ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ಗೆಲುವು ಕಂಡಿದ್ದರು. ಅವರಿಗೆ ಬೆನ್ನಲುಬಾಗಿದ್ದ ನಟ ದರ್ಶನ್, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ. ಸುಮಲತಾ ಅವರು ಬಿಜೆಪಿ ಸೇರಿದ್ದು, ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸಂಸದೆ ಸುಮಲತಾ ಅವರುಮ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಟಿಕೆಟ್ ವಂಚಿತೆಯಾಗಿದ್ದಾರೆ. ಆದರೂ, ಮೈತ್ರಿಯನ್ನು ಒಪ್ಪಿಕೊಂಡು ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಮೈತ್ರಿ ಧರ್ಮ ಪಾಲಿಸಬೇಕಿರುವುದರಿಂದ ಸುಮಲತಾ ಅವರು ಕುಮಾರಸ್ವಾಮಿಗೆ ಬೆಂಬಲ ನೀಡಬೇಕು. ಆದರೆ, ಸುಮಲತಾ ಬೆನ್ನಿಗೆ ನಿಂತಿದ್ದ ನಟ ದರ್ಶನ್, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?
ಸ್ಟಾರ್ ಚಂದ್ರು ಪರವಾಗಿ ಗುರುವಾರ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ನಡೆಸಲಿದ್ದಾರೆ. ದರ್ಶನ್ ಅವರ ಈ ನಡೆ ಈಗ ಕುತೂಹಲ ಕೆರಳಿಸಿದೆ.