ಉಡುಪಿ | ತೊಟ್ಟಂ ಚರ್ಚಿನ ಧರ್ಮಗುರುಗಳು, ಕ್ರೈಸ್ತ ಬಾಂಧವರಿಂದ ಗಣೇಶೋತ್ಸವದಲ್ಲಿ ಭಾಗಿ

Date:

Advertisements

ಸಮನ್ವಯ ಸರ್ವ ಧರ್ಮ ಸಮಿತಿ ತೊಟ್ಟಂ, ಹಾಗೂ ತೊಟ್ಟಂ ಸಂತ ಅನ್ನಮ್ಮ ದೇವಾಲಯ ಇವರ ವತಿಯಿಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ತೊಟ್ಟಂ ಇವರ ನೇತೃತ್ವದಲ್ಲಿ ಆಯೋಜಿಸಲಾದ ಗಣೇಶ ಚತುರ್ಥಿ ಕಾರ್ಯಕ್ರಮಕ್ಕೆ ಸೌಹಾರ್ದ ಭೇಟಿ ನೀಡಲಾಯಿತು.

ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಹಾಗೂ ಸಮನ್ವಯ ಸರ್ವ ಧರ್ಮ ಸಮಿತಿ ಅಧ್ಯಕ್ಷರಾದ ರಮೇಶ್ ತಿಂಗಳಾಯ ನಿಯೋಗದ ನೇತೃತ್ವ ವಹಿಸಿದ್ದು ಪರಸ್ಪರ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ವಿನಿಮಯ ಮಾಡಿಕೊಳ್ಳಲಾಯಿತು.
ಈ ವೇಳೆ ಮಾತನಾಡಿದ ಧರ್ಮಗುರು ವಂ|ಡೆನಿಸ್ ಡೆಸಾ ತೊಟ್ಟಂ ಪರಿಸರ ಸರ್ವ ಧರ್ಮಗಳ ಸೌಹಾರ್ದತೆಯ ತಾಣವಾಗಿದ್ದು ಪ್ರತಿವರ್ಷ ಸಮಿತಿಯ ಸದಸ್ಯರೊಡಗೂಡಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪರಸ್ಪರ ಸಹೋದರರಂತೆ ಭಾಗಿಯಾಗಿ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತೇವೆ. ಅಲ್ಲದೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರೂ ಕೂಡ ಚರ್ಚಿನ ವಿವಿಧ ಕಾರ್ಯಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರವನ್ನು ನೀಡುತ್ತಾರೆ ಈ ಮೂಲಕ ಸೌಹಾರ್ದತೆ ಕೇವಲ ಬಾಯಿ ಮಾತಿಗೆ ಸೀಮಿತವಾಗಿರದೆ ತಮ್ಮ ಕೃತಿಯ ಮೂಲಕ ತೋರ್ಪಡಿಸಿರುತ್ತಾರೆ. ಚರ್ಚಿನ ವಾರ್ಷಿಕ ಮಹೋತ್ಸವ ಹಾಗೂ ತೆನೆ ಹಬ್ಬದ ಸಂದರ್ಭದಲ್ಲಿ ಸಮಿತಿಯ ವೇದಿಕೆಯಲ್ಲಿ ಚರ್ಚಿನ ಕಾರ್ಯಕ್ರಮಕ್ಕೆ ಅನುವು ಮಾಡಿಕೊಡುವುದರ ಮೂಲಕ ತಮ್ಮ ಸಹಕಾರವನ್ನು ನೀಡಿಕೊಂಡು ಬಂದಿದ್ದು ಗಣಪತಿಯ ಆಶೀರ್ವಾದ ಇಡೀ ತೊಟ್ಟಂ ಪರಿಸರದ ಮೇಲೆ ಇರಲಿ ಎಂಬುದು ನಮ್ಮೆಲ್ಲರ ಪ್ರಾರ್ಥನೆಯಾಗಲಿ ಎಂದರು.

ಈ ವೇಳೆ ತೊಟ್ಟಂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಲೆಸ್ಲಿ ಆರೋಝಾ, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, ಸಂತ ಅನ್ನಮ್ಮ ಕಾನ್ವೆಂಟಿನ ಸಿಸ್ಟರ್ ಸುಷ್ಮಾ, ಸಿಸ್ಟರ್ ಶಾಲಿನಿ, ಸಿಸ್ಟರ್ ಲೂಸಿ, ಅಂತರ್ ಧರ್ಮೀಯ ಸಂವಾದ ಆಯೋಗದ ಸಂಚಾಲಕರಾದ ಆಗ್ನೆಲ್ ಫೆರ್ನಾಂಡಿಸ್, ಪದಾಧಿಕಾರಿಗಳಾದ ಓನಿಲ್ ಡಿಸೋಜಾ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಕೆ ಸಾಲಿಯಾನ್, ಕಾರ್ಯಾಧ್ಯಕ್ಷರಾದ ಯತಿರಾಜ್ ಸಾಲಿಯಾನ್, ಪ್ರಧಾನ ಕಾರ್ಯದರ್ಶಿ ಯೋಗಿಶ್ ಕುಮಾರ್, ಕೋಶಾಧಿಕಾರಿ ರಮೇಶ್ ತೊಟ್ಟಂ, ಇತರ ಪದಾಧಿಕಾರಿಗಳಾದ ರಮೇಶ್ಮ ದಯೇಶ್ ಕಾಂಚನ್, ನವೀನ್ ಕುಂದರ್, ನವೀನ್ ಬೈಲಕೆರೆ, ಶ್ರೀಧರ ತೊಟ್ಟಂ, ಸಂತೋಷ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X