ಮಲ್ಪೆ ಮಹಿಳೆ ಮೇಲೆ ಹಲ್ಲೆ; ಘಟನೆ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?

Date:

ಮೀನು ಕದ್ದ ಆರೋಪದ ಮೇಲೆ ಮಲ್ಪೆ ಮಹಿಳೆ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಲಕ್ಕೀಬಾಯಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದು, ʼನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಮೀನು ಕದ್ದಿದ್ದು ಎಂದು ಹೇಳಿ ಅವರೆಲ್ಲ ಹೊಡೆದರು. ನನಗೆ ಅವರ ಮೇಲೆ ಏನೂ ದ್ವೇಷವಿಲ್ಲ. ಅವರಿಗೆ ನನ್ನ ಮೇಲೆ ದ್ವೇಷವಿಲ್ಲ. ಅವರನ್ನು ಬಂದರಿನಲ್ಲಿ ನಾನು ನೋಡಿ ಪರಿಚಯವಿದೆʼ ಎಂದು ಹೇಳಿದರು.

- Advertisement -

ಸಂತ್ರಸ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ನಾನು ಮಲ್ಪೆಯಲ್ಲಿ ಆರೇಳು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ‌. ಯಾರಿಗೆ ಏನೂ ಶಿಕ್ಷೆ ಕೊಡುವುದು ಬೇಡ. ಅವರ ಪಾಡಿಗೆ ಅವರು ನಮ್ಮ ಪಾಡಿಗೆ ನಾವು ಇರುತ್ತೇವೆ. ಈ ಘಟನೆಯಾದ ಮೇಲೆ ನಾನು ಬಂದರಿಗೆ ಹೋಗಿಲ್ಲ. ಮೊನ್ನೆಯ ಘಟನೆ ಬಗ್ಗೆ ಹೇಳಲು ಏನೂ ಇಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಅವರು ಮೇಲಿಂದಲೇ ಕಂಪ್ಲೇಂಟ್ ಕೊಡಲು ಹೇಳಿ, ಕಂಪ್ಲೇಂಟ್ ಕೊಡಲು ಬನ್ನಿ ಎಂದು ಕರೆದುಕೊಂಡು ಹೋದರು. ಅವರು ಹೇಳಿದ್ದಕ್ಕೆ ನಾನು ಸಹಿ ಮಾಡಿದ್ದೇನೆ ಅಷ್ಟೇ. ಘಟನೆಯಾದ ರಾತ್ರಿಯೇ ರಾಜಿ ಮಾಡಿಕೊಂಡಿದ್ದೇವೆ. ಕೇಸ್ ಮಾಡುವುದು ಬೇಡವೆಂದು ಮಾತನಾಡಿ ಬಂದಿದ್ದೆವು. ಆಮೇಲೆ ಮೇಲಿಂದ ಇದು ಆಯ್ತು” ಎಂದು ಹೇಳಿದರು.

“ಯಾರಿಗೂ ಶಿಕ್ಷೆ ಆಗೋದು ಬೇಡ ಅವರ ಪಾಡಿಗೆ ಅವರು ನಮ್ಮ ಪಾಡಿಗೆ ನಾವು ದುಡಿದು ತಿನ್ನುತ್ತೇವೆ. ಇನ್ನು ಇಲ್ಲಿ ಕೆಲಸ ಮಾಡೋದು ಕಷ್ಟ ಊರಿಗೆ ಹೋಗುತ್ತೇನೆ. ಮೀನುಗಾರರು ನನಗೆ ಸಹಾಯ ಮಾಡಿದ್ದಾರೆ. ಈಗ ಇರೋಕೆ ಒಂಥರಾ ಮುಜುಗರವಾಗುತ್ತದೆ. ಅದುಬಿಟ್ಟರೆ ನನಗೆ ಬೇರೆ ಏನೂ ತೊಂದರೆ ಕೊಟ್ಟಿಲ್ಲ. ಸ್ವಲ್ಪ ಮೀನು ತೆಗೆದದ್ದು ಹೌದು. ಬಂದರಿನಲ್ಲಿ ಆ ಥರ ತೆಗೆಯೋದು ಸಹಜ.‌ ಎಲ್ಲರೂ ಹಾಗೆ ಮಾಡುತ್ತಾರೆ. ಆಗರೆ ಆವತ್ತು ಏನೋ ನನ್ನ ಗ್ರಹಚಾರ ಸರಿ ಇರಲಿಲ್ಲ. ಏನೂ ಮಾಡೋಕೆ ಆಗಲ್ಲ” ಎಂದು ಹೇಳಿದರು.

ಕರಾವಳಿ ಭಾಗದಲ್ಲಿ ಈ ಹಿಂದೆ ವಿದ್ಯಾರ್ಥಿಯೊಬ್ಬ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಶಾಸಕರು ಇದನ್ನು ಮತೀಯ ಬಣ್ಣಕ್ಕೆ ತಿರುಗಿಸಿ, ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಆತನ ನಿಗೂಢ ನಾಪತ್ತೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.‌ ಮಂಗಳೂರಿನ ಫರಂಗಿಪೇಟೆಯ ಅಂಗಡಿ ಮುಂಗಟ್ಟನ್ನು ಬಂದ್ ಮಾಡಬೇಕೆಂದು ಹಿಂದುತ್ವ ಸಂಘಟನೆಗಳು ಕರೆ ಕೊಟ್ಟಿದ್ದವು. ಎಲ್ಲರೂ ಜಾತಿ ಧರ್ಮವೆನ್ನದೆ ಅಂಗಡಿ ಮುಂಗಟ್ಟನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಮುಸ್ಲಿಮರು ಹೆಚ್ಚಾಗಿರುವ ಫರಂಗಿಪೇಟೆಗೆ ಕೋಮು ಬಣ್ಣ ಹಚ್ಚಲು ಹಾಗೂ ಇಡೀ ಊರಿಗೆ ಕ್ರಿಮಿನಲ್ ಹಣೆಪಟ್ಟಿ ಕಟ್ಟಲು ಮುಂದಾಗಿದ್ದ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನೂ ಕೊಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಪೊಲೀಸರು ಅಮಾನತು

ಪೊಲೀಸ್ ಇಲಾಖೆಗೆ ಎಲ್ಲ ಸಂಘಟನೆಯವರು ಸೇರಿಕೊಂಡು ಒಂದು ದಿನಾಂಕ ಹೇಳಿದ್ದೇವೆ. ಯುವಕನ ಸುಳಿವನ್ನು ಪತ್ತೆಹಚ್ಚಬೇಕು, ಇಲ್ಲದಿದ್ದರೆ ಮುಂದಿನ ದಿನದಲ್ಲಿ ಇಡೀ ರಾಜ್ಯವ್ಯಾಪಿ ನಾವು ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆಂದು ಶಾಸಕ ಹರೀಶ್ ಪೂಂಜಾ ಪೊಲೀಸರನ್ನು ಬೆದರಿಸಿದ್ದರು.

ಇದೀಗ ಮಲ್ಪೆಯಲ್ಲಿ ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಅವಮಾನಿಸಿದರೂ ಕೂಡ ಅಲ್ಲಿಯ ಯಾವುದೇ ಜನಪ್ರತಿನಿಧಿಗಳಾಗಲೀ ಸಂಘಪರಿವಾರದವರಾಗಲಿ, ಬಿಜೆಪಿ ಮುಖಂಡರಾಗಲಿ ಆ ಕುರಿತು ಯಾವುದೇ ಚಕಾರವೆತ್ತಿಲ್ಲ. ʼಬೇಟಿ ಬಚಾವೋ, ಬೇಟಿ ಪಡಾವೋʼ ಎಂದು ಪುಂಗುವ ಬಿಜೆಪಿಗರು‌, ಮೀನು ಕದ್ದ ಆರೋಪದ ಮೇಲೆ ಮಲ್ಪೆಯಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬೀದಿಗಿಳಿಯುವುದಿರಲಿ, ನಾಲಿಗೆಯನ್ನು ಹೊರಚಾಚಲು ತುಟಿಗಳನ್ನೂ ಬಿಚ್ಚುತ್ತಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...