ಚಿಕ್ಕಬಳ್ಳಾಪುರ | ಆ.20ರಂದು ದೇವರಾಜ್ ಅರಸು ಜನ್ಮದಿನಾಚರಣೆ; ಸಕಲ ಸಿದ್ಧತೆಗೆ ಡಿಸಿ ಡಾ.ಪಿ.ಎನ್.ರವೀಂದ್ರ ಸೂಚನೆ

Date:

ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ನಡೆದ ದೇವರಾಜು ಅರಸು ಅವರ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಬೇಕು. ಜನ ಪ್ರತಿನಿಧಿಗಳನ್ನು ಖುದ್ದಾಗಿ ಅಧಿಕಾರಿಗಳು ಶಿಷ್ಟಾಚಾರದ ರೀತಿ ಆಹ್ವಾನ ಮಾಡಬೇಕು. ಶಾಲಾ ಕಾಲೇಜುಗಳಲ್ಲಿ ಪೂರ್ವಭಾವಿಯಾಗಿ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಸನ್ಮಾನಿಸಬೆಕು. ದೇವರಾಜು ಅರಸು ನಿಗಮದಿಂದ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಲ್ಲಕ್ಕಿ, ಕುಂಭಮೇಳ ಮೆರವಣಿಗೆಯು ನಗರದ ಜೈ ಭೀಮ್ ಹಾಸ್ಟಲ್ ಆವಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ಭವನ ವರೆಗೆಗೂ ಸಾಗಲಿದೆ. ಇದಕ್ಕೆ ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜೊತೆಗೆ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಪೋಲಿಸ್ ಬಿಗಿ ಭದ್ರತೆ, ಆಹ್ವಾನ ಪತ್ರಿಕೆಗಳ ಮುದ್ರಣ, ವಿತರಣೆ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಇನ್ನಿತರೆ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಎಂ.ವಿ. ರಾಜೇಶ್ವರಿ, ದೇವರಾಜು ಅರಸು ನಿಗಮದ ಅಧಿಕಾರಿಗಳಾದ ಶಿವನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮುನಿರತ್ನಮ್ಮ, ಸಮುದಾಯದ ಮುಖಂಡರು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಎಂ.ವಿ. ರಾಜೇಶ್ವರಿ, ದೇವರಾಜು ಅರಸು ನಿಗಮದ ಅಧಿಕಾರಿಗಳಾದ ಶಿವನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮುನಿರತ್ನಮ್ಮ, ಸಮುದಾಯದ ಮುಖಂಡರು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸೆ. 15ಕ್ಕೆ ಪ್ರಜಾಪ್ರಭುತ್ವ ದಿನ; ಅಧಿಕಾರಿಗಳು ಪಾಲ್ಗೊಳ್ಳುವುದು ಕಡ್ಡಾಯ: ಸಂತೋಷ್ ಲಾಡ್

ರಾಜ್ಯ ಸರಕಾರವು ಸೆಪ್ಟೆಂಬರ್ 15 ರಂದು 'ಪ್ರಜಾಪ್ರಭುತ್ವ ದಿನ'ವನ್ನು ವಿಶೇಷವಾಗಿ ಆಚರಿಸಲು...

ರಾಯಚೂರು | ಒಳ ಮೀಸಲಾತಿ ಅನುಷ್ಠಾನಕ್ಕೆ ನಿರ್ಲಕ್ಷ್ಯ: ಸೆ.12ರಂದು ರಾಜ್ಯಾದ್ಯಂತ ತಮಟೆ ಚಳವಳಿ

ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ ತೀರ್ಪು...

ಮಂಡ್ಯ | ಸೆ.8ರಂದು ಪೂರ್ಣಚಂದ್ರ ತೇಜಸ್ವಿ-86 ರ ‘ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ’ ಕಾರ್ಯಕ್ರಮ

ಚಿತ್ರಕೂಟ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 'ಪೂರ್ಣಚಂದ್ರ...