‘ಮನಸ್ಸಾಕ್ಷಿ ಮದುವೆ’ ಪ್ರಮಾಣವಚನ ಸ್ವೀಕರಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂತರ್ಜಾತಿ ಜೋಡಿ

Date:

ಇತ್ತೀಚೆಗೆ ಅಂತರ್‌ ಜಾತಿ ಜೋಡಿಯೊಂದು ‘ಮನಸ್ಸಾಕ್ಷಿ ಮದುವೆ’ ಪ್ರಮಾಣವಚನ ಸ್ವೀಕರಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಜೂನ್ 12ರಂದು ಗುರುವಾರ ಹಾಸನದ ಪಾಲಿಕ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಅಂತರ್ಜಾತಿ ಸರಳ ವಿವಾಹ ಸಮಾರಂಭದಲ್ಲಿ ವೀಕ್ಷಿತಾ ಮತ್ತು ಲೋಕಕಿರಣ್ ಇಬ್ಬರೂ ‘ಮನಸ್ಸಾಕ್ಷಿ ಮದುವೆ’ ಪ್ರಮಾಣವಚನ ಸ್ವೀಕರಿಸಿದರು.

- Advertisement -

ವೀಕ್ಷಿತಾ ಚನ್ನರಾಯಪಟ್ಟಣ ಮೂಲದವರಾಗಿದ್ದು, ಲೋಕಕಿರಣ್ ಹಾಸನದವರಾಗಿದ್ದಾರೆ. ಪರಸ್ಪರ ಪ್ರೇಮಿಸುತ್ತಿದ್ದ ಈ ಜೋಡಿ ಬಾಳ ಸಂಗಾತಿಗಳಾಗಲು ನಿಶ್ಚಯಿಸಿ ಅಂತರ್ ಜಾತಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ತೀರ್ಮಾನಿಸಿದ್ದರು. ಈ ಸರಳ ಮದುವೆ ಸಮಾರಂಭದಲ್ಲಿ ವಧು ವರರಿಬ್ಬರಿಗೂ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ರೂಪಾ ಹಾಸನ ‘ಮನಸ್ಸಾಕ್ಷಿ ಮದುವೆ ಪ್ರಮಾಣ ವಚನ’ ಬೋಧಿಸುವ ಮೂಲಕ ಶುಭ ಹಾರೈಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಸಾಂವಿಧಾನಿಕ ಪ್ರತಿಜ್ಞೆಯಡಿ ಮದುವೆ; ಸ್ಥಳೀಯರ ಚಿತ್ತ, ಹೊಸಮನಿ ಕುಟುಂಬದ ಸುತ್ತ

ಸಂಸ್ಕೃತಿ ಚಿಂತಕರಾದ ಪ್ರೊ. ಕಾಳೇಗೌಡ ನಾಗವಾರ ಮಾತನಾಡಿ, “ಇಂತಹ ಸರಳ ಮದುವೆಗಳು ಎಲ್ಲರಿಗೂ ಮಾದರಿಯಾಗಬೇಕು. ದುಬಾರಿ ವೆಚ್ಚದ ಆಡಂಬರದ ಮದುವೆ ಸಮಾರಂಭಗಳು ಸಮಾಜದಲ್ಲಿ ಅಸಮಾನತೆಗಳನ್ನು ಸೃಷ್ಟಿಸುತ್ತವೆ” ಎಂದರು.

ಇನ್ನು ಅಂತರ್ಜಾತಿ ವಿವಾಹದ ಬಗ್ಗೆ ಮಾತನಾಡಿದ ಸಿಪಿಐ(ಎಂ) ಮುಖಂಡ ಧರ್ಮೇಶ್, “ಸಮಾಜದಲ್ಲಿ ಇಂತಹ ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಪ್ರಜ್ಞಾವಂತರಾದ ನಾವುಗಳು ಮತ್ತು ಸಮಾಜ ಅಂತರ್ಜಾತಿ ಜೋಡಿಗಳ ಬೆಂಬಲಕ್ಕೆ ನಿಂತು ಅವರಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ” ಎಂದು ಹೇಳಿದರು.

ಮನಸ್ಸಾಕ್ಷಿ ಮದುವೆ1

“ಸಮಾಜದಲ್ಲಿ ಮಾತ್ರವಲ್ಲದೆ ದಾಂಪತ್ಯದಲ್ಲಿಯೂ ಗಂಡು-ಹೆಣ್ಣು ಮೇಲುಕೀಳು‌ ಭಾವನೆ ಇರದೆ, ಕುಟುಂಬದಲ್ಲಿಯೂ ಪ್ರಜಾಪ್ರಭುತ್ವ ಭಾವನೆ ನೆಲೆಸಬೇಕಿದೆ. ಪ್ರೀತಿಸಿ ಮದುವೆಯಾದವರು ಅತ್ಯಂತ ಜವಾಬ್ದಾರಿಯಿಂದ ಮಾದರಿಯಾಗಿ ಬದುಕಬೇಕು” ಎಂದು ಕಿವಿಮಾತು ಹೇಳಿದರು.

ಅಂತಾರಾಷ್ಟ್ರೀಯ ಚಿತ್ರಕಲಾವಿರಾದ ಕೆ.ಟಿ ಶಿವಪ್ರಸಾದ್, ಮಹದೇವಮ್ಮ ಮತ್ತು ಸರೋಜಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೋಕಕಿರಣ್ ತಂದೆ, ಸಾಹಿತಿಗಳಾದ ಹರೀಶ್ ಕಟ್ಟೆ ಬೆಳಗುಲಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಡಿವೈಎಫ್ಐ ಪೃಥ್ವಿ ಎಂ.ಜಿ ನಿರ್ವಹಿಸಿದರು.

ಮನಸ್ಸಾಕ್ಷಿ ಮದುವೆ2

ಸಾಹಿತಿ ಜ.ನಾ ತೇಜಶ್ರೀ, ದಲಿತ ಮುಖಂಡ ಕೃಷ್ಣದಾಸ್, ಎಂ.ಬಿ ಪುಟ್ಟಸ್ವಾಮಿ, ಡಾ. ಸೋಮಣ್ಣ ಸೇರಿದಂತೆ ಅನೇಕರು ವಧು-ವರರಿಗೆ ಶುಭ ಹಾರೈಸಿ ಮಾತನಾಡಿದರು. ಡಾ.ಹಂಪನಹಳ್ಳಿ ತಿಮ್ಮೇಗೌಡ, ಡಾ. ಜಯಶಂಕರ್ ಹಲಗೂರ್, ಎಚ್.ಕೆ ಸಂದೇಶ್, ಟಿ.ಆರ್ ವಿಜಯ್ ಕುಮಾರ್ ಸೇರಿದಂತೆ ಹಲವು ಗಣ್ಯರು, ಸಂಬಂಧಿಕರು ವಿವಾಹಕ್ಕೆ ಸಾಕ್ಷಿಯಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...