ಶ್ರಾವಣ ಮಾಸದ ನಿಮಿತ್ಯವಾಗಿ ಬಟ್ಟೆ ತೊಳೆಯಲೆಂದು ಭೀಮಾ ನದಿಗೆ ಇಳಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ನಡೆದಿದೆ.
ಮೃತರು ಶಶಿಕಾಂತ ಶಂಕರ ಡಾಂಗೆ (38) ಎಂದು ಗುರುತಿಸಲಾಗಿದೆ.
ಗ್ರಾಮದ ಬಳಿ ಇರುವ ಭೀಮಾ ನದಿಗೆ ಶುಕ್ರವಾರ ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದು ಹೊರ ಬರಲಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.