ಉಡುಪಿ | ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Date:

ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿದ್ದು, ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಹಾಗೂ ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು.

- Advertisement -

ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...