ದುಶ್ಚಟಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು.

- Advertisement -

ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930ರ ಆಗಸ್ಟ್1ರಂದು ಜನಿಸಿದ ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು. ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿದರು. ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಬಂದ ಕಾರಣ ಕಾಶಿಯಿಂದ ಆಗಮಿಸಿ, ಗ್ರಾಮಗಳ ಜಮೀನುದಾರರು, ಶ್ರೀಮಂತರನ್ನು ವಿನಂತಿಸಿ, ಧವಸ ಧಾನ್ಯ ಸಂಗ್ರಹಿಸಿ, ಗ್ರಾಮಗಳಲ್ಲಿ ಗಂಜಿ ಕೇಂದ್ರ ಆರಂಭಿಸಿದರು. ದಾಸೋಹ ಮಾಡಿದ್ದು ಮಾತ್ರವಲ್ಲದೇ ಜಾನುವಾರುಗಳಿಗಾಗಿ ಪಶುಶಾಲೆ, ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ʼಜೆನ್‌ ಝಿʼ ಎಂಬ ಸಮತಾ ನಿಲುವು

ಸುಪ್ರಿಂಕೋರ್ಟಿನ ಮುಖ್ಯಸ್ಥರು ಇದೀಗ ಮತ್ತೊಂದು ಹೇಳಿಕೆಯ ಮೂಲಕ ಜಗತ್ತಿನಾದ್ಯಂತ ಸುದ್ದಿಯಲ್ಲಿದ್ದಾರೆ. ವಿದ್ಯಾರ್ಥಿ ಯುವಜನರ ಕುರಿತು ‘ಸೊಳ್ಳೆಗಳನ್ನು ಹೊಡೆಯಲು ಸುತ್ತಿಗೆಗಳು ಬೇಕಿಲ್ಲ’ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಪ್ರಜಾಪ್ರಭುತ್ವ ದೇಶದ ಕಾನೂನು ಕಾಯುವ ಅತ್ಯುನ್ನತ ಹೊಣೆ...

1970ರಲ್ಲಿ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19ನೇ ಪೀಠಾಧಿಕಾರಿಯಾಗಿ ನೇಮಕಗೊಂಡ ನಂತರ 2018ರ ವರೆಗೆ 48 ವರ್ಷಗಳ ಕಾಲ ಅವರ ಸಾಧನೆ ಅಪಾರವಾದುದು. ಇದರಲ್ಲಿ ಸ್ವಾಮೀಜಿಯವರು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ 1975ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಠವಾದದ್ದು.

ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ನಿಧನ ಹೊಂದಿದ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ತೆರಳಿದ್ದ ಸ್ವಾಮಿಗಳಿಗೆ ಆತನ ಪತ್ನಿ ಮತ್ತು ಮಕ್ಕಳು ಉಪವಾಸದಿಂದ ದು:ಖಿಸುವುದನ್ನು ಕಂಡರು. ಇಂತಹ ಸಾವಿರಾರು ಕುಟುಂಬಗಳು ಕುಡಿತ ಮತ್ತು ಇತರೆ ದುಶ್ಚಟಗಳಿಂದ ಹಾಳಾಗಿರುವುದನ್ನು ಅರಿತು, ಇಂತಹ ದುಶ್ಚಟಗಳಿಗೆ ಒಳಗಾಗಿರುವವನ್ನು ಇದರಿಂದ ಮುಕ್ತಿಗೊಳಿಸುವ ಉದ್ದೇಶದಿಂದ ಮಹಾಂತ ಜೋಳಿಗೆ ಆಂದೋಲನ ಆರಂಭಿಸಿದರು. ಮಹಾಂತ ಎಂದರೆ ಧರ್ಮಾಧಿಕಾರಿ, ಧರ್ಮದ ಗುರು ಅಥವಾ ಸ್ವಾಮೀಜಿ, ಜೋಳಿಗೆ ಎಂದರೆ ಬಟ್ಟೆಯ ಚೀಲ.

ಜಾತಿ-ಮತ-ಪಂಗಡ-ಧರ್ಮ-ಭಾಷೆೆ-ದೇಶವೆನ್ನದೆ 42 ವರ್ಷಗಳ ಕಾಲ ಭಾರತ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ತಮ್ಮ ಮಹಾಂತ ಜೋಳಿಗೆ ಹಿಡಿದು ಜನರಲ್ಲಿನ ದುಶ್ಟಟಗಳ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ವ್ಯಕ್ತಿ-ಕುಟುಂಬ-ಸಮಾಜ- ಗ್ರಾಮಗಳ ನಿರ್ಮಾಣ ಮಾಡಿದರು. ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಮಾಜ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ಚಟಗಳಿಗೆ ವ್ಯಸನಗಳಿಗೆ ದಾಸರಾದವರನ್ನು ಪರಿವರ್ತನೆ ಮಾಡಿದರು. ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ಇಂತಹ ಚಟಗಳಿಗೆ ಬಲಿಯಾಗದಂತೆ ಎಚ್ಚರ ಮೂಡಿಸಿದ ಪರಿಣಾಮ, ಲಕ್ಷಾಂತರ ಜನ ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ಇಂದು ನೆಮ್ಮದಿಯ ಜೀವನ ಸಾಗಿಸುತ್ತಿವೆ.

ಇದನ್ನೂ ಓದಿ: ಬಾಗಲಕೋಟೆ | ಎಸ್ಐಟಿ ತನಿಖೆಗೆ ಸಂಪೂರ್ಣ ಅಧಿಕಾರ ನೀಡುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ಮಹಾಂತ ಜೋಳಿಗೆಯ ಶಿವಶಿಲ್ಪಿ, ವ್ಯಸನ ಮುಕ್ತ ಆಂದೋಲನದ ಹರಿಕಾರರು ಆಗಿದ್ದ ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 1 ನ್ನು, ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಹಾಗೂ ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆಯು ಪ್ರೇರಣೆಯಾಗಲಿದೆ.

987638ca8c89079659d0147ec8165bb4e02be67aff4a7af8f502ae66e86a5a1e?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ...