ಚಿಕ್ಕಬಳ್ಳಾಪುರ | ಮಂಚೇನಹಳ್ಳಿ ಗಣಿ ಪ್ರಕರಣ: ಕಂದಾಯ ಮತ್ತು ಗಣಿ ಇಲಾಖೆಯ ಕುಕೃತ್ಯ; ಎಸ್.ಆರ್.ಹಿರೇಮಠ್‌

Date:

ರೈತನ ಮೇಲೆ ಕ್ರೂರತನದ ದೌರ್ಜನ್ಯ ಎಸಗಿದ್ದು, ಗುಂಡಿನ ದಾಳಿ ನಡೆಸಿರುವುದು ಅಸ್ವೀಕಾರ ಮತ್ತು ಅಕ್ಷಮ್ಯ. ಇದು ಕಂದಾಯ ಇಲಾಖೆ ಮತ್ತು ಗಣಿ ಇಲಾಖೆಯ ಕುಕೃತ್ಯ ಎಂದು ಸಾಮಾಜಿಕ ಹೋರಾಟಗಾರ ಎಸ್.‌ಆರ್.ಹಿರೇಮಠ್‌ ಆರೋಪಿಸಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಕಣಗಾನಕೊಪ್ಪ ಗ್ರಾಮದ ಸ.ನಂ.178ರಲ್ಲಿ ಮತ್ತು ಸ.ನಂ.34ರಲ್ಲಿ ಕ್ರಷರ್‌ಗೆ ಅನುಮತಿ ಕೊಟ್ಟಿದ್ದಾರೆ. ಪಿನಾಕಿನಿ ಜಲಾನಯನ ಪ್ರದೇಶಕ್ಕೆ ಸೇರಿದ್ದು, ಮಂಚೇನಹಳ್ಳಿ ಗ್ರಾಮಕ್ಕೆ ಹತ್ತಿರವಾದ ಜಾಗ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...
IMG20250508124405

ಕೆಲವರು ಗಣಿಗಾರಿಕೆ ಮಾಡಿ ಜೀವನ ನಡೆಸಬೇಕೆಂದು ಬಂದಿದ್ದಾರೆ. ಆದ್ದರಿಂದಲೇ ಇಲ್ಲಿನ ಬೆಟ್ಟ, ಪರಿಸರವನ್ನು ನಾಶ ಮಾಡಲು ಮುಂದಾಗಿದ್ದಾರೆ. ರವಿಕುಮಾರ್‌ ಎಂಬ ರೈತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದೇಶದಲ್ಲಿ ಮಾಡಬಾರದ ಕೆಲಸಗಳನ್ನು ಮಾಡುತ್ತಿದ್ದು, ಇಂತಹ ಕಿಡಿಗೇಡಿಗಳಿಗೆ ತಕ್ಷ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.

ಅಧಿಕೃತ ದಾಖಲಿಗಳಿಲ್ಲದೆ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಆದರೆ, ದಾಖಲೆ ಸಿಕ್ಕರೆ ಮಾತ್ರ ಬಿಡುವುದಿಲ್ಲ. ಜನರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವುದು ನ್ಯಾಯ ಕೊಡಿಸುವ ಶಕ್ತಿಯಿಂದ ಸಾಧ್ಯ. ಹಾಗಾಗಿ ಎಲ್ಲರೂ ದೃಢಸಂಕಲ್ಪ ಮಾಡಿ ಜನರಿಗೆ ಮೋಸ ಮಾಡುವ ಕಡೆ ಜನಪ್ರತಿನಿಧಿಗಳಿಗೆ ಬುದ್ಧಿ ಕಲಿಸುವ ಕೆಲಸಕ್ಕೆ ಮುಂದಾಗಬೇಕು. ಬಿಜೆಪಿಯವರಿಗೆ ಭೂಮಿ ಹದಮಾಡಿಕೊಟ್ಟಿದ್ದು ಕಾಂಗ್ರೆಸ್‌ನವರು. ಎಲ್ಲಾ ಪಕ್ಷಗಳಲ್ಲೂ ಇಂತಹವರು ಇದ್ದಾರೆ. ಸದಾ ಜಾಗೃತರಾಗಿದ್ದರೆ ಮಾತ್ರ ನಾವು ಸ್ವತಂತ್ರರಾಗಿರಲು ಸಾಧ್ಯ ಎಂದು ಎಸ್.ಆರ್.ಹಿರೇಮಠ್ ಹೇಳಿದರು.

ಇದನ್ನೂ ಓದಿ : ಶಿಡ್ಲಘಟ್ಟ | ಆನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಅವಿರೋಧ ಆಯ್ಕೆ

ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ ಮಾತನಾಡಿ, ಕಂದಾಯ ಇಲಾಖೆ ವರದಿ ಮೇಲೆ ಅನುಮತಿ ಕೊಟ್ಟಿದ್ದೇವೆ ಎಂದು ಗಣಿ ಇಲಾಖೆ ಅಧಿಕಾರಿಗಳು ಉಡಾಫೆ ಉತ್ತರ ಕೊಡುತ್ತಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಷ್ಟೆಲ್ಲಾ ಆಗಿದೆ. ಗಣಿ ಪರವಾನಗಿ ರದ್ದಾಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘ ನರಸಿಂಹಮೂರ್ತಿ, ಲೋಕೇಶ್‌ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...