ಮಂಡ್ಯ | ಹವಾಮಾನ ವೈಪರೀತ್ಯವು ಕೃಷಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ : ವಿಜ್ಞಾನಿ ಡಾ. ಸುಧಿ ಶೇಷಾದ್ರಿ

Date:

Advertisements

ಹಣಕಾಸು ಗಳಿಸುವುದು ಮಾತ್ರ ಏಳಿಗೆಯ ಏಕೈಕ ಮಾನದಂಡ ಎಂಬ ಹುಚ್ಚು ಪೈಪೋಟಿಯಲ್ಲಿ ಸಾಗುತ್ತಿರುವ ಚೀನಾ, ಅಮೇರಿಕಾ, ಜಪಾನ್, ಯುರೋಪ್, ರಷ್ಯ, ಭಾರತ, ಇನ್ನಿತರೇ ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿ ಕೊಳ್ಳುತ್ತಿರುವುದರಿಂದ ಮುಂದಿನ 50 ರಿಂದ 60 ವರ್ಷದಲ್ಲಿ ಕಲ್ಲಿದ್ದಲು, ತೈಲಬಾವಿಗಳು, ಖನಿಜ ಸಂಪತ್ತು ಬರಿದಾಗುತ್ತದೆ ಎಂದು ಬೆಂಗಳೂರಿನ ಎಸ್‌ಎಪಿಎಸಿಸಿ ವಿಜ್ಞಾನಿ ಡಾ. ಸುಧಿ ಶೇಷಾದ್ರಿ ತಿಳಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಭಾರತೀ ನಗರದಲ್ಲಿರುವ ಭಾರತೀ ಶಿಕ್ಷಣ ಸಂಸ್ಥೆಯ ಕುವೆಂಪು ಸಭಾಂಗಣದಲ್ಲಿ ಸಂಪೂರ್ಣ ಸಾವಯವ ಕೃಷಿಕರ ಸಂಘ, ಮಳವಳ್ಳಿ ಮತ್ತು ತುಮಕೂರಿನ ಗಾಂಧಿ ಸಹಜ ಬೇಸಾಯ ಶಾಲೆ ಸಹಯೋಗದಲ್ಲಿ ಎಸ್ಎಪಿಎಸಿಸಿ (ಸೌತ್ ಏಶಿಯನ್ ಪೀಪಲ್ಸ್ ಆಕ್ಷನ್ ಆನ್ ಕ್ಲೈಮೇಟ್‌ ಕ್ರೈಸಿಸ್) ನ ತಾಂತ್ರಿಕ ಪರಿಣಿತರೊಂದಿಗೆ “ಕೃಷಿ ಭೂಮಿಯಲ್ಲಿ ಇಂಗಾಲದ ಸಂಗ್ರಹಣೆ ಮತ್ತು ರೈತರಿಗೆ ಸಿಗಬೇಕಾದ ಮನ್ನಣೆ” ವಿಚಾರ ಸಂಕಿರಣದಲ್ಲಿ ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು.

WhatsApp Image 2024 08 19 at 8.34.48 AM

ಕೈಗಾರಿಕೆ ಕ್ರಾಂತಿ, ಅತಿಯಾದ ನೈಸರ್ಗಿಕ ಸಂಪನ್ಮೂಲಗಳ ಬಳಕೆಯಿಂದ ವಾತಾವರಣದಲ್ಲಿ ತಾಪಮಾನ ಏರಿಕೆ ಉಂಟಾಗುತ್ತಿದೆ. ಇದರ ಹೊಡೆತ ಪರಿಸರದಲ್ಲಿರುವ ಸಕಲ ಜೀವರಾಶಿಗಳ ಮೇಲೆ ಆಗುತ್ತಿದೆ. ಇದರ ನೇರ ಬಲಿಪಶು ರೈತ ಮತ್ತು ಕೃಷಿ ಕ್ಷೇತ್ರವಾಗಿರುತ್ತದೆ. ಹವಾಮಾನ ವೈಪರೀತ್ಯವು ಕೃಷಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು.

Advertisements

ಹವಾಮಾನ ಬದಲಾವಣೆ ಹೆಸರಿನಲ್ಲಿ ಸುಸ್ಥಿರ ಏಳಿಗೆ ಸಾಧಿಸುವ ಯೋಜನೆ ರೂಪಿಸಲು ಮತ್ತು ಹವಾಮಾನ ಬದಲಾವಣೆ ನಿಧಿಯ ಹಣಕಾಸು ಸೌಲಭ್ಯಗಳನ್ನು ಬಳಸಿಕೊಳ್ಳಲು ಬಂಡವಾಳಶಾಹಿ ಕಾರ್ಪೊರೇಟ್ ಕಂಪನಿಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುತ್ತಿದೆ. ಸಮಾಜದಲ್ಲಿ ಸುಸ್ಥಿರ ಏಳಿಗೆ ಸಾಧಿಸಲು ಕೃಷಿ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಕೃಷಿ ಕ್ಷೇತ್ರ ಮತ್ತು ರೈತರನ್ನು ಪರಿಗಣಿಸದೆ ಬಹುರಾಷ್ಟ್ರೀಯ ಕಂಪನಿಗಳು ತಯಾರಿಕೆ ಮಾಡುವ ಸೋಲಾರ್ ಎನರ್ಜಿ, ವಿಂಡ್ ಎನರ್ಜಿ, ಬ್ಯಾಟರಿ ಚಾಲಿತ ವಾಹನ ತಯಾರಿಕೆಯನ್ನು ಪ್ರಮುಖವಾಗಿ ತೆಗೆದುಕೊಂಡು ಇವುಗಳ ಮೇಲೆ ಹೆಚ್ಚು ಹಣಕಾಸು ನೆರವು ನೀಡುತ್ತಿರುವುದು ಒಂದು ದೊಡ್ಡ ದಂಧೆಯಾಗಿದೆ ಎಂದು ಅಭಿಪ್ರಾಯಿಸಿದರು.

ಉತ್ಪಾದನಾ ಮತ್ತು ಸೇವಾ ವಲಯದಲ್ಲಿ ಬಳಕೆಯಾಗುವ ಒಳಹರಿವಿನ ವೆಚ್ಚವನ್ನು ಪರಿಗಣಿಸಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಒಳಹರಿವಿನ ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಕೈಗಾರಿಕೆಗಳಲ್ಲಿ ತಾಂತ್ರಿಕತೆ ಮೂಲಕ ಬಳಕೆ ಮಾಡಿಕೊಳ್ಳುವ ಸೂರ್ಯನ ಶಕ್ತಿಯನ್ನು ಹಣದ ರೂಪದಲ್ಲಿ ಲೆಕ್ಕ ಹಾಕಲಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ನೈಸರ್ಗಿಕವಾಗಿ ಆಗುವ ಸೂರ್ಯನ ಶಕ್ತಿಯ ಬಳಕೆಯನ್ನು ಕಡೆಗಣಿಸಲಾಗಿದೆ. ಹಣ ಮತ್ತು ಶಕ್ತಿಯ ಅಸಮಾನ ವಿನಿಮಯ ನೀತಿಯನ್ನು ಸರಿಪಡಿಸಬೇಕಿದೆ ಎಂದು ಡಾ. ಸುಧಿ ಶೇಷಾದ್ರಿ ತಿಳಿಸಿದರು.

WhatsApp Image 2024 08 19 at 8.34.49 AM 1

ಜಾಗತಿಕ ತಾಪಮಾನ ಏರಿಕೆಯಿಂದಾಗಿ ಅತಿವೃಷ್ಟಿ-ಅನಾವೃಷ್ಟಿಗಳು ಸಂಭವಿಸುತ್ತಿದ್ದು, ಇದರಿಂದ ಭಾರತೀಯ ರೈತರಿಗೆ ಪ್ರತಿ ವರ್ಷ 5 ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ಬೆಳೆ ನಷ್ಟವಾಗುತ್ತಿದೆ. ಈ ನಷ್ಟವನ್ನು ಹವಾಮಾನ ಬದಲಾವಣೆ ನಿಧಿಯಿಂದ ರೈತರಿಗೆ ಪರಿಹಾರ ರೂಪದಲ್ಲಿ ಭರಿಸಬೇಕು. ಮಾನವನ ಹಸಿವು ನೀಗಿಸಲು ಕೃಷಿ ಭೂಮಿಯಲ್ಲಿ ಬೆಳೆಯುವ ಆಹಾರ ಉತ್ಪಾದನೆಯಿಂದ ಆಗುವ ಹಸಿರು ಮನೆ ಅನಿಲ ಹೊರ ಸೂಸುವಿಕೆಯನ್ನು ಕೃಷಿ ಕ್ಷೇತ್ರಕ್ಕೆ ಆಂಟಿಸುವುದು ಸಮಂಜಸವಲ್ಲ. ಪೆಟ್ರೋಲ್, ಡೀಸೆಲ್ ಬಳಕೆಯಿಂದ ವಾಹನದಿಂದ ಹೊರಸುವ ಅನಿಲದ ಲೆಕ್ಕವನ್ನು ವಾಹನದ ಮೇಲೆ ಹಾಕಲಾಗುತ್ತದೆ ಹೊರತು ತೈಲ ಕಂಪನಿಯ ಮೇಲೆ ಹಾಕುವುದಿಲ್ಲ. ಇದೇ ರೀತಿ ಆಹಾರ ಉತ್ಪಾದನೆ ಮಾಡುವ ಕೃಷಿ ಕ್ಷೇತ್ರದ ಮೇಲೆ ಹೊರೆ ಹಾಕುವ ಕ್ರಮವನ್ನು ಕೈ ಬಿಡಬೇಕು ಎಂದರು.

ಇದನ್ನು ಓದಿದ್ದೀರಾ? ಕೊಪ್ಪಳ | ದಲಿತ ಯುವಕನ ಕೊಲೆ ಪ್ರಕರಣ: ಕುಟುಂಬಕ್ಕೆ ಪರಿಹಾರ ವಿತರಿಸಿದ ಸಚಿವ ಶಿವರಾಜ ತಂಗಡಗಿ

ಸಭೆಯಲ್ಲಿ ಎಂಎಲ್‌ಸಿ ಮಧು ಜಿ ಮಾದೇಗೌಡ, ಭಾರತೀ ಶಿಕ್ಷಣ ಸಂಸ್ಥೆ ಟ್ರಸ್ಟ್‌ನ ಕಾರ್ಯದರ್ಶಿ ಬಿ ಎಂ ನಂಜೇಗೌಡ, ಕಾರ್ಯಕ್ರಮದ ಆಯೋಜಕಾರದ ಮಳವಳ್ಳಿ ಮಹೇಶ್ ಕುಮಾರ್, ತುಮಕೂರು ಗಾಂಧಿ ಬೇಸಾಯ ಶಾಲೆಯ ಯತಿರಾಜು, ಡಾಕ್ಟರ್ ಮಂಜುನಾಥ್, ರವೀಶ್, ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಸಿಪಿ ಮಾಧವನ್, ಕೊಳ್ಳೇಗಾಲ ಜೆ ಎಸ್ ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್, ಸತ್ತೇಗಾಲದ ಪ್ರಶಾಂತ್ ಜಯರಾಮ್, ಕೆ. ಸಿ ವೆಂಕಟೇಶ್, ಹಲವು ರೈತ ಮುಖಂಡರು ಹಾಗೂ 150 ಕ್ಕೂ ಹೆಚ್ಚು ರೈತರು ಉಪಸ್ಥಿತರಿದ್ದರು.

ವರದಿ: ನಗರಕೆರೆ ಜಗದೀಶ್

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X