ಮಾಲೂರು | ಮರುಮತ ಎಣಿಕೆಗಾಗಿ ಹೈಕೋರ್ಟ್‌ ಮೊರೆ ಹೋದ ಬಿಜೆಪಿ ಅಭ್ಯರ್ಥಿ

Date:

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ವಿರುದ್ಧ 248 ಮತಗಳ ಅಂತರದಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರು ಮತ ಎಣಿಕೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ಅವಕಾಶ ಕೋರಿ ಮಂಗಳವಾರ ಹೈಕೋರ್ಟ್‌ ಮೊರೆ ಹೋಗಿದ್ದಾರೆ. 

- Advertisement -

“ಮೇ 13ರಂದು ನಡೆದ ಮತ ಎಣಿಕೆ ಮುಗಿದ ಬಳಿಕ ಚುನಾವಣಾಧಿಕಾರಿಗಳು ನನಗೆ ಕರೆ ಮಾಡಿ, ʼನೀವು ಗೆಲುವು ಸಾಧಿಸಿದ್ದೀರಿʼ ಎಂದು ತಿಳಿಸಿದ್ದರು. ಬಳಿಕ ಕೆ.ವೈ ನಂಜೇಗೌಡ 248 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ ಎಂದು ಘೋಷಿಸಿದರು. ಇದು ಸಂಶಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮರು ಮತ ಎಣಿಕೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದೇನೆ” ಎಂದು ಮಂಜುನಾಥಗೌಡ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...