ಮಂಡ್ಯ | ಡಿ ದೇವರಾಜ ಅರಸು ಚಿಂತನೆ, ಆದರ್ಶವನ್ನು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕುಮಾರ

Date:

ಪ್ರತಿಯೊಬ್ಬರೂ ಕೂಡ ಡಿ ದೇವರಾಜ ಅರಸು ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸಲಹೆ ನೀಡಿದರು.

- Advertisement -

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಮಾಜಿಕ ಪರಿವರ್ತನೆಯ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಸಾಮಾಜಿಕ ಬದಲಾವಣೆಯ ಮುಂದಾಳು ಡಿ ದೇವರಾಜ ಅರಸು ಅವರು ಕೇವಲ ಒಬ್ಬ ರಾಜಕಾರಣಿ ಅಲ್ಲ ಆದರ್ಶ ವ್ಯಕ್ತಿತ್ವವುಳ್ಳವರು. ಅವರ ಚಿಂತನೆಯಲ್ಲಿ, ಸಮಾಜವಾದಿ ತತ್ವ, ಏಳಿಗೆಪರ ಚಿಂತನೆ, ಸಾಮಾಜಿಕ ನ್ಯಾಯ ಹಾಗೂ ಸಾಮಾಜಿಕ ಬದಲಾವಣೆಯ ದೃಷ್ಟಿಕೋನವನ್ನು ಇಟ್ಟುಕೊಂಡಿದ್ದವರು. ಹಾಗಾಗಿ ಅವರನ್ನು ತಿಳಿವಳಿಕೆಯುಳ್ಳ ಒಬ್ಬ ಮಹಾನ್ ನಾಯಕರೆಂದು ಕರೆಯಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಕರ್ನಾಟಕ ನಾಡಿನಲ್ಲಿ ಸುಮಾರು 8 ಏಡುಗಳ(ವರ್ಷ) ಕಾಲ ನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅರಸು ಅವರು, ಕೇವಲ ರಾಜಕೀಯ ಚಿಂತನೆಯಲ್ಲದೆ ನಾಡಿಗೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಏಳಿಗೆಯ ಹಮ್ಮುಗೆ ಹಾಕಿಕೊಟ್ಟಂತಹ ವ್ಯಕ್ತಿ” ಎಂದರು.

“ಮೈಸೂರು ನಾಡಿಗೆ ʼಕರ್ನಾಟಕʼ ಎಂದು ನಾಮಕರಣ ಮಾಡಿದವರು ಅರಸು. ಇಂದು ಕರ್ನಾಟಕ ನಾಡಿನ ಸಂಭ್ರಮ 50ರ ಗಡಿ ದಾಟಿದ ಉತ್ಸವದಲ್ಲಿ ನಾವಿದ್ದೇವೆ. 50 ಏಡುಗಳ ಹಿಂದೆ ಅವರು ಹಾಕಿಕೊಟ್ಟಿರುವ ಚಿಂತನೆಗಳು ಹಾಗೂ ಕೊಡುಗೆಗಳು ಇವತ್ತಿಗೂ ಪ್ರಸ್ತುತ. ಹಾಗಾಗಿ, ನಾವು ಅರಸು ಅವರನ್ನು ಇಂದಿಗೂ ನೆನೆಯುತ್ತೇವೆ” ಎಂದು ಸ್ಮರಿಸಿದರು.

“ದೇವರಾಜ ಅರಸು ಅವರ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಅತ್ಯವಶ್ಯಕವಾಗಿವೆ. ಅಸಮಾನತೆ, ತಾರತಮ್ಯವನ್ನು ಹೋಗಲಾಡಿಸಿ ಸಾಮಾಜಿಕ ನ್ಯಾಯವನ್ನು ದೊರಕಿಸುವ ಮೂಲಕ ಅನೇಕ ಕೊಡುಗೆಯನ್ನು ನೀಡಿದ್ದಾರೆ” ಎಂದರು.

“ಭೂ ಸುಧಾರಣೆ ಕಾಯಿದೆಯು ಜಾರಿಗೆ ಬಂದಂಥ ಸನ್ನಿವೇಶದಲ್ಲಿ ಅದನ್ನು ಯಶಸ್ವಿಯಾಗಿ ಜಾರಿಗೊಳಿಸಿದಂತಹ ಏಕೈಕ ನಾಡೆಂದರೆ ಕರ್ನಾಟಕ. ಅಂದಿನ ಕಾಲಘಟ್ಟದಲ್ಲಿ ದೊಡ್ಡ ದೊಡ್ಡ ಭೂ ಹಿಡುವಳಿದಾರರು, ಜಮೀನ್ದಾರರು ಹಾಗೂ ಶ್ರೀಮಂತರ ಎದುರು ಹಾಕಿಕೊಂಡು ಭೂ ಮಾಲೀಕರ ಜಾಗದಲ್ಲಿ ಗೇಣಿದಾರರನ್ನು ಕೂರಿಸಿ ಬಡವರಿಗೆ ನೆರವು ನೀಡುವುದು ಅಷ್ಟು ಸುಲಭವಾದ ಮಾತಾಗಿರಲಿಲ್ಲ. ಅದನ್ನು ಯಶಸ್ವಿಯಾಗಿ ನಿಭಾಯಿಸಿ ಸಾಮಾಜಿಕ ನ್ಯಾಯದ ಚೌಕಟ್ಟಿನಲ್ಲಿ ಬಡವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದರು” ಎಂದು ಸ್ಮರಿಸಿದರು.

“ಅರಸು ಅವರು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಬಹಳ ದುಡಿದಿದ್ದಾರೆ. ಹಿಂದುಳಿದ ವರ್ಗಗಳ ವಸತಿ ನಿಲಯಗಳನ್ನು ಮೊಟ್ಟ ಮೊದಲು ಇವರು ಸ್ಥಾಪನೆ ಮಾಡಿ ಕಲಿಕೆ ಹಾಗೂ ಕೆಲಸದಲ್ಲಿ ಮೀಸಲಾತಿ ಇರಬೇಕು. ಹಳ್ಳಿಗಾಡು ಪ್ರದೇಶದ ಮಕ್ಕಳು ಓದಿ ದೊಡ್ಡ ಸಾಧನೆ ಮಾಡಬೇಕೆಂಬ ನಿಟ್ಟಿನಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯವನ್ನು ಸ್ಥಾಪಿಸಿದರು. ಇದರಿಂದಾಗಿ ಇಂದಿಗೂ ಅವರ ಹೆಸರಿನಲ್ಲಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ” ಎಂದರು.

“ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ. ಆಡಳಿತಗಳು ಕಲಿಕೆಗಾಗಿ ಕೊಟ್ಟಿರುವ ಹಮ್ಮುಗೆಗಳನ್ನು ಸದುಪಯೋಗ ಮಾಡಿಕೊಂಡು, ಒಳ್ಳೆಯ ಕನಸನ್ನು ಕಟ್ಟಿಕೊಂಡು ಉತ್ತಮ ಸಾಧನೆ ಮಾಡಬೇಕು” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು|ಜಯಮಂಗಲಿ ನದಿ ಪ್ರವಾಹ ಸಾಧ್ಯತೆ : ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಡಿಸಿ ಸೂಚನೆ

“ಪ್ರತಿಯೊಬ್ಬರು ದೇವರಾಜ ಅರಸುರವರ ಬದುಕಿನ ಚರಿತ್ರೆಯನ್ನು ಓದಿ. ನಿಮ್ಮ ಕುಟುಂಬದವರಿಗೂ ಅವರ ಸಾಧನೆ ಹಾಗೂ ಕೊಡುಗೆಗಳನ್ನು ತಿಳಿಸಿ. ಅವರ ಆಚಾರ-ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು” ಎಂದರು.

“ಇಂದು ನಾನು ಈ ವೇದಿಕೆಯ ಮೇಲೆ ಜಿಲ್ಲಾಧಿಕಾರಿಯಾಗಿ ಮಾತನಾಡುತ್ತಿದ್ದೀನೆಂದರೆ ಅದಕ್ಕೆ ಬಹುಮುಖ್ಯ ಕಾರಣ ನಾನು ಓದಿ ಬೆಳೆದಂತಹ ಬಿಸಿಎಂ ಹಾಸ್ಟೆಲ್. ಏಕೆಂದರೆ ಒಂದು ವೇಳೆ ನನಗೆ ಬಿಸಿಎಂ ಹಾಸ್ಟೆಲ್‌ನಲ್ಲಿ ಸೀಟು ಸಿಗದಿದ್ದರೆ, ಕಲಿಯುವ ಅವಕಾಶ ಇರಲಿಲ್ಲವಾಗಿದ್ದರೆ, ನಾನು ಹಳ್ಳಿಯಿಂದ ಬಂದು ನಗರದಲ್ಲಿ ಓದಲು ಅನುವಾಗುತ್ತಿರಲಿಲ್ಲ. ಇಡೀ ನನ್ನ ಕಲಿಕೆಯನ್ನು ನಾನು ಬಿಸಿಎಂ ಹಾಸ್ಟೆಲ್ಲಿನಲ್ಲಿ ಪಡೆದಿದ್ದೇನೆ. ಈ ಹಾಸ್ಟೆಲ್‌ ಕೇವಲ ಒಂದು ಕಟ್ಟಡವೆಂದು ನಾನು ನೋಡುವುದಿಲ್ಲ. ಅದೊಂದು ʼಜ್ಞಾನದ ದೇಗುಲʼವೆಂದೇ ಭಾವಿಸುತ್ತಿದ್ದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...