ಬೀದರ್ | ತಡವಾಗಿದ್ದಕ್ಕೆ ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ವ್ಯಕ್ತಿ

Date:

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್‌ ಚಲಾಯಿಸಿಕೊಂಡು ಹೋಗಿದ್ದು, ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ಬೀದರ್‌ ಜಿಲ್ಲೆಯ ಔರಾದ ಪಟ್ಟಣದಲ್ಲಿ ಜರುಗಿದೆ.

- Advertisement -

ಔರಾದ ತಾಲೂಕಿನ ಕರಂಜಿ (ಕೆ) ಗ್ರಾಮದ ಯಶಪ್ಪ ಸೂರ್ಯವಂಶಿ ಎನ್ನುವ ವ್ಯಕ್ತಿ ಬೆಳಿಗ್ಗೆಯಿಂದ ನಿಲ್ದಾಣದಲ್ಲಿ ಕುಳಿತರೂ ತನ್ನ ಊರಿಗೆ ಹೋಗಲು ಬಸ್ ಸಿಗಲಿಲ್ಲ. ಕಾದು ಕಾದು ಸುಸ್ತಾಗಿದ್ದ ಯಶಪ್ಪ ನಿಲ್ದಾಣದಲ್ಲಿ ನಿಲ್ಲಿಸಿದ ಔರಾದ -ಬೀದರ ಬಸ್‌ ಏರಿ ತಾನೇ ಚಲಾಯಿಸಿಕೊಂಡು ಹೋಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕ ನಿಲ್ದಾಣದಲ್ಲಿ ಎಂಟ್ರಿ ಮಾಡಿಸಲು ಹೋಗಿದ್ದ ಈ ಘಟನೆ ನಡೆದಿದೆ.

ಯಶಪ್ಪ ಬಸ್ ಚಲಾಯಿಸಿಕೊಂಡು ಹೋಗುವಾಗ ಪ್ರಯಾಣಿಕರು ಗಾಬರಿಗೊಂಡು ಕಿರುಚಾಡಿ ಕೊಂಡಿದ್ದಾರೆ. ಜೀಪ್ ಒಂದಕ್ಕೆ ಡಿಕ್ಕಿ ಹೊಡೆದ ನಂತರ ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಸದ್ಯ, ಬಸ್‌ನಲ್ಲಿರುವ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಸಾರ್ವಜನಿಕರ ಸಹಾಯದಿಂದ ಯಶಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...