ಮಂಡ್ಯ | ವಿಸಿ ನಾಲೆಗೆ ಉರುಳಿದ ಕಾರು; ಮೂವರ ಸಾವು

Date:

ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

- Advertisement -

ಸೋಮವಾರ ಮಧ್ಯಾಹ್ನ 12.30ರ ಸಮಯದಲ್ಲಿ ಪಾಂಡವಪುರದಿಂದ ಮಂಡ್ಯಕ್ಕೆ ಬರುತ್ತಿದ್ದ ಕಾರು ವಿಸಿ ನಾಲೆಗೆ ಉರುಳಿದ್ದು, ಈ ಸಂದರ್ಭದಲ್ಲಿ ಕಾರಿನ ಮಾಲೀಕ ಫಯಾಜ್ ಅಲಿಯಾಸ್ ಬ್ಯಾಟರಿ ಅವರು ಸ್ಥಳದಲ್ಲಿಯೇ ಮೃತಪಟ್ಟರೆ, ನಯಾಜ್ ಎಂಬಾತನನ್ನು ಸ್ಥಳೀಯ ಗ್ರಾಮಸ್ಥರು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಸುಮಾರು ಎರಡು ಗಂಟೆ ಕಾರ್ಯಾಚರಣೆ ನಡೆಸಿ 20 ಅಡಿ ಆಳದಲ್ಲಿದ್ದ ಕಾರಿಗೆ ಹಗ್ಗಕಟ್ಟಿ ಕ್ರೇನ್ ಮೂಲಕ ನಾಲೆಯಿಂದ ಕಾರನ್ನು ಮೇಲೆಕ್ಕೆತ್ತಿದರು. ಕಾರಿನಲ್ಲಿ ನಾಪತ್ತೆಯಾಗಿದ್ದ ಅಸ್ಲಂ ಪಾಷ ಹಾಗೂ ಪೀರ್ ಖಾನ್ ಮೃತದೇಹ ದೊರಕಿತು. ಮೂವರ ಮೃತದೇಹಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಯಿತು. ಮೃತದೇಹಗಳನ್ನು ಕಾರಿನಿಂದ ಹೊರತೆಗೆಯುತ್ತಿದ್ದಂತೆ ಸಂಬಂಧಿಕರು ಆಕ್ರಂದನ ಮುಗಿಲು ಮುಟ್ಟಿತು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಸ್ವ-ಸಹಾಯ, ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ ಒತ್ತಾಯ

ಕಾರ್ಯಾಚರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, “ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿರುವುದು ದುರ್ದೈವದ ಸಂಗತಿ. ಈ ಘಟನೆ ನಡೆದಿರುವುದು ನೋವು ತಂದಿದೆ. ವಿಸಿ ನಾಲೆಗೆ ತಡೆಗೋಡೆ ನಿರ್ಮಾಣ ಮಾಡುವ ಸಂಬಂಧ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ” ಎಂದರು.

ಸ್ಥಳಕ್ಕೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಆಗಮಿಸಿ ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ತಡೆಗೋಡೆ ನಿರ್ಮಾಣ ಸಂಬಂಧ ಸರ್ಕಾರದ ಜತೆಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...