ಉಡುಪಿ | ಹೊಸ ಯಾಂತ್ರೀಕೃತ ಮೀನುಗಾರಿಕೆ ದೋಣಿ ನಿರ್ಮಾಣಕ್ಕೆ ಸಾಧ್ಯತಾ ಪತ್ರ ಪಡೆಯಲು ಅರ್ಜಿ ಆಹ್ವಾನ

Date:

ಉಡುಪಿ ಜಿಲ್ಲೆಯ ಮೀನುಗಾರರು ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ / ಅನುಮತಿ ಪತ್ರ ನೀಡಲು ಸರ್ಕಾರಿ ಆದೇಶದನ್ವಯ ಅನುಮೋದನೆ ನೀಡಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

- Advertisement -

ಪ್ರೂಟ್ಸ್ ಐಡಿ ಕಡ್ಡಾಯವಾಗಿ ಹೊಂದಿರುವ, ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿರುವ ಹಾಗೂ ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸದಸ್ಯ ಕಾರ್ಯದರ್ಶಿ/ ಮೀನುಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ್ ಹಳೇ ಕಟ್ಟಡ, ಬನ್ನಂಜೆ ಉಡುಪಿ ಕಛೇರಿಯ ವಿಳಾಸಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮೀನುಗಾರಿಕೆ ಇಲಾಖೆ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...