ಬೆಳಗಾವಿ | ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ; ಕಾನೂನು ಸಚಿವರ ಕಳವಳ

Date:

Advertisements

ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯಲಾಗುವ ಸಂಸತ್ ಭವನದಲ್ಲಿ ಬುಧವಾರ ಭಾರೀ ಭದ್ರತಾ ವೈಫಲ್ಯ ನಡೆದಿರುವುದು ಆತಂಕಕಾರಿ. ಭಾರೀ ಭದ್ರತೆಯ ಸ್ಥಳದಲ್ಲೇ ಹೀಗಾದರೆ ಇನ್ನು ದೇಶದ ಜನರ ರಕ್ಷಣೆ ಹೇಗೆ ಸಾಧ್ಯ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌ ಕೆ ಪಾಟೀಲ್‌ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಸಂಸತ್ ಭವನದಲ್ಲಿ ಬಹು ಹಂತದ ಭದ್ರತೆ, ತಪಾಸಣೆ ಇದ್ದರೂ ಈ ರೀತಿಯ ಭದ್ರತಾ ವೈಫಲ್ಯ ನಡೆದದ್ದು ಹೇಗೆ? ಇಡೀ ದೇಶವೇ ಬೆಚ್ಚಿ ಬೀಳುವ ಘಟನೆ ಇದು” ಎಂದು ಆತಂಕ ವ್ಯಕ್ತಪಡಿಸಿದರು.

“ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ನೀಡಲಾಗಿದೆ. ಪಾಸ್ ನೀಡುವ ಮುನ್ನ ವ್ಯಕ್ತಿಗಳ ಪೂರ್ವಾಪರ ವಿಚಾರಿಸದೇ ಇರುವುದು ನಿರ್ಲಕ್ಷ್ಯವನ್ನು ತೋರುತ್ತದೆ. ಇದು ಅಕ್ಷಮ್ಯ” ಎಂದು ಹೇಳಿದ್ದಾರೆ.

Advertisements

“ಸರಿಯಾಗಿ 22 ವರ್ಷಗಳ ಹಿಂದೆ ಇದೇ ದಿನ ಸಂಸತ್ ಭವನದ ಮೇಲೆ ದಾಳಿ ನಡೆದಿತ್ತು. 2001ರಲ್ಲಿ ಸಂಸತ್ ಭವನದ ಹೊರಭಾಗದಲ್ಲಿ ದಾಳಿ ನಡೆದಿತ್ತು. ಆದರೆ ಈ ಬಾರಿ ಸಂಸತ್ ಭವನದ ಒಳಭಾಗದಲ್ಲೇ ಈ ರೀತಿಯ ಘಟನೆ ನಡೆದಿದೆ. ದೇಶದಲ್ಲಿ ಅತಿ ಹೆಚ್ಚು ಭದ್ರತೆ ಇರುವುದೇ ಸಂಸತ್ ಭವನಕ್ಕೆ. ಇಲ್ಲಿಯೇ ಈ ರೀತಿಯ ಭದ್ರತಾ ಲೋಪವಾದರೆ ದೇಶದ ಭದ್ರತೆ ಹಾಗೂ ಸಾಮಾನ್ಯ ಜನರ ರಕ್ಷಣೆ ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡುವುದರಲ್ಲಿ ಆಶ್ಚರ್ಯವಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಂಸತ್‌ ಮೇಲಿನ ದಾಳಿ ಆಘಾತಕಾರಿ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

“ಇದೊಂದು ಸಾಮಾನ್ಯ ಘಟನೆ ಅಲ್ಲ. ಇಂತಹವು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶದ ಭದ್ರತೆಯನ್ನು ಬೆಟ್ಟು ಮಾಡಿ ತೋರಿಸಲು ನಾವೇ ದಾರಿ ಮಾಡಿಕೊಟ್ಟಂತೆ ಆಗುತ್ತದೆ. ಘಟನೆ ಬಗ್ಗೆ ಸೂಕ್ತ ತನಿಖೆ ನಡೆಯಬೇಕು. ದಾಳಿ ನಡೆಸಿದ ಯುವಕರನ್ನು ಸರಿಯಾದ ರೀತಿಯಲ್ಲಿ ವಿಚಾರಣೆ ಮಾಡಬೇಕು. ಇನ್ನು ಮುಂದಾದರೂ ಇಂತಹ ಕೃತ್ಯಗಳು ನಡೆಯದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X