ಉಡುಪಿ | ಮಲ್ಪೆಯಲ್ಲಿ ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು

Date:

ಕೇರಳ ಮೂಲದ ಮೀನುಗಾರ ರಥೀಶ್‌ (37) ರವರು ಮಲ್ಪೆ ಬಂದರಿನ ಸಮೀಪ ಸಮುದ್ರದಲ್ಲಿ ಆಕಸ್ಮಿಕವಾಗಿ ಬೋಟಿನಿಂದ ಬಿದ್ದು ಮೃತಪಟ್ಟ ಘಟನೆ ನ.7ರಂದು ನಡೆದಿದೆ.

- Advertisement -

ಮೃತ ಯುವಕನ ಮಾವ ಕಮರುದೀನ್‌ ಎಸ್‌ ನೀಡಿದ ಮಾಹಿತಿಯಂತೆ, ಮೃತ ರಥೀಶ್‌ ಕೇರಳದಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಈ ವರ್ಷ ತುಫಾನ್‌ ಕಾರಣದಿಂದ ಮಲ್ಪೆ ಬಂದರಿಗೆ ಬಂದಿದ್ದರು. ಅವರು IND-TN-15-MM-4121 ನಂಬರ್‌ನ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿದ್ದರು. ನ.7ರಂದು ಬೆಳಗ್ಗೆ ಸುಮಾರು 10.15ರ ಸುಮಾರಿಗೆ ಬೋಟು ಸಮುದ್ರಕ್ಕೆ ಹೊರಡುವ ವೇಳೆ ಆಕಸ್ಮಿಕವಾಗಿ ರಥೀಶ್‌ ಬೋಟಿನಿಂದ ಸಮುದ್ರಕ್ಕೆ ಬಿದ್ದರು. ಸಮಾಜ ಸೇವಕ ಈಶ್ವರ ಮಲ್ಪೆ ರವರು ತಕ್ಷಣ ಹುಡುಕಾಟ ನಡೆಸಿ ಸುಮಾರು 10.30ಕ್ಕೆ ರಥೀಶ್‌ರನ್ನು ಪತ್ತೆಹಚ್ಚಿದರು. ಅವರನ್ನು ಮೇಲಕ್ಕೆ ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿದರೂ ಯಾವುದೇ ಪ್ರತಿಕ್ರಿಯೆ ನಡೆಯಲಿಲ್ಲ. ನಂತರ ಅವರನ್ನು ತಕ್ಷಣ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ವೈದ್ಯರು ರಥೀಶ್‌ ಈಗಾಗಲೇ ಸಾವನ್ನಪ್ಪಿರುವುದಾಗಿ ದೃಢಪಡಿಸಿದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...