ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

Date:

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

- Advertisement -

ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬೆಂಕಿ ಹಾಕಿ ದಲಿತ ಯುವಕ ಜಯಕುಮಾರ್‌ನನ್ನು ಜೀವಂತವಾಗಿ ದಹನ ಮಾಡಿರುವ ಸಂಬಂಧ ಗ್ರಾಮದ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ವಿರುದ್ಧ ಮೃತನ ಪತ್ನಿ ಲಕ್ಷ್ಮಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಸಿದ್ದಯ್ಯ ಆವರಿಗೆ ಸೇರಿರುವ ಜಮೀನಿನಲ್ಲಿ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ಅಕ್ರಮವಾಗಿ ಹುಲ್ಲಿನ ಮೆದೆಯನ್ನು ಹಾಕಿಕೊಂಡಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಹುಲ್ಲಿನ ಮೆದೆಯನ್ನು ತೆರವು ಮಾಡಿಕೊಡುವಂತೆ ಗ್ರಾಮದಲ್ಲಿ ರಾಜಿ ಪಂಚಾಯಿತಿ ಮಾಡಿ ಅದು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮೃತ ಯುವಕ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದನು ಎಂದು ತಿಳಿದುಬಂದಿದೆ.

ನಿನ್ನೆಯೂ ಅನಿಲ್ ಮತ್ತು ಜಯಕುಮಾರ್ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ಪರಸ್ಪರ ಗಲಾಟೆ, ಗದ್ದಲಗಳು ನಡೆದಿದ್ದು, ʼನಾನು ಹುಲ್ಲಿನ ಮೆದೆಯನ್ನು ತೆರವುಗೊಳಿಸುವುದಿಲ್ಲ, ಮೆದೆಗೆ ಬೆಂಕಿ ಹಾಕ್ತೀನಿ ನೀನು ಬೆಂಕಿಯೊಳಗೆ ಬಿದ್ದು ಸಾಯಿ, ಇಲ್ಲದಿದ್ದರೆ ನಾನೇ ನಿನ್ನನ್ನು ಸಾಯಿಸುತ್ತೇನೆʼ ಎಂದು ಸವರ್ಣೀಯನೊಬ್ಬ ಬೆದರಿಕೆ ಹಾಕಿದ ಎನ್ನಲಾಗಿದೆ. ಮನನೊಂದ ದಲಿತ ಯುವಕ ಜಯಕುಮಾರ್ ಉರಿಯುತ್ತಿರುವ ಹುಲ್ಲಿನ ಮೆದೆಯೊಳಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ʼನನ್ನ ಪತಿಯ ಸಾವಿಗೆ ಅನಿಲ್ ಕಾರಣʼ ಎಂದು ಲಕ್ಷ್ಮಿ ದೂರು ನೀಡಿದ್ದಾರೆ.

ಆರೋಪಿ ಅನಿಲ್ ಕುಮಾರ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ನಾಗಮಂಗಲ ಡಿವೈಎಸ್‌ಪಿ ಚಲುವರಾಜು ಅವರು ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ‘ಉರಿಯುವ ಬೆಂಕಿಯಲ್ಲಿ ಕಿರಚಾಟ, ಬೆಂಕಿ ಜ್ವಾಲೆಗೆ ಓಡಾಟ ಇರಬೇಕಿತ್ತು. ಪಕ್ಕದಲ್ಲೇ ಟ್ರಾಕ್ಟರ್‌ನಲ್ಲಿ ಉಳುಮೆ ಮಾಡುತ್ತಿದ್ದವರಿಗೂ ಕೇಳಿಸಿಲ್ಲವೆಂದರೆ, ಮುಂಚೆಯೇ ಕೊಲೆ ಮಾಡಿ ಸುಟ್ಟಿರಬೇಕು’ ಎನ್ನುವ ಮಾತುಗಳು
ಕೇಳಿಬಂದಿವೆ.

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಯಕುಮಾರ್ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸಾರ್ವಜನಿಕ ಕಚೇರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ; ಸ್ವಯಂ ಪ್ರೇರಿತ ಪ್ರಕರಣ ದಾಖಲು

ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮ್, ತಾಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜ್, ದಲಿತ ಮುಖಂಡರಾದ ಚನ್ನಕೇಶವ, ರಂಗಸ್ವಾಮಿ, ಬಂಡಿಹೊಳೆ ರಮೇಶ್, ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆನಂದ್ ಗೌಡ, ದಲಿತ ಯುವರೈತ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ, ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೃತರ ಬಂಧುಗಳು ಹಾಗೂ ಕತ್ತರಘಟ್ಟ ಗ್ರಾಮಸ್ಥರು ಅಂತ್ಯ ಸಂಸ್ಕಾರದ ವೇಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...