ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

Date:

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್ ಮೆರವಣಿಗೆ ನಡೆಸಿ ವರ್ಗಾ ಕಂಪನಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ನಮಗೆ ಕೆಲಸ ನೀಡಬೇಕು, ಇಲ್ಲದಿದ್ದರೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ.

- Advertisement -

ವರ್ಗಾ ಅಟ್ಯಾಚ್ಮೆಂಟ್ ಪ್ರೈ . ಲಿಮಿಟೆಡ್ ನಲ್ಲಿ ಸುಮಾರು 81 ಖಾಯಂ ಕಾರ್ಮಿಕರು 19 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರೆಲ್ಲರೂ ಮಾಲೂರು, ಕೆಜಿಎಫ್, ಕೋಲಾರ, ಬಂಗಾರಪೇಟೆ, ನರಸಾಪುರ, ಮಾಸ್ತಿ ಮತ್ತು ಮುಳಬಾಗಿಲಿನವರು. ಈ ಕಂಪನಿಯು 19 ವರ್ಷಗಳಿಂದ ಬುಲ್ಡೋಜರ್ ಗಳಿಗೆ ಸಂಬಂಧಿಸಿದ ಬಿಡಿಭಾಗಗಳನ್ನು ತಯಾರಿಸುತ್ತಿದೆ ಮತ್ತು ಯುಎಸ್, ನ್ಯೂಜಿಲೆಂಡ್, ನೆದರ್‌ಲ್ಯಾಂಡ್‌, ಯುಕೆ, ನಾರ್ವೆ ಇತ್ಯಾದಿಗಳಿಗೆ ರಫ್ತು ಮಾಡುತ್ತಿದೆ. ಆದಾಗ್ಯೂ, ಈ ಕಾರ್ಮಿಕರಿಗೆ ಸರಿಯಾದ ವೇತನ ಇಲ್ಲ. ವರ್ಗಾ ಅಟ್ಯಾಚ್‌ಮಂಟ್ ಯೂನಿಟ್ -1 ರಿಂದ ಗಳಿಸಿದ ಲಾಭದಿಂದ ಈ ಕಂಪನಿಯ ಆಡಳಿತ ಮಂಡಳಿಯು ಇನ್ನೂ ಎರಡು ಹೊಸ ಘಟಕಗಳನ್ನು (ಯೂನಿಟ್ -2 ಮತ್ತು ಯೂನಿಟ್ -3) ತೆರೆಯಲು ಸಾಧ್ಯವಾಯಿತು, ಇದನ್ನು ಈ ಕಂಪನಿಯ ಕಾರ್ಮಿಕರು ಸಕ್ರಿಯಗೊಳಿಸಿದರು. ಆದರೆ ಇದೀಗ ಕಂಪನಿ 81 ಕಾರ್ಮಿಕರನ್ನು ಹೊರಹಾಕಿರುವುದು ಅಷ್ಟೂ ಕಾರ್ಮಿಕರ ಜೀವನವನ್ನು ಸಂಕಷ್ಟಕ್ಕೆ ಈಡು ಮಾಡಿದಂತಾಗಿದೆ ಎಂದು ಕಾರ್ಮಿಕರು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
IMG 20250822 WA0005

ಸಿಐಟಿಯು ತಾಲೂಕು ಸಂಚಾಲಕ ವೀರಭದ್ರ ಮಾತನಾಡಿ, “ನಿರಂತರವಾಗಿ ಕಾನೂನು ರೀತಿಯಲ್ಲಿ ನಾವು ಪ್ರತಿಭಟನೆ ಮಾಡಕತ್ತಿದ್ದೇವೆ, ಮಾಲೂರು ಶಾಸಕ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೂ ಸಹ ತಂದಿದ್ದೇವೆ. ವರ್ಗಾ ಕಂಪನಿ 81 ಕಾರ್ಮಿಕರನ್ನು ಹೊರ ಹಾಕಿದ್ದು ಸರಿಯಲ್ಲ ಇದರ ವಿರುದ್ಧ ನಾವು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇವೆ” ಎಂದರು.

ಇದನ್ನೂ ಓದಿ: ಕೋಲಾರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮ ದಿನಾಚರಣೆ

ವರ್ಗಾ ಕಂಪನಿಯ ಕಾರ್ಮಿಕ ಮಾತಾನಾಡಿ, “ನಾವು ರಾತ್ರಿ ಹಗಲು ಕೆಲಸ ಮಾಡಿ ಕಂಪನಿ ಬೆಳೆಸಿದ್ದೇವೆ. ಆದ್ರೆ ವರ್ಗಾ ನ ವೀರ್ಯ ಅಂತ ಮಾಡಿ ನಮಗೆ ನೋಟಿಸ್ ನೀಡಿ ಹೊರಹಾಕಿದ್ದಾರೆ, ನಾವು ನಮ್ಮ ಬೆವರು ಸುರಿಸಿ ಕೆಲಸ ಮಾಡಿದ್ದೇವೆ, ನಮಗೆ ನ್ಯಾಯ ಸಿಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡ್ತೇವೆ” ಎಂದು ತಿಳಿಸಿದರು.

20 ವರ್ಷದಿಂದ ದುಡಿದ ಕಾರ್ಮಿಕರನ್ನೂ ಹೊರ ಹಾಕಿದ್ದು ಸರಿಯಲ್ಲ. ಕೂಡಲೇ ಶಮಾಲೂರು ಶಾಸಕರು ಹಾಗೂ ಕೋಲಾರ ಜಿಲ್ಲಾಧಿಕಾರಿಗಳು ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ಕೆಲಸ ಕೊಡಿಸಬೇಕು, ನಾವು ಸರ್ಕಾರ ಹಾಗೂ ಕಾರ್ಮಿಕ ಸಚಿವರ ಗಮನಕ್ಕೆ ತಂದಿದ್ದೇವೆ ಕೂಡಲೇ ಸಮಸ್ಯೆ ಬಗೆಹರಿಸಿ ಎಂದು ಹೇಳಿದ ಸಿಐಟಿಯು ರಾಜ್ಯ ಮುಖಂಡ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...