ಮಂಡ್ಯ | ಬಲಮುರಿ ನಿಷೇಧಾಜ್ಞೆ ನಡುವೆಯೂ ನೀರಿನಾಟ; ಜೀವಕ್ಕೆ ಸಂಚಕಾರ

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳು ಇದೀಗ ಅಪಾಯದ ತಾಣಗಳಾಗಿ ಪರಿಣಮಿಸಿವೆ. ಬೇಸಿಗೆಯ ಬಿಸಿಲಿನಲ್ಲಿ ತಂಪು ಹುಡುಕಿಕೊಂಡು ಬರುವ ಪ್ರವಾಸಿಗರು ಕಾವೇರಿ ನದಿಯಲ್ಲಿ ನೀರಿನಾಟವಾಡಿ ಜೀವ ಕಳೆದುಕೊಳ್ಳುತ್ತಿರುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.

- Advertisement -

ಕಾವೇರಿ ನದಿಯ ಸೆಳೆತ ಹಾಗೂ ಆಳದ ಬಗ್ಗೆ ಅರಿವಿಲ್ಲದೆ ನೀರಿಗಿಳಿಯುವ ಪ್ರವಾಸಿಗರು ಅಪಾಯಕ್ಕೆ ಸಿಲುಕುತ್ತಿದ್ದಾರೆ. ಜಾಗೃತಿ ಮೂಡಿಸಿದರೂ ಕೆಲವರು ಎಚ್ಚರಿಕೆ ಪಾಲಿಸದೇ ನೀರಿನಲ್ಲಿ ಇಳಿಯುತ್ತಿರುವುದು ದುರಂತಗಳಿಗೆ ಕಾರಣವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇತ್ತೀಚೆಗೆ ಮೈಸೂರಿನ ಇಬ್ಬರು ಯುವಕರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಆತಂಕ ಹೆಚ್ಚಿಸಿದೆ. ಇದಕ್ಕೂ ಮೊದಲು ಮತ್ತೊಬ್ಬ ಪ್ರವಾಸಿಗರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಹಶೀಲ್ದಾರ್ ಹಾಗೂ ತಾಲ್ಲೂಕು ಮ್ಯಾಜಿಸ್ಟ್ರೇಟ್ ಎಸ್. ಚೇತನಾ ಯಾದವ್ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಏಪ್ರಿಲ್ 16, 2026ರಿಂದ ಈ ಆದೇಶ ಜಾರಿಯಲ್ಲಿದ್ದು, ಮುಂದಿನ ಆದೇಶದವರೆಗೆ ಮುಂದುವರಿಯಲಿದೆ.

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರವಾಸಿಗರು ಪೊಲೀಸ್ ಸಿಬ್ಬಂದಿ ಕಣ್ಣಪ್ಪಿಸಿ ನದಿಗೆ ಇಳಿಯುತ್ತಿರುವುದು ಕಂಡುಬರುತ್ತಿದೆ. ಕೆಲವು ಮಂದಿ ನದಿ ತೀರದ ಗ್ರಾಮಗಳು, ತೋಟಗಳು ಮತ್ತು ಜಮೀನುಗಳ ಮೂಲಕ ಪ್ರವೇಶಿಸುತ್ತಿರುವುದೂ ಅಧಿಕಾರಿಗಳಿಗೆ ತಲೆನೋವಾಗಿದೆ.

ಕಳೆದ 11 ವರ್ಷಗಳಲ್ಲಿ ಬಲಮುರಿ–ಎಡಮುರಿ ಪ್ರದೇಶದಲ್ಲಿ ಒಟ್ಟು 70 ಮಂದಿ ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿ. 2019ರಲ್ಲಿ 13 ಮಂದಿ, 2023ರಲ್ಲಿ 10 ಮಂದಿ, 2024 ಮತ್ತು 2025ರಲ್ಲಿ ತಲಾ 11 ಮಂದಿ ಮೃತಪಟ್ಟಿದ್ದಾರೆ. 2026ರ ಐದು ತಿಂಗಳಲ್ಲಿ ಈಗಾಗಲೇ ಐದು ಮಂದಿ ನೀರಿನಾಟಕ್ಕೆ ಬಲಿಯಾಗಿದ್ದಾರೆ.

ಈ ವಿಡಿಯೋ ವೀಕ್ಷಿಸಿ:https://youtu.be/AZ7t09oFqBM?si=zbu7mUsSm2Z7zX6L

ಪ್ರವಾಸಿಗರ ನಿಯಂತ್ರಣಕ್ಕಾಗಿ ಬಲಮುರಿಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ನದಿಗಿಳಿಯುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಅನೈತಿಕ ಚಟುವಟಿಕೆಗಳ ಮೇಲೂ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ?ಮಂಡ್ಯ | ಡೆಂಗ್ಯೂ ದಿನಾಚರಣೆ ಹಾಗೂ ಹೆಣ್ಣು ಮಕ್ಕಳ ಗರ್ಭಕಂಠದ ಕ್ಯಾನ್ಸರ್ ತಡೆ ಜಾಗೃತಿ ಕಾರ್ಯಕ್ರಮ

ಪ್ರವಾಸಿಗರು ತಮ್ಮ ಸುರಕ್ಷತೆಯನ್ನು ಗಮನದಲ್ಲಿಟ್ಟು ನಿಷೇಧಾಜ್ಞೆ ಪಾಲಿಸುವುದು ಹಾಗೂ ಅಪಾಯಕಾರಿ ನೀರಿನಾಟದಿಂದ ದೂರವಿರುವುದು ಅಗತ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಕೋಲಾರ | ಮಾನವ ಹಕ್ಕುಗಳ ಮಂಡಳಿಯ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ನೇಮಕ

ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್...

ಬಾಗೇಪಲ್ಲಿ | ಎತ್ತಿನಹೊಳೆ ಅಲ್ಲ ಹಣದಹೊಳೆ ಹರಿಸುವ ಯೋಜನೆ-ಸಂಸದ ಡಾ.ಕೆ.ಸುಧಾಕರ್

ಕೇರಳ,ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರ ಪಟ್ಟಿಯಲ್ಲಿ...

ಅ.18ರಂದು ಮೈಸೂರಿನಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ...