ಮಂಡ್ಯ | ಬ್ಯಾಂಕ್ ದರೋಡೆಗೆ ಯತ್ನ; ಸೆಕ್ಯೂರಿಟಿ ಗಾರ್ಡ್‌ಗೆ ಇರಿದ ದುಷ್ಕರ್ಮಿಗಳು

Date:

ಬ್ಯಾಂಕ್ ದರೋಡೆಗೆ ಬಂದ ಗುಂಪನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್‌ಗೆ ಮಾರಕಾಸ್ತ್ರದಿಂದ ಇರಿದು ಗಾಯಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ಭಾನುವಾರ ಮದ್ಯರಾತ್ರಿ ನಡೆದಿದೆ.

- Advertisement -

ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ಇರಿತದಿಂದ ಗಾಯಗೊಂಡಿರುವ ಕರ್ತವ್ಯನಿರತ ನೌಕರ. ಇವರು ಡಿಸಿಸಿ ಬ್ಯಾಂಕ್ ಹಾಗೂ ವಿಎಸ್‌ಎಸ್‌ಎನ್ ನೌಕರ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಘಟನೆ ವಿವರ:

ಹರಿಹರಪುರ ಗ್ರಾಮದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಮುಸುಕುದಾರಿಗಳಾಗಿದ್ದ ಮೂವರು ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕರ್ತವ್ಯನಿರತನಾಗಿದ್ದ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ದರೋಡೆಕೋರರನ್ನು ತಡೆದು, ಕಿರುಚಿಕೊಂಡಿದ್ದಾರೆ. ಇದರಿಂದ ವಿಚಲಿತರಾದ ದರೋಡೆಕೋರರು ಬ್ಯಾಂಕ್ ಬೀಗ ಒಡೆಯಲು ಸಾಧ್ಯವಾಗದೇ ಇದ್ದಾಗ ಸೆಕ್ಯೂರಿಟಿ ಗಾರ್ಡ್‌ನ ಹೊಟ್ಟೆಯ ಭಾಗಕ್ಕೆ ಮಾರಕಾಸ್ತ್ರದಿಂದ ಇರಿದು ಹತ್ಯೆಗೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಜಮಾಯಿಸುತ್ತಿರುವುದನ್ನು ಅರಿತ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮಾರಕಾಸ್ತ್ರದ ಇರಿತದಿಂದ ಗಾಯಗೊಂಡು ಅಸ್ವಸ್ಥಗೊಂಡಿದ್ದ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಗ್ರಾಮಸ್ಥರು ಕೆ ಆರ್ ಪೇಟೆ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

ಪ್ರಾಣಾಪಾಯದಿಂದ ಪಾರಾಗಿರುವ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್ ಕೆ ಅಶೋಕ್‌, ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಮೋಹನ್, ಸಿಇಒ ಕಾಂತರಾಜು, ಮಾಜಿ ಅಧ್ಯಕ್ಷರುಗಳಾದ ನಿಂಗರಾಜು, ಕೃಷ್ಣೇಗೌಡ, ಬಾಲಗಂಗಾಧರತಿಲಕ್, ರೇವಣ್ಣ, ಡೇರಿ ಅಧ್ಯಕ್ಷ ನಾಗೇಶ್ ಸೇರಿದಂತೆ ಇತರರು ಗಾಯಾಳುವನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಬಳಿಕ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ, ದುಷ್ಕರ್ಮಿಗಳನ್ನು ಪತ್ತೆ ಮಾಡಿ ಡಿಸಿಸಿ ಬ್ಯಾಂಕ್ ಮತ್ತು ವಿಎಸ್‌ಎಸ್‌ಎನ್ ಬ್ಯಾಂಕ್ ಶಾಖೆಗಳಿಗೆ ಸೂಕ್ತ ಪೊಲೀಸ್ ಗಸ್ತು ಭದ್ರತೆ ಒದಗಿಸಿಕೊಡಬೇಕೆಂದು ಮನವಿ‌ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...