ಕನ್ನಂಬಾಡಿ ಕಟ್ಟೆ ಗರಿಷ್ಟ 124.8 ಅಡಿ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ ಕೂಡ ಜೊತೆಗೂಡಿದ್ದಾರೆ.
ಕಟ್ಟೆಯ ಮೇಲ್ಬಾಗದಲ್ಲಿ ಕನ್ನಡ ಬಾವುಟಗಳ ಹಾರಾಟ ನುಡಿ ಅಭಿಮಾನದ ಜೊತೆಗೆ ಕನ್ನಡಿಗರ ಮನ ತಣಿಸಿತು, ಕಣ್ಣು ಹಾಯಿಸುವ ಉದ್ದಕ್ಕೂ ಕನ್ನಡ ಬಾವುಟಗಳು ರಾರಾಜಿಸಿದವು.

ಮಳೆ ಕೊರತೆ ಮತ್ತು ಬರಗಾಲದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಕೆಆರ್‌ಎಸ್ ಭರ್ತಿಯಾಗಿರಲಿಲ್ಲ. ಆದರೆ ಈ ಬಾರಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದುಬಂದ ಹಿನ್ನೆಲೆಯಲ್ಲಿ ಸಂಪೂರ್ಣ ಭರ್ತಿಯಾಗಿದೆ. ಆ ಹಿನ್ನೆಲೆಯಲ್ಲಿ ಕಾವೇರಿಗೆ ಬಾಗಿನ ಕೊಡುವ ವೇಳೆ ಉಲ್ಲಾಸ ಮನೆ ಮಾಡಿತ್ತು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ದಸಂಸ ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ: ಚಂದ್ರಕಾಂತ ಕಾದ್ರೊಳ್ಳಿ
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೆ ಎಂ ಉದಯ್, ರಮೇಶ್ ಬಾಬು, ಬಂಡಿಸಿದ್ದೇಗೌಡ, ಪಿ ಎಂ ನರೇಂದ್ರಸ್ವಾಮಿ, ರವಿ ಗಣಿಗ, ಮಧು ಮಾದೇಗೌದ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ಗಣ್ಯರು ಹಾಗೂ ಅಧಿಕಾರಿಗಳು ಇದ್ದರು.
