ಮಂಡ್ಯ | ಪರಿಶಿಷ್ಟ ಸಮುದಾಯದವರ ಮೇಲೆ ದೌರ್ಜನ್ಯ; ಭೀಮಸೇನೆ ಕರ್ನಾಟಕ ತಪ್ಪಿತಸ್ತರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಪರಿಶಿಷ್ಟ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ಭೀಮಸೇನೆ ಕರ್ನಾಟಕ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

- Advertisement -

ಮಂಡ್ಯ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆಯನ್ನು ಆರಂಭಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನರನ್ನು ಅಮಾನುಷವಾಗಿ ನಡೆಸಿಕೊಂಡು ಮತ್ತು ಅವರ ಸಂವಿಧಾನಬದ್ದ ಹಕ್ಕುಗಳನ್ನು ನಿರಾಕರಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಸಮುದಾಯದವರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ(ಅಟ್ರಾಸಿಟಿ) ಕಾಯ್ದೆಯಡಿ ದೂರು ದಾಖಲಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಕಬ್ಬನಹಳ್ಳಿ ಗ್ರಾಮದಲ್ಲಿ, ಪರಿಶಿಷ್ಟ ಜನತೆಗೆ ಕಾನೂನುಬದ್ಧವಾಗಿ ಮೀಸಲಿರಿಸಿದ ಏಳು ಎಕರೆ ಗರೀಬಿ ಸೈಟನ್ನು ಸ್ಥಳೀಯರು ದಬ್ಬಾಳಿಕೆ ಮೂಲಕ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾಡಳಿತ ಕೂಡಲೇ ಈ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಿ, ಪರಿಶಿಷ್ಟ ಜನತೆಗೆ ನ್ಯಾಯ ದೊರಕಿಸಬೇಕು. ಜತೆಗೆ ಆ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಕಾಯ್ದಿರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಜಯಪುರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜನರು ಓಡಾಡುವ ರಸ್ತೆಗೆ ತಡೆಗೋಡೆ ನಿರ್ಮಿಸಿರುವುದು ಕಾನೂನುಬಾಹಿರ. ತಕ್ಷಣವೇ ಈ ತಡೆಗೋಡೆ ತೆರವುಗೊಳಿಸಲು ಕಾನೂನು ಕ್ರಮ ಕೈಗೊಳ್ಳಬೇಕು. ಮಳೆಯಿಂದ ಕುಸಿದ ಮನೆಗಳ ಮಾಲೀಕರಿಗೆ ಸರಿಯಾದ ಪರಿಹಾರ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಕನಕಪುರ ತಾಲೂಕು ಕಚೇರಿಯಲ್ಲಿ ಪ್ರಗತಿಪರ ಸಂಘಟನೆಗಳಿಗೆ ಕೊಠಡಿ ನೀಡುವಂತೆ ಹೋರಾಟಗಾರರ ಒತ್ತಾಯ

“ಸೀತಾಪುರ ಗ್ರಾಮದಲ್ಲಿ ವಾಸಿಸುತ್ತಿರುವ ವಾಲ್ಮೀಕಿ ಸಮುದಾಯದ ಜನರಿಗೆ, ಸರ್ಕಾರದ ನಿಯಮಾವಳಿಗಳಂತೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡದೆ ವಂಚಿಸುತ್ತಿರುವ ತಾಲೂಕು ಆಡಳಿತದ ಅಧಿಕಾರಿಗಳ‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಪರಿಶಿಷ್ಟರು ವಾಸಿಸುವ ಗ್ರಾಮಗಳಲ್ಲಿ ಸ್ಮಶಾನವನ್ನು ಕಾಯ್ದಿರಿಸಲು ತಹಶೀಲ್ದಾರರಿಗೆ ಆದೇಶ ನೀಡಬೇಕು” ಎಂದು ಆಗ್ರಹಿಸಿದರು.

ಈ ಪ್ರತಿಭಟನೆಗೆ ಭೀಮಸೇನೆ ಕರ್ನಾಟಕದ ರಾಜ್ಯಾಧ್ಯಕ್ಷ ಪ್ರಸನ್ನ ಜೆ ಲವ ಕೆ ಎಚ್, ಸುಂದರಿ, ಸುನಿಲ್ ಕೆ ಸಿ, ಮಹೇಶ್ ಕೆ ಪಿ, ಕುಳ್ಳ ನಿಂಗಯ್ಯ, ಪ್ರವೀಣ್ ಕೆ ಎಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...