ಮಂಡ್ಯ | ಸ್ಕೂಟರ್​ಗೆ ಡಿಕ್ಕಿ ಹೊಡೆದ ಬೊಲೆರೋ; ತಾಯಿ ಸ್ಥಳದಲ್ಲೇ ಸಾವು, ಮಕ್ಕಳ ಸ್ಥಿತಿ ಗಂಭೀರ

Date:

ವೇಗವಾಗಿ ಬರುತ್ತಿದ್ದ ಬೊಲೆರೋ ವಾಹನ ಸ್ಕೂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದ ಕೊಳ್ಳೇಗಾಲ ರಸ್ತೆಯ ಕಣಿಗಲ್ ಹಳ್ಳದ ಬಳಿ ನಡೆದಿದೆ.

- Advertisement -

ಮಳವಳ್ಳಿ ತಾಲೂಕಿನ ಕುಂದೂರು ಗ್ರಾಮದ ಶಿಲ್ಫಾ(39) ಅಪಘಾತದಲ್ಲಿ ಮೃತಪಟ್ಟವರು. ಇವರ 7 ವರ್ಷದ ಹಾಗೂ 5 ವರ್ಷದ ಇಬ್ಬರು ಮಕ್ಕಳಿಗೆ ತೀವ್ರವಾದ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಶುಕ್ರವಾರ ಸಾಯಂಕಾಲ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಶಿಲ್ಪಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರೂ ಮಕ್ಕಳನ್ನು ಮಳವಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ; ಕಾರು ನಜ್ಜುಗುಜ್ಜು

ಮಳವಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಶಿಲ್ಪಾ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...