ಮಂಡ್ಯ | ಇಂಡುವಾಳು ಪಂಚಾಯತಿ ನೀಡಿದ 96%ರಷ್ಟು ಇ-ಖಾತೆಗಳು ಅಕ್ರಮ; ಮೂವರು ‘PDO’ಗಳು ಅಮಾನತು

Date:

ಮಂಡ್ಯ ಜಿಲ್ಲೆಯ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ವಿತರಿಸಲಾದ ಇ-ಖಾತೆಗಳ ಪೈಕಿ ಬರೋಬ್ಬರಿ 1,844 (96%) ಇ-ಖಾತೆಗಳು ಅಕ್ರಮವೆಂದು ಕಂಡುಬಂದಿದೆ. ಈ ಬೆನ್ನಲ್ಲೇ, ಮೂವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಒಬ್ಬರು ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಆದೇಶಿಸಿದ್ದಾರೆ.

- Advertisement -

ಇಂಡುವಾಳು ಗ್ರಾಮ ಪಂಚಾಯತಿಯು ಒಟ್ಟು 1,929 ಇ-ಖಾತೆಗಳನ್ನು ವಿತರಿಸಿದೆ. ಈ ಪೈಕಿ ಕೇವಲ 85 ಇ-ಖಾತೆಗಳು ಮಾತ್ರ ಕಾನೂನುಬದ್ಧವಾಗಿವೆ. ಉಳಿದ 96% ಅಂದರೆ, 1,844 ಇ-ಖಾತೆಗಳು ಅಕ್ರಮವಾಗಿವೆ ಎಂಬುದು ಪತ್ತೆಯಾಗಿದೆ. ಈ ಹಿನ್ನೆಲೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಆದೇಶಿಸಿದ್ದರು. ಅವರ ಆದೇಶದ ಅನ್ವಯ ‘ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು-1957’ರ ಅಡಿಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಅಮಾನತುಗೊಂಡ ಮೂವರು ಪಿಡಿಒಗಳನ್ನು ಎ.ಎಸ್. ಸಿದ್ದರಾಜು, ದಯಾನಂದ ಹಾಗೂ ಮರಿಲಿಂಗಯ್ಯ ಎಸ್. ಎಂದು ಹೆಸರಿಸಲಾಗಿದೆ. ಈ ಮೂವರು ಪ್ರಸ್ತುತ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅಮಾನತುಗೊಂಡ ಮತ್ತೋರ್ವ ಅಧಿಕಾರಿಯನ್ನು ದ್ವಿತೀಯ ದರ್ಜೆ ಸಹಾಯಕಿ ರಾಣಿ ಎಚ್.ಆರ್ ಎಂದು ಹೇಳಲಾಗಿದೆ. ಇವರೆಲ್ಲರ ವಿರುದ್ಧ ಇಲಾಖಾ ತನಿಖೆಯು ಬಾಕಿ ಉಳಿದಿದೆ.

2021 ಮತ್ತು 2025ರ ನಡುವೆ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಸಂಬಂಧಿಸಿದಂತೆ ಇಷ್ಟೊಂದು ದೊಡ್ಡ ಸಂಖ್ಯೆಯ ಅಕ್ರಮ ಇ-ಖಾತೆಗಳನ್ನು ಹೇಗೆ ನೀಡಲಾಯಿತು ಎಂಬುದರ ವಿವರಗಳನ್ನು ಒದಗಿಸುವಂತೆ ನ್ಯಾಯಮೂರ್ತಿ ವೀರಪ್ಪ ಅವರು ಜಿಲ್ಲಾ ಪಂಚಾಯತಿ ಸಿಇಒಗೆ ಸೂಚಿಸಿದ್ದಾರೆ. ಈ ಬಗ್ಗೆ ವರದಿ ಸಲ್ಲಿಸುವಂತೆಯೂ ಆದೇಶಿಸಿದ್ದಾರೆ.

“ಈ ಅಕ್ರಮಗಳ ಕುರಿತು ಅಧಿಕಾರಿಗಳು ಪರಿಶೀಲಿಸಬೇಕು. ಸರ್ಕಾರದ ಯಾವುದೇ ಮಂಜೂರಾತಿ ಅಥವಾ ಅನುಮತಿಯಿಲ್ಲದೆ ಸರ್ಕಾರಿ ಅಥವಾ ಗೋಮಾಳ ಭೂಮಿಗೆ ಸಂಬಂಧಿಸಿದಂತೆ ಎಷ್ಟು ಇ-ಖಾತೆಗಳನ್ನು ನೀಡಲಾಗಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಲೋಕಾಯುಕ್ತದ ಮುಂದೆ ಹಾಜರುಪಡಿಸಬೇಕು” ಎಂದು ಆದೇಶಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಅಫ್ಘಾನ್-ಪಾಕ್ ಸಂಘರ್ಷ | ತಾನೇ ಹುಟ್ಟುಹಾಕಿದ ತಾಲಿಬಾನ್‌ ಜೊತೆ ಪಾಕ್ ಘರ್ಷಣೆ ಏಕೆ?

“1,844 ಅಕ್ರಮ ಇ-ಖಾತೆಗಳನ್ನು ನೀಡಿರುವುದು ಗಂಭೀರ ವಿಷಯವಾಗಿದೆ. ಸಿಇಒ ಕೇವಲ ಇಲಾಖಾ ತನಿಖೆಯನ್ನು ಪ್ರಾರಂಭಿಸಿದರೆ ಸಾಲದು; ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು. ಮಂಡ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯು ಈ ವಿಷಯವನ್ನು ಸಿಇಒ ಗಮನಕ್ಕೆ ತರಬೇಕು. 1,844 ಅಕ್ರಮ ಇ-ಖಾತೆಗಳನ್ನು ನೀಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವುದನ್ನು ಸಿಇಒ ಖಚಿತಪಡಿಸಿಕೊಳ್ಳಬೇಕು” ಎಂದು ಉಪ ಲೋಕಾಯುಕ್ತರು ಆದೇಶಿಸಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಕಿರಗಂದೂರು ಗ್ರಾಮದ ಸರ್ವೆ ನಂ. 26ರ ಗೋಮಾಳ ಭೂಮಿಯನ್ನು ಸಂರಕ್ಷಿಸಲು ಕ್ರಮ ಕೈಗೊಳ್ಳುವಲ್ಲಿ ತಹಶೀಲ್ದಾರ್ ಅವರು ನಿಷ್ಠೆಯಿಂದ ಕಾರ್ಯನಿರ್ವಹಿಸಿಲ್ಲ ಎಂದು ಉಪ ಲೋಕಾಯುಕ್ತರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಮಂಡ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅವರು ಸಹ 12 ಅಕ್ರಮ ಖಾತೆಗಳ ರದ್ದತಿಯ ಬಗ್ಗೆ ವರದಿ ಮಾಡಿಲ್ಲ. ಪಂಚಾಯತ್ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಕಣ್ಣು ಮುಚ್ಚಿ ಕುಳಿತಿದ್ದಾರೆ” ಎಂದು ಅವರು ಕಿಡಿಕಾರಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993ರ ಸೆಕ್ಷನ್ 232ರ ಅಡಿಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳ ನಿಷ್ಕ್ರಿಯತೆಯ ವಿರುದ್ಧ ಸಿಇಒ ಕ್ರಮ ಕೈಗೊಳ್ಳಬೇಕು ಎಂದು ಉಪ ಲೋಕಾಯುಕ್ತರು ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...