ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

Date:

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ ನಿಯಮಾವಳಿಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪಿ. ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಮಂಡ್ಯ ನಗರಸಭೆ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

174 ಮಳಿಗೆಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸರ್ಕಾರದ ನಿಯಮಾವಳಿಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಮಳಿಗೆ ಹಂಚಿಕೆಗೆ ಸೂಕ್ತ ಮಾರ್ಗ ಕಂಡುಕೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದರು.

ಜೀವನ ಕಟ್ಟಿಕೊಂಡಿರುವ 174 ವ್ಯಾಪಾರಸ್ಥರಿಗೆ ಮಳಿಗೆಗಳು ದೊರೆಯಬೇಕು. ಅವರ ಜೀವನೋಪಾಯಕ್ಕೆ ತೊಂದರೆಯಾಗದಂತೆ ನ್ಯಾಯಯುತವಾಗಿ ಹಂಚಿಕೆ ಪ್ರಕ್ರಿಯೆ ನಡೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಕಾನೂನು ಚೌಕಟ್ಟಿನಡಿ ಹಂಚಿಕೆಗೆ ಕ್ರಮ: ಜಿಲ್ಲಾಧಿಕಾರಿ

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಳಿಗೆಗಳ ಹಂಚಿಕೆ ಪ್ರಕ್ರಿಯೆಯನ್ನು ಸರ್ಕಾರದ ನಿಯಮಾವಳಿ ಹಾಗೂ ಕಾನೂನು ಚೌಕಟ್ಟಿನಡಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮಳಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕಾನೂನು ಮತ್ತು ನಿಯಮಗಳು ಏನು ಹೇಳುತ್ತವೆ ಎಂಬುದನ್ನು ಸಭೆಯಲ್ಲಿ ವಿವರಿಸಲಾಗಿದ್ದು, ಸರ್ಕಾರದ ಆದೇಶ ಹಾಗೂ ನಿಯಮಗಳಿಗೆ ಒಳಪಟ್ಟು 174 ಮಳಿಗೆಗಳ ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದರು.

ಎಲ್ಲಾ ನಿಯಮಾವಳಿಗಳನ್ನು ಸಮಗ್ರವಾಗಿ ಪರಿಶೀಲಿಸಿ, ಕಾನೂನಿನಲ್ಲಿರುವ ಅವಕಾಶಗಳನ್ನು ಗುರುತಿಸಿ, ಸಂಬಂಧಪಟ್ಟ ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ನಗರಸಭೆ ಆಯುಕ್ತ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಚಂದ್ರಶೇಖರ್, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜು, ನಗರಸಭೆ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....