ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವೇದಮೂರ್ತಿ ಎಂಬುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಜೈ ಭೀಮ್ ಮಾದಿಗ ಸಂಘರ್ಷ ಸಮಿತಿ ವತಿಯಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ನಗರದಲ್ಲಿರುವ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಆರೋಪಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವೇದಮೂರ್ತಿಯನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ತಾಳಶಾಸನ ಮೋಹನ್, ಕೆ.ಆರ್.ಪೇಟೆ ತಾಲ್ಲೂಕಿನ ನಿವಾಸಿ ಹಾಗೂ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿರುವ ವೇದಮೂರ್ತಿ ಎಂಬುವವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು.

ಅವರು ಮಾತನಾಡಿರುವುದನ್ನು ದಾಖಲಿಸಿರುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಂತಹ ಕೃತ್ಯದಿಂದ ಅಂಬೇಡ್ಕರ್ ಅವರನ್ನು ಗೌರವಿಸುವ ಕೋಟ್ಯಂತರ ಜನರ ಭಾವನೆಗಳಿಗೆ ನೋವಾಗಿದೆ ಎಂದು ಹೇಳಿದರು. ಈ ಪ್ರಕರಣದ ಹಿಂದೆ ಯಾರೇ ಇದ್ದರೂ ತನಿಖೆ ನಡೆಸಿ, ಸಂಬಂಧಪಟ್ಟ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ಜೈ ಭೀಮ್ ಮಾದಿಗ ಸಂಘರ್ಷ ಸಮಿತಿ ರಾಜ್ಯ ಅಧ್ಯಕ್ಷ ನಂಜುಂಡ ಮೌರ್ಯ, ರಾಷ್ಟ್ರೀಯ ನಾಯಕರ ಬಗ್ಗೆ ಪದೇಪದೇ ಅವಹೇಳನಕಾರಿ ಹೇಳಿಕೆ ನೀಡುವುದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಯಿದೆ. ಮಂಡ್ಯ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ತುರ್ತು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ
“ನಾನು ಒಬ್ಬ ಮಹಿಳೆಯಾಗಿ ಈ ಸ್ಥಾನಕ್ಕೆ ಬರಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವೇ ಕಾರಣ. ಅವರನ್ನು ಕುರಿತು ಈ ರೀತಿಯಾಗಿ ಮಾತನಾಡಿರುವುದು ನಮಗೂ ನೋವುಂಟು ಮಾಡಿದೆ. ನೀವು ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದೀರಿ. ನಿಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಆರೋಪಿಯ ಬಂಧನಕ್ಕಾಗಿ ಈಗಾಗಲೇ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ನಮ್ಮ ಪೊಲೀಸರು ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದಾರೆ. ನಿಮ್ಮ ಹೋರಾಟವನ್ನು ಕೈಬಿಡಿ. ಆರೋಪಿಯನ್ನು ತನಿಖೆಗೆ ಒಳಪಡಿಸಿ, ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು. ನಂತರ ಪ್ರತಿಭಟನಾಕಾರರು ಸ್ಥಳದಲ್ಲೇ ಸಭೆ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೃಹತ್ ಹೋರಾಟ ನಡೆಸಲು ನಿರ್ಣಯ ಕೈಗೊಂಡರು. ಬಳಿಕ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂದಿನ ಬದುಕಿನ ಸ್ವಾವಲಂಬನೆಗೆ ಮರಳಬೇಕು: ದರ್ಶನ್ ಪುಟ್ಟಣ್ಣಯ್ಯ

ಪ್ರತಿಭಟನೆಯಲ್ಲಿ ದಸಂಸ ಮುಖಂಡರಾದ ನಲ್ಲಹಳ್ಳಿ ಸ್ವಾಮಿ, ಎಂ.ವಿ.ಕೃಷ್ಣ, ಸಿದ್ದರಾಜು, ಗಂಗರಾಜು, ಬಾಲರಾಜು, ವಿಜಯಕುಮಾರ್, ಸುದಾನುಮ, ಶಾಂತರಾಜು, ಜೈ ಸುಧಾ, ಚೇತನ್, ಮಂಜುಳಾ, ಸುಲೋಚನಾ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...

ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...