ಮಂಡ್ಯ | ಕಳ್ಳತನಕ್ಕೆ ಸಾಥ್ ನೀಡಿದ್ದ ಕಾನ್ಸ್‌ಟೇಬಲ್; 8 ಮಂದಿ ಬಂಧನ

Date:

ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರಿಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

- Advertisement -

ಮದ್ದೂರು ತಾಲೂಕಿನ ಕೊಪ್ಪ ಠಾಣೆಯ ಆರೋಪಿ ಕಾನ್ಸ್​ಟೇಬಲ್ ಕೆಂಡಗಣ್ಣಯ್ಯ ಸೇರಿ ಒಟ್ಟು 8 ಮಂದಿ ಆರೋಪಿಗಳನ್ನು ಮದ್ದೂರು ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಂಡಗಣ್ಣಯ್ಯ ಜೊತೆಗೆ, ಖದೀಮರಾದ ಡಾಲಿ, ಭವನ್, ಸಾದನ್, ಅಯೂಬ್, ಮುನ್ನಾ, ಪ್ರಸಾದ್, ಫಯಾಜ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆರೋಪಿ ಖದೀಮರಿಗೆ ಕಾನ್ಸ್‌ಟೇಬಲ್ ಸಹಾಯ ಮಾಡುತ್ತಿದ್ದರು. ಕಳ್ಳರು ಮನೆಗಳಲ್ಲಿ ಕದ್ದ ಚಿನ್ನಾಭರಣಗಳನ್ನು ಕಾನ್ಸ್‌ಟೇಬಲ್ ಗಿರವಿ ಇಟ್ಟುಕೊಡುತ್ತಿದ್ದರು. ತಾವೂ ಪಾಲು ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ, ಮದ್ದೂರಿನ ವೈದ್ಯ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು. ಕಳ್ಳರ ಬಂಧನಕ್ಕಾಗಿ ವಿಶೇಷ ತಂಡ ರಚಿಸಿದ್ದ ಪೊಲೀಸರು, ಕಾನ್ಸ್‌ಟೇಬಲ್ ಸೇರಿದಂತೆ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 1.486 ಕೆ.ಜಿ ಚಿನ್ನಾಭರಣೆ ಮತ್ತು 1.70 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...