ಮಂಡ್ಯ | ಇನ್ನೂ ನಿಂತಿಲ್ಲ ಭ್ರೂಣಲಿಂಗ ಪತ್ತೆ; ದಂಧೆ ನಡೆಸುತ್ತಿದ್ದ ಮೂವರ ಬಂಧನ

Date:

ಕಳೆದ ವರ್ಷ ಇಡೀ ರಾಜ್ಯವನ್ನೇ ನಿಬ್ಬೆರಗಾಗಿಸಿದ್ದ ಭ್ರೂಣಲಿಂಗ ಪತ್ತೆ ದಂಧೆ ಇನ್ನೂ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆಯ ಕ್ವಾರ್ಟರ್ಸ್​ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ನಡೆಯುತ್ತಿತ್ತು ಎಂಬ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ್ದು, ಗರ್ಭಪಾತಕ್ಕೆ ಬಂದಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.

ಕ್ವಾರ್ಟರ್ಸ್‌ನ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಈ ವೇಳೆ, ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಬಳಸುತ್ತಿದ್ದ ಯಂತ್ರೋಪಕರಣಗಳು ‌ಜಪ್ತಿ ಮಾಡಲಾಗಿದ್ದು, ಮೂವರು ಅರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಂಡವಪುರ ತಾಲೂಕು ಆಸ್ಪತ್ರೆ ಆ್ಯಂಬುಲೆನ್ಸ್​ ಚಾಲಕ ಆನಂದ್, ಅದೇ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ವಶಕ್ಕೆ ಪಡೆಯಲಾಘಿದೆ. ಚಾಲಕ ಆನಂದ್​ಗೆ ನೀಡಲಾಗಿದ್ದ ಸರ್ಕಾರಿ ವಸತಿ ಗೃಹದಲ್ಲಿಯೇ ಈ ಕೃತ್ಯ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ವರ್ಷ ಮಂಡ್ಯದಲ್ಲಿ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದರು. ಹಲವರನ್ನು ಬಂಧಿಸಿದ್ದರು. ಅಲ್ಲದೆ, ಮೈಸೂರಿನ ಕಾವೇರಿ ಹಾಗೂ ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಬೀಗ ಜಡಿಯಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು...

ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24...

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...