ಮಂಡ್ಯ | ಸಂವಿಧಾನವು ಪ್ರತಿಯೊಬ್ಬರ ಸಾಮಾಜಿಕ ಸಮಾನತೆಯ ದಾರಿದೀಪ : ಜಿಲ್ಲಾಧಿಕಾರಿ

Date:

ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ ಭಾರತೀಯ ಸಂವಿಧಾನವು ಪ್ರತಿಯೊಬ್ಬ ಪ್ರಜೆಯ ಬದುಕಿಗೆ ದಾರಿದೀಪವಾಗಿದೆ. ಸಂವಿಧಾನವನ್ನು ಕೇವಲ ಓದಿ ಗೌರವಿಸುವುದಷ್ಟೇ ಅಲ್ಲದೆ, ಅದರ ಆಶಯಗಳನ್ನು ಆಳವಾಗಿ ಅರಿತು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ಮತ್ತು ಸಾರ್ಥಕತೆ ದೊರೆಯುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

- Advertisement -

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತವು ವಿವಿಧ ಧರ್ಮ, ಜಾತಿ, ಭಾಷೆ ಹಾಗೂ ಸಂಸ್ಕೃತಿಗಳ ಜನರು ನೆಲೆಸಿರುವ ವೈವಿಧ್ಯಮಯ ರಾಷ್ಟ್ರವಾಗಿದೆ. ಇಂತಹ ವೈವಿಧ್ಯತೆಯ ನಡುವೆಯೂ ಎಲ್ಲರನ್ನು ಒಂದೇ ಸೂತ್ರದಲ್ಲಿ ಬೆಸೆಯುವ ಶಕ್ತಿ ಸಂವಿಧಾನಕ್ಕಿದೆ. ಸಂವಿಧಾನದ ಪ್ರಸ್ತಾವನೆಯಲ್ಲಿನ ‘ಭಾರತದ ಪ್ರಜೆಗಳಾದ ನಾವು’ ಎಂಬ ಮೊದಲ ಸಾಲು ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆಯ ಆಶಯವನ್ನು ಸಾರುತ್ತದೆ. ಯಾವುದೇ ಧರ್ಮ, ಜಾತಿ ಅಥವಾ ವರ್ಗಕ್ಕೆ ಸೇರಿದವರಾಗಿದ್ದರೂ ಮೊದಲು ನಾವೆಲ್ಲರೂ ಭಾರತೀಯರು ಎಂಬ ರಾಷ್ಟ್ರೀಯ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಗಟ್ಟಿಯಾಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಪ್ರತಿಯೊಂದು ಮನೆಯಲ್ಲೂ ಸಂವಿಧಾನದ ಪ್ರತಿಯನ್ನು ಇರಿಸಿಕೊಂಡು ಓದುವ ಮತ್ತು ಅರ್ಥಮಾಡಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಬಾಲ್ಯದಿಂದಲೇ ಸಂವಿಧಾನದ ಮಹತ್ವ, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಅರಿವು ಮೂಡಿಸಬೇಕು. ಮಾನವೀಯತೆ, ಸಮಾನತೆ ಮತ್ತು ಸಹಬಾಳ್ವೆಯನ್ನು ಸಾರುವ ಸಂವಿಧಾನವನ್ನು ಬದುಕಿನ ಮಾರ್ಗದರ್ಶಕ ಗ್ರಂಥವನ್ನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿ, ಅಧ್ಯಯನಶೀಲತೆ ಹಾಗೂ ಪರಿಶ್ರಮವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಸುದೀರ್ಘ ಚರ್ಚೆ ಮತ್ತು ಪರಿಶ್ರಮದ ಮೂಲಕ ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ ಅವರ ಸೇವೆ ಅನನ್ಯವಾದುದು. ಅಂಬೇಡ್ಕರ್ ಅವರ ಚಿಂತನೆಗಳನ್ನು ಕೇವಲ ಸ್ಮರಿಸುವುದಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅನುಸರಿಸುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದರು.

ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಅದನ್ನು ಅನುಷ್ಠಾನಗೊಳಿಸುವವರು ಉತ್ತಮ ಮೌಲ್ಯಗಳನ್ನು ಹೊಂದಿರದಿದ್ದರೆ ಅದರ ಆಶಯಗಳು ಸಂಪೂರ್ಣವಾಗಿ ಸಾಕಾರಗೊಳ್ಳುವುದಿಲ್ಲ ಎಂಬ ಅಂಬೇಡ್ಕರ್ ಅವರ ವಿಚಾರವನ್ನು ಎಲ್ಲರೂ ಅರಿತುಕೊಳ್ಳಬೇಕು. ಸಂವಿಧಾನದ ಮಹತ್ವದ ಕುರಿತು ಮಾತನಾಡುವುದಷ್ಟೇ ಮುಖ್ಯವಲ್ಲ; ಅದರ ಮೌಲ್ಯಗಳು ನಮ್ಮ ನಡೆ-ನುಡಿಯಲ್ಲಿ ಪ್ರತಿಬಿಂಬಿಸಬೇಕು. ಆಗ ಮಾತ್ರ ಸಂವಿಧಾನದ ಆಶಯಗಳಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

ಸಂವಿಧಾನದ ಅರಿವು ಪ್ರತಿಯೊಬ್ಬರಿಗೂ ಅಗತ್ಯ

ಮಂಡ್ಯ ವಿಶ್ವವಿದ್ಯಾನಿಲಯದ ಉಪನ್ಯಾಸಕ ಅನಿಲ್ ಕುಮಾರ್ ಎಸ್.ಜೆ. ಅವರು ಉಪನ್ಯಾಸ ನೀಡಿ, ಭಾರತೀಯ ಸಂವಿಧಾನದ ಮಹತ್ವ, ರಚನೆಯ ಹಿನ್ನೆಲೆ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಸಂವಿಧಾನದ ಆಶಯಗಳ ಕುರಿತು ವಿವರಿಸಿದರು.

ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ರೂಪುಗೊಂಡ ಸಂವಿಧಾನವನ್ನು ಎರಡು ವರ್ಷ, ಹನ್ನೊಂದು ತಿಂಗಳು, ಹದಿನೆಂಟು ದಿನಗಳ ಸುದೀರ್ಘ ಚರ್ಚೆ ಹಾಗೂ ಪರಿಶ್ರಮದ ಮೂಲಕ ರಚಿಸಲಾಗಿದೆ. 1946ರಲ್ಲಿ ಸಂವಿಧಾನ ರಚನಾ ಸಭೆ ಅಸ್ತಿತ್ವಕ್ಕೆ ಬಂದಿದ್ದು, ಡಿಸೆಂಬರ್ 9ರಂದು ಮೊದಲ ಸಭೆ ನಡೆಯಿತು. ಆರಂಭದಲ್ಲಿ ಡಾ. ಸಚ್ಚಿದಾನಂದ ಸಿನ್ಹಾ ತಾತ್ಕಾಲಿಕ ಅಧ್ಯಕ್ಷರಾಗಿದ್ದು, ನಂತರ ಡಾ. ಬಾಬು ರಾಜೇಂದ್ರ ಪ್ರಸಾದ್ ಅಧ್ಯಕ್ಷರಾದರು. ವಿವಿಧ ಸಮಿತಿಗಳನ್ನು ರಚಿಸಿ, ಕರಡು ಸಮಿತಿಯ ಅಧ್ಯಕ್ಷರಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನೇಮಿಸಲಾಯಿತು. ವೈವಿಧ್ಯಮಯ ಭಾರತವನ್ನು ಒಗ್ಗೂಡಿಸುವ ಸಂವಿಧಾನ ರೂಪಿಸುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಸಂವಿಧಾನದ ಯಶಸ್ಸು ಅದರ ಅನುಷ್ಠಾನಗೊಳಿಸುವವರ ನಡವಳಿಕೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಅವಲಂಬಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ, ಮಂಡ್ಯ ಉಪವಿಭಾಗಾಧಿಕಾರಿ ಶಂಕರಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ. ಶ್ರೀನಿವಾಸ್ ಹಾಗೂ ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಸಂವಿಧಾನ ಎಲ್ಲರ ಮನೆಯಲ್ಲಿ ಇರಲಿ

ಸಂವಿಧಾನದ ಪ್ರತಿ ದೇಶದ ಪ್ರತಿಯೊಬ್ಬರ ಮನೆಯಲ್ಲೂ ಇರಬೇಕು ಎಂದು ಚಿಂತಕ ಶಾಮಸುಂದರ್...

ಶಾಲೆಯಲ್ಲಿ ಹಿಜಾಬ್ ನಿಷೇಧ; ಅಲಹಾಬಾದ್ ಹೈಕೋರ್ಟ್ ತೀರ್ಪು ಪೂರ್ವನಿದರ್ಶನವಲ್ಲ: ಸುಪ್ರೀಂ ಸ್ಪಷ್ಟನೆ

ಶಾಲೆಯಲ್ಲಿ ಹಿಜಾಬ್ ಧರಿಸುವ ಹಕ್ಕನ್ನು ನಿರಾಕರಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು...

ವಿಜಯಪುರ |ಸಂವಿಧಾನದ ಮೌಲ್ಯಗಳು ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ಸಮಾಜ ನಿರ್ಮಾಣಕ್ಕೆ ದಾರಿ ;ವಿಠಲ ಕಟಕಧೋಂಡ

ಭಾರತೀಯ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಒಳಗೊಂಡಿದ್ದು,...

ಹಾವೇರಿ | ಎಸ್ಐಆರ್ ಪಟ್ಟಿ ತಿರಸ್ಕರಿಸಿ, 2025ರ ಮತಪಟ್ಟಿ ಸ್ಥಳೀಯ ಚುನಾವಣೆಗಳನ್ನು ನಡೆಸಲು ಆಗ್ರಹ

"ಪ್ರಸಕ್ತ ಎಸ್ಐಆರ್ ಪಟ್ಟಿ ತಿರಸ್ಕರಿಸಿ, 2025ರ ಮತಪಟ್ಟಿಯನ್ನು ಪರಿಷ್ಕರಿಸಿ ಸ್ಥಳೀಯ ಚುನಾವಣೆಗಳನ್ನು...