ಮಂಡ್ಯ | ಕೋಮುವಾದಿ ಬಿಜೆಪಿ ಜೊತೆ ಸೇರಿದ ‘ಎಚ್‌ಡಿಕೆ’ಗಿಲ್ಲ ಬೆಂಬಲ; ಕಾಂಗ್ರೆಸ್‌ಗೆ ಜೈ ಎಂದ ದಲಿತ ಸಂಘಟನೆಗಳು

Date:

ಭಾರತದ ಸಂವಿಧಾನ ಬದಲಿಸಲು, ಮನುಸ್ಮೃತಿಯನ್ನು ಹೇರಲು ಹವಣಿಸುತ್ತಿರುವ ಕೋಮುವಾದಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಮಂಡ್ಯ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳು ಹೇಳಿವೆ. ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ಘೋಷಿಸಿವೆ.

ಮಂಡ್ಯದಲ್ಲಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆದ ದಲಿತ ಸಂಘಟನೆಗಳ ಸಭೆಯಲ್ಲಿ, ಜೆಡಿಎಸ್‌ ಮತ್ತು ಎಚ್‌ಡಿ ಕುಮಾರಸ್ವಾಮಿ ಅವರಿಗೆ ತಮ್ಮ ಬೆಂಬಲವಿಲ್ಲ ಎಂದು ದಲಿತ ಸಂಘಟನೆಗಳ ಮುಖಂಡರು ಹೇಳಿದ್ದಾರೆ.

ಸಭೆಯಲ್ಲಿ ಮಾತನಾಡಿದ ದಸಂಸ ಸಂಚಾಲಕ ಗುರುಪ್ರಸಾದ್ ಕೆರಗೋಡು, “ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಲೋಕಸಭಾ ಚುನಾವಣೆ ಕೊನೆಯ ಅವಕಾಶವಾಗಿದೆ. ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆಲ್ಲುವುದು ಒಂದೇ, ಮಂಡ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಗೆಲ್ಲುವುದು ಒಂದೇ. ಏಕೆಂದರೆ ಪ್ರಧಾನಿ ಮೋದಿ ಕೋಮುವಾದಿಯಾದರೆ, ಕುಮಾರಸ್ವಾಮಿ ಕೋಮುವಾದಿ ಮನಸ್ಥಿತಿ ಜೊತೆಗೆ ಜಾತಿವಾದಿಯಾಗಿದ್ದಾರೆ” ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“2013ರಲ್ಲಿ ಸಿದ್ದರಾಮಯ್ಯ ಒಂದು ರೂಪಾಯಿಗೆ ಒಂದು ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಿದಾಗ ಕುಮಾರಸ್ವಾಮಿ ಅಕ್ಕಿ ಜೊತೆಗೆ ಕ್ವಾಟರ್ ಬಾಟಲ್ ನೀಡಿಬಿಡಿ. ನೀವು ಜನರನ್ನು ಸೋಮಾರಿ ಮಾಡುತ್ತಿದ್ದೀರಿ ಎಂದಿದ್ದರು. ಶೋಷಿತರು ದುಡಿಯಲು ಹುಟ್ಟಿದ್ದಾರೆ ಎಂಬ ಮನಸ್ಥಿತಿಯನ್ನು ಅನಾವರಣ ಮಾಡಿದ್ದರು” ಎಂಬುದನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ?: ಕೋಲಾರ | ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ; ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್

“2022ರ ಡಿಸೆಂಬರ್‌ನಲ್ಲಿ ನಡೆದ ದಲಿತ ಸಂಘಟನೆಗಳ ಐಕ್ಯತಾ ಸಭೆಯಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರ ಅಳಿವು ಉಳಿವಿನ ಪ್ರಶ್ನೆಯಾಗಿರುವ ಕೋಮುವಾದಿ ಶಕ್ತಿಯನ್ನು ಮಣಿಸಲು ನಿರ್ಣಯಿಸಿದ್ದೇವು. ಕಾಂಗ್ರೆಸ್‌ಗೆ ನಮ್ಮ ಸಹಕಾರ ಬೆಂಬಲ ಬೇಕೊ, ಬೇಡವೊ ಎಂಬುದು ಮುಖ್ಯವಲ್ಲ. ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ, ನಾಗರಿಕ ಹಕ್ಕುಗಳ ರಕ್ಷಣೆ ಹಾಗೂ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಕನಿಷ್ಠ ಬದ್ಧತೆ ತೋರಿರುವ ಕಾಂಗ್ರೆಸ್ ಪಕ್ಷವನ್ನು ಈಗ ಬೆಂಬಲಿಸುವುದು ಅಗತ್ಯವಾಗಿದೆ” ಎಂದರು.

ಸಭೆಯಲ್ಲಿ ವಿವಿಧ ದಲಿತ ಹಾಗೂ ಅಹಿಂದ ಸಂಘಟನೆಗಳ ಮುಖಂಡರಾದ ಪ್ರೊ.ಹುಲ್ಕೆರೆ ಮಹದೇವ್, ಎಲ್ ಸಂದೇಶ್, ಹಾರೋಹಳ್ಳಿ ಪ್ರಕಾಶ್, ಚಂದ್ರಶೇಖರ್, ಪ್ರಕಾಶ್ ಬ್ಯಾಡರಹಳ್ಳಿ, ಹಾಲಪ್ಪ, ದೇವರಾಜ್, ಗಂಗಾಧರ್, ಕೃಷ್ಣಪ್ರಸಾದ್, ರಾಜಶೇಖರ್, ರಾಮಂದೂರು ಸಿದ್ದರಾಜು, ಮುದ್ದಯ್ಯ, ರವಿಕುಮಾರ್, ಗೋವಿಂದರಾಜು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....