ಮಾಲೂರು ಚುನಾವಣಾ ಫಲಿತಾಂಶ ತಕರಾರು ಅರ್ಜಿ: ಕೋಲಾರದಲ್ಲಿ ಸಿಗದ ದಾಖಲೆ; ಮಾಲೂರಲ್ಲಿ ಪತ್ತೆ!

Date:

Advertisements

2023ರ ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಸಂಬಂಧ‌ ಹೈಕೋರ್ಟಿಗೆ ಸಲ್ಲಿಸಬೇಕಾದ ದಾಖಲೆಗಳು ಇದೀಗ ಮಾಲೂರಿನ ತಾಲೂಕು ಕಚೇರಿಯ ಖಜಾನೆಯಲ್ಲಿ ಪತ್ತೆಯಾಗಿವೆ.

ಮಾಲೂರು ಕ್ಷೇತ್ರದ ವಿಧಾನಸಭಾ ಚುನಾವಣಾ ಫಲಿತಾಂಶ ಸಂಬಂಧ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದರು. ಇವಿಎಂ ಭದ್ರತಾ ಕೊಠಡಿಯಲ್ಲಿರುವ ಕೆಲವೊಂದು ಮಹತ್ವದ ದಾಖಲೆಗಳನ್ನು ಹೈಕೋರ್ಟ್ ಗೆ ಸಲ್ಲಿಸಬೇಕಾಗಿರುವ ಕಾರಣ ಕೋರ್ಟ್ ಆದೇಶದಂತೆ ಮಂಗಳವಾರ ಕೋಲಾರದ ಡಿಸಿ ಕಚೇರಿ ಬಳಿಯಿರುವ ಇವಿಎಂ ಭದ್ರತಾ ಕಚೇರಿಯನ್ನು ಜಿಲ್ಲಾಧಿಕಾರಿ ಅಕ್ರಂ ಪಾಷಾ ನೇತೃತ್ವದಲ್ಲಿ ತೆರೆಯಲಾಯಿತು. ಈ ವೇಳೆ ಮಾಲೂರು ಶಾಸಕ ಕೆ ವೈ ನಂಜೇಗೌಡರನ್ನು ಹೊರತುಪಡಿಸಿ ಉಳಿದ ಎಲ್ಲಾ ಪಕ್ಷದ ಬಹುತೇಕ ಅಭ್ಯರ್ಥಿಗಳು ಹಾಜರಿದ್ದರು.

KOLAR 2

ಇನ್ನು ಅಭ್ಯರ್ಥಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಮಧ್ಯಾಹ್ನದ ವೇಳೆಗೆ ಇವಿಎಂ ಭದ್ರತಾ ಕೊಠಡಿಯನ್ನು ತೆರೆದು ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಶೀಲಿಸಲಾಯಿತು.

Advertisements

ಆದ್ರೆ 17 ಸಿ ಫಾರಂ ಸೇರಿದಂತೆ ಕೋರ್ಟ್ ಗೆ ಸಲ್ಲಿಸಬೇಕಾದ ಮಹತ್ವದ ದಾಖಲೆಗಳು ಇಲ್ಲಿ ಲಭ್ಯವಾಗಲಿಲ್ಲ. ಕೋಲಾರದಲ್ಲಿ ಸಿಗದ ಕಾರಣ ಮಾಲೂರು ತಾಲೂಕು ಕಛೇರಿಯಲ್ಲಿರುವ ಖಜಾನೆಯಲ್ಲಿ ಪರಿಶೀಲನೆ ಮಾಡಲು ಅಲ್ಲಿನ ತಹಶೀಲ್ದಾರ್ ಅವರಿಗೆ ಸೂಚಿಸಲಾಯಿತು. ಅದರಂತೆ ಸಂಜೆ ವೇಳೆಗೆ ಮಾಲೂರು ಖಜಾನೆಯಲ್ಲಿ ಕೋರ್ಟಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು ದೊರೆತಿರುವುದಾಗಿ ವರದಿಯಾಗಿದೆ.

ಕೋಲಾರದಲ್ಲಿ ಪರಿಶೀಲನೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಕೋರ್ಟ್ ಕೇಳಿರುವ ದಾಖಲೆಗಳು ಇಲ್ಲಿ ಲಭ್ಯವಾಗಿಲ್ಲ. ವಿವಿಪ್ಯಾಟ್, ಇವಿಎಂ ದಾಖಲೆಗಳಿದ್ದು, ಉಳಿದ ದಾಖಲೆಗಳು ಮಾಲೂರಿನ ಖಜಾನೆಯಲ್ಲಿರಬಹುದು. ನಮಗೆ ಲಭ್ಯವಿರುವ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಇಡುತ್ತೇವೆ” ಎಂದಿದ್ದರು.

ಕೋಲಾರ ಇವಿಎಂ ಭದ್ರತಾ ಕೊಠಡಿಯಲ್ಲಿ ಅಗತ್ಯ ದಾಖಲೆಗಳು ಸಿಗದಿದ್ದಕ್ಕೆ ಮಾಜಿ ಶಾಸಕ, ದೂರುದಾರ ಕೆ ಎಸ್ ಮಂಜುನಾಥ ಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. “ಮರುಮತ ಎಣಿಕೆಗೆಗೆ ಅಗತ್ಯವಿದ್ದ ದಾಖಲೆಗಳು ಚುನಾವಣೆ ಫಲಿತಾಂಶದ ದಿನದಂದೇ ಲಭ್ಯವಿತ್ತು. ಆದರೆ ಈಗ ಇಲ್ಲ ಎಂದರೆ ಏನು ಅರ್ಥ. ಇದೇನು ಹುಡುಗಾಟವಾ? ಮರು ಮತಎಣಿಕೆ ಆಗಬೇಕು ಎನ್ನುವುದಷ್ಟೇ ನನ್ನ ಉದ್ದೇಶ. ನ್ಯಾಯ ಸಿಗುತ್ತದೆ ಎಂದು ಆಶಾವಾದಿಯಾಗಿಯೇ ಇರುತ್ತೇನೆ” ಎಂದು ತಿಳಿಸಿದ್ದರು.

ಸಿಸಿಟಿವಿ ದೃಶ್ಯಾವಳಿ, 12 ಸಿ ಫಾರ್ಮ್‌ಗಳನ್ನು ನೀಡುವಂತೆ ನ್ಯಾಯಾಲಯ ಆದೇಶ ಮಾಡಿತ್ತು. ಆದರೂ ಒಂದು ವರ್ಷದಿಂದ ಆಟ ಆಡಿಸುತ್ತಿದ್ದಾರೆ. ಹಲವು ಫಾರಂಗಳಲ್ಲಿ ನಮ್ಮ ಏಜೆಂಟರ ಸಹಿಗಳೇ ಇಲ್ಲ. ಸಿಸಿಟಿವಿ ದೃಶ್ಯಾವಳಿ ದೊರೆತರೆ ನಮ್ಮ ಏಜೆಂಟರು ಇದ್ದರೋ? ಇಲವೋ ಎನ್ನುವುದು ತಿಳಿಯುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ಬೆಳವಣಿಗೆ?

2023ರ ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಾಲಿ ಶಾಸಕ ನಂಜೇಗೌಡ 50,955 ಮತ ಪಡೆದಿದ್ದರೆ, ಬಿಜೆಪಿಯ ಪ್ರತಿಸ್ಪರ್ಧಿ ಮಂಜುನಾಥಗೌಡ 50,707 ಮತ ಗಳಿಸಿದ್ದರು. 248 ಕಡಿಮೆ ಮತಗಳ ಅಂತರದಿಂದ ಪರಾಜಿತರಾದ ಹಿನ್ನೆಲೆಯಲ್ಲಿ ಮಂಜುನಾಥ್‌ ಗೌಡ ಮತ್ತು ಬೆಂಬಲಿಗರು ಮರು ಮತ ಎಣಿಕೆಗೆ ಒತ್ತಾಯ ಮಾಡಿದ್ದರೂ ಅಂದಿನ ಜಿಲ್ಲಾಧಿಕಾರಿ, ಮರು ಎಣಿಕೆಗೆ ಅವಕಾಶ ನೀಡದೆ ಲಾಟರಿ ಮೂಲಕ ಆಯ್ಕೆ ಮಾಡಿಕೊಂಡು ಮತ ತಾಳೆ ಮಾಡಿದ್ದರು. ಇದನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ಮಂಜುನಾಥ್‌ಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದನ್ನು ಓದಿದ್ದೀರಾ? ಕೋಲಾರ | ಮಾಲೂರು ಶಾಸಕರಿಗೆ ತಲೆನೋವಾದ ಹೈಕೋರ್ಟ್‌ ಆದೇಶ!

ಇನ್ನು ಅಭ್ಯರ್ಥಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಮಧ್ಯಾಹ್ನದ ವೇಳೆಗೆ ಇವಿಎಂ ಭದ್ರತಾ ಕೊಠಡಿಯನ್ನು ತೆರೆದು ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಶೀಲಿಸಲಾಯಿತು. ಆದ್ರೆ 17 ಸಿ ಫಾರಂ ಸೇರಿದಂತೆ ಕೋರ್ಟ್ ಗೆ ಸಲ್ಲಿಸಬೇಕಾದ ಮಹತ್ವದ ದಾಖಲೆಗಳು ಇಲ್ಲಿ ಲಭ್ಯವಾಗಲಿಲ್ಲ.

ಕೋಲಾರದಲ್ಲಿ ಸಿಗದ ಕಾರಣ ಮಾಲೂರು ತಾಲೂಕು ಕಛೇರಿಯಲ್ಲಿರುವ ಖಜಾನೆಯಲ್ಲಿ ಪರಿಶೀಲನೆ ಮಾಡಲು ಅಲ್ಲಿನ ತಹಶೀಲ್ದಾರ್ ಅವರಿಗೆ ಸೂಚಿಸಲಾಯಿತು. ಅದರಂತೆ ಮಾಲೂರು ಖಜಾನೆಯಲ್ಲಿ ಕೋರ್ಟ್ ಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು ದೊರೆತವು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X