ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಗುಜರಾತ್‌ಗೆ ಪ್ರಥಮ ಸ್ಥಾನ, ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಹಾಗೂ ಉತ್ತರ ಪ್ರದೇಶ ಹಾಗೂ ಯಶಸ್ವಿ ಅಕಾಡೆಮಿ ತೃತೀಯ ಸ್ಥಾನ ಪಡೆದುಕೊಂಡಿವೆ.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಹ್ಯಾಂಡ್ ಬಾಲ್ ಅಸೋಸಿಯೇಷನ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಆನಂದೇಶ್ವರ ಪಾಂಡೆ, ಕರ್ನಾಟಕ ಹ್ಯಾಂಡ್ ಬಾಲ್ ಅಸೋಸಿಯನ್ ಡಾ. ಮನೋಜ್ ಪಿ ಸಾಹುಕಾರ್, ಪ್ರಧಾನ ಕಾರ್ಯದರ್ಶಿ ಬಿ ಎಲ್ ಲೋಕೇಶ್, ಖಜಾಂಚಿ ಪ್ರಕಾಶ್ ನರಗಟ್ಟಿ, ಹಿರಿಯ ಗಾಂಧಿವಾದಿ ಡಾ. ಬಿ ಸುಜಯ್ ಕುಮಾರ್ ಶ್ರೀರಂಗಪಟ್ಟಣ, ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಶಿವಲಿಂಗ ದಳವಾಯಿ, ಮಂಡ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ಮಂಜುರಾಮ್, ಪುಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಹಾಗೂ ಕ್ರೀಡಾ ಸಂಘಟನಾಕಾರ ಡಾ. ರಾಘವೇಂದ್ರ ಸೇರಿದಂತೆ ಹಲವಾರು ಗಣ್ಯರು ಸೇರಿ ಬಹುಮಾನ ವಿತರಣಾ ಕಾರ್ಯಕ್ರಮ ನೆರವೇರಿಸಿದರು.

ಈ ಕ್ರೀಡಾಕೂಟಕ್ಕೆ ದೇಶದ 24 ರಾಜ್ಯಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್‌ನ ಎಲ್ಲ ಪದಾಧಿಕಾರಿಗಳು, ಮಂಡ್ಯ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು,
ಪರಿವರ್ತನಾ ಶಾಲಾ ಕಾಲೇಜಿನ ಸಿಬ್ಬಂದಿಗಳು, ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಚಿವ ಅಕಾಡೆಮಿ ವಿದ್ಯಾರ್ಥಿಗಳು ಭಾಗವಹಿಸಿದರು.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಜಾತಿಗಣತಿಯಲ್ಲಿ ಪರಿಶಿಷ್ಟ ಜಾತಿಯೆಂದು ಸ್ಪಷ್ಟವಾಗಿ ದಾಖಲಿಸಬೇಕು: ಶಿವಕುಮಾರ್ ಮನವಿ
ಕ್ರೀಡಾಕೂಟದಲ್ಲಿ ಚಂದ್ರನಾಗ್, ರಾಜೇಶ್ ದೀಪಕ್, ದೇವರಾಜ್ ರುಕ್ಮಾಂದ, ನಾಗೇಂದ್ರ, ಅನನ್ಯ, ಗುರುಪ್ರಸಾದ್ ಸೇರಿದಂತೆ ಇನ್ನು ಮುಂತಾದವರು ಇದ್ದರು