ಮಂಡ್ಯ | ದಲಿತ ಕಾಲೋನಿಯಲ್ಲಿ ಅನಧಿಕೃತ ಮೊಬೈಲ್ ಟವರ್‌ ನಿರ್ಮಾಣ; ತೆರವುಗೊಳಿಸುವಂತೆ ದಸಂಸ ಆಗ್ರಹ

Date:

ಸರ್ಕಾರದ ಆದೇಶವಿಲ್ಲದೆ ಸವರ್ಣಿಯ ವ್ಯಕ್ತಿಯೋರ್ವ ಮೊಬೈಲ್ ಟವರ್‌ ನಿರ್ಮಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ದಸಂಸ ಕಾರ್ಯಕರ್ತರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ತಹಶೀಲ್ದಾರ್‌ ಪರಶುರಾಂ ಸತ್ತಿಗೇರಿ ಅವರಿಗೆ ದೂರು ನೀಡಿದ್ದಾರೆ.

- Advertisement -

“ತಾಲೂಕಿನ ಬೋತಂಗಳ್ಳಿ ಗ್ರಾಮದ ದಲಿತ ಕಾಲೋನಿ ನಿವಾಸಿಗಳು ವಾಸಿಸುತ್ತಿರುವ ಪಕ್ಕದಲ್ಲಿ ಏರ್‌ಟೆಲ್ ಕಂಪನಿಯ ಮೊಬೈಲ್ ಟವರ್‌ ಅಳವಡಿಸಿರುವುದರಿಂದ ಸ್ಥಳೀಯರು ತೊಂದರೆಯಾಗಬಹುದೆಂಬ ಆತಂಕದಲ್ಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಾರ್ವಜನಿಕರ ಸ್ಥಳದಲ್ಲಿ ಏರ್‌ಟೆಲ್ ಕಂಪನಿಯ ಮೊಬೈಲ್ ಟವರ್‌ ಅಳವಡಿಸಲು ಯಾವುದೇ ಸರ್ಕಾರದ ಆದೇಶವಿಲ್ಲದೆ‌ ಸವರ್ಣೀಯ ತಮ್ಮಡಿಗೌಡರ ಪುತ್ರ ಪುಟ್ಟೇಗೌಡ ದಲಿತ ನಿವಾಸಿಗಳು ವಾಸಿಸುತ್ತಿರುವ ಪಕ್ಕದಲ್ಲಿ ಏರ್‌ಟೆಲ್‌ ಕಂಪನಿಯ ಮೊಬೈಲ್ ಟವರ್‌ ನಿರ್ಮಿಸಿದ್ದಾರೆ” ಎಂದು ದಸಂಸ ಮುಖಂಡರು ಆರೋಪಿಸಿದರು.

“ಟವರ್‌ನಿಂದ ಬರುವ ಶಬ್ದ ಹಾಗೂ ತರಂಗಳಿಂದ ವಿದ್ಯಾಭ್ಯಾಸ ಮಾಡುವ ಮಕ್ಕಳ ಕಿವಿ ಮತ್ತು ಕಣ್ಣುಗಳಿಗೆ ತೊಂದರೆಯಾಗುತ್ತದೆ. ಜತೆಗೆ ಪ್ರಾಣಹಾನಿ ಉಂಟಾಗಿ, ವಯಸ್ಸಾದವರಿಗೆ ಹೃದಯಾಘಾತ ಆಗುವ ಸಂಭವವಿದೆ” ಎಂದು ದೂರಿದರು.

“ಟವರ್‌ ನಿರ್ಮಾಣ ಮಾಡಿರುವ ಕಂಪನಿ ಮತ್ತು ಪುಟ್ಟೇಗೌಡ ಹಾಗೂ ತಮ್ಮಡಿಗೌಡ ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಿ ಕೂಡಲೇ ಟವರ್‌ ಸ್ಥಾವರವನ್ನು ತೆರವುಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಎಂಎಲ್‌ಸಿ ಚುನಾವಣೆ ನೆಪ; ಸಾರ್ವಜನಿಕರ ಕಾರ್ಯಕ್ಕೆ ನಿರ್ಬಂಧಿಸಿದ ಅಧಿಕಾರಿಗಳು

ದಸಂಸ ಸಂಚಾಲಕ ಕುಬೇರಪ್ಪ, ಸಂಘಟನಾ ಕಾರ್ಯದರ್ಶಿ ಶ್ರೀಕಂಠಯ್ಯ, ಮುಂಡುಗದೊರೆ ಗೋಪಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...