ಉಡುಪಿ | ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧ

Date:

ಕೇಂದ್ರ ಸರ್ಕಾರದ ಆದೇಶದ ಅನ್ವಯ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೂ ಸಹ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯಂತಹ ಪ್ರಕರಣಗಳು ವರದಿಯಾಗಿ, ಈ ಸಂಬಂಧ ಮಾನ್ಯ ಉಚ್ಛ ನ್ಯಾಯಾಲಯದಲ್ಲಿಯೂ ಸಹ ಪ್ರಕರಣಗಳು ದಾಖಲಾಗಿರುತ್ತದೆ. ನ್ಯಾಯಾಲಯದಿಂದ ಈ ಬಗ್ಗೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

- Advertisement -

ನ್ಯಾಯಾಲಯದ ಹಾಗೂ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆ ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯಲ್ಲಿ ತೊಡಗುವ ದೋಣಿಗಳ ಮೀನುಗಾರಿಕೆ ಪರವಾನಿಗೆ ಹಾಗೂ ದೋಣಿ ನೋಂದಣಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ಅಂತಹ ದೋಣಿಗಳಿಗೆ ಡೀಸೆಲ್ ವಿತರಣೆಯನ್ನು ನಿಲ್ಲಿಸಲಾಗುವುದು. ಇಂತಹ ಪ್ರಕರಣಗಳು ಪುನರಾವರ್ತಿಸಿದ್ದಲ್ಲಿ ಶಾಶ್ವತವಾಗಿ ಅಂತಹ ದೋಣಿಗಳ ನೋಂದಣಿಯನ್ನು ರದ್ದುಗೊಳಿಸಲು ಕ್ರಮ ಜರುಗಿಸಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...