ಚಿಕ್ಕಮಗಳೂರು | ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದ ಪತಿ

Date:

ಕುಡಿದ ಮತ್ತಿನಲ್ಲಿ ಪತಿಯೇ ತನ್ನ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ.

- Advertisement -

ಪದ್ಮಾಕ್ಷಿ(40) ಮೃತ ದುರ್ದೈವಿ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಒಬ್ಬ ಮಗಳು ವಿದ್ಯಾಭ್ಯಾಸ ಮೊಟಕುಗೊಳಿಸಿ ಮನೆಯಲ್ಲಿಯೇ ಇದ್ದಾರೆ. ಇನ್ನೋರ್ವ ಮಗಳು ಬೇಲೂರಿನ ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಹೈಸ್ಕೂಲ್ ವ್ಯಾಸಾಂಗ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರದಂದು ತಮ್ಮ ಮಗಳು ಸಂಬಂಧಿಕರ ಮನೆಗೆ ತೆರಳಿದ್ದು, ಮನೆಯಲ್ಲಿ ಗಂಡ ಹೆಂಡತಿ ಇಬ್ಬರೇ ಇದ್ದರೆಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪದ್ಮಾಕ್ಷಿ ಶನಿವಾರ ಬೆಳಿಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಬಿದ್ದಿದ್ದು, ಅಕ್ಕಪಕ್ಕದ ಮನೆಯವರು  ಗಮನಿಸಿ ಪರಿಶೀಲಿಸಿದಾಗ ಆಕೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆಕೆಯ ಪತಿ ಚಂದ್ರು ಮನೆಯೊಳಗೆ ಮಲಗಿರುವುದು ಕಂಡುಬಂದಿತ್ತು. ಪತಿ ಚಂದ್ರು ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು ಮನೆಯಿಂದ ಹೊರಗೆ ತಳ್ಳಿದ್ದಾನೆ ಎನ್ನಲ್ಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ವಿತರಣೆ: ಚಿಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೋಣಿಬೀಡು ಪೊಲೀಸರು ಪರಿಶೀಲನೆ ನಡೆಸಿದ್ದು, ಮನೆ ಹೊರಗೆ ಬಿದ್ದಿದ್ದ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಳಿಕ ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...