ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

Date:

ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ಗೆಲುವು ಕಂಡಿದ್ದರು. ಅವರಿಗೆ ಬೆನ್ನಲುಬಾಗಿದ್ದ ನಟ ದರ್ಶನ್, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ. ಸುಮಲತಾ ಅವರು ಬಿಜೆಪಿ ಸೇರಿದ್ದು, ದರ್ಶನ್ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

- Advertisement -

ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸಂಸದೆ ಸುಮಲತಾ ಅವರುಮ ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಟಿಕೆಟ್‌ ವಂಚಿತೆಯಾಗಿದ್ದಾರೆ. ಆದರೂ, ಮೈತ್ರಿಯನ್ನು ಒಪ್ಪಿಕೊಂಡು ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಂಡ್ಯ ಕ್ಷೇತ್ರದಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಮೈತ್ರಿ ಧರ್ಮ ಪಾಲಿಸಬೇಕಿರುವುದರಿಂದ ಸುಮಲತಾ ಅವರು ಕುಮಾರಸ್ವಾಮಿಗೆ ಬೆಂಬಲ ನೀಡಬೇಕು. ಆದರೆ, ಸುಮಲತಾ ಬೆನ್ನಿಗೆ ನಿಂತಿದ್ದ ನಟ ದರ್ಶನ್, ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

ಸ್ಟಾರ್ ಚಂದ್ರು ಪರವಾಗಿ ಗುರುವಾರ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್‌ ಪ್ರಚಾರ ನಡೆಸಲಿದ್ದಾರೆ. ದರ್ಶನ್‌ ಅವರ ಈ ನಡೆ ಈಗ ಕುತೂಹಲ ಕೆರಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...