ಮಂಡ್ಯ | ಮೈಷುಗರ್ ವ್ಯಾಪ್ತಿಯ ರೈತರಿಗೆ ಕಬ್ಬಿನ ಹಣ ಪಾವತಿಯ ಬಗ್ಗೆ ಆತಂಕ ಬೇಡ: ಜಿಲ್ಲಾಧಿಕಾರಿ ಡಾ.ಕುಮಾರ್

Date:

ಮೈಷುಗರ್ ವ್ಯಾಪ್ತಿಯ ರೈತರು ಕಬ್ಬಿನ ಹಣ ಪಾವತಿಯ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಕಬ್ಬನ್ನು ಇತರೆ ಖಾಸಗಿ ಕಾರ್ಖಾನೆಗಳಿಗೆ ಪರಭಾರೆ ಮಾಡದೇ ಮೈಷುಗರ್ ಕಂಪನಿಗೆ ಸರಬರಾಜು ಮಾಡಿ ಮೈಷುಗರ್ ಕಾರ್ಖಾನೆಯ ಉಳಿವಿಗೆ ಕೈ ಜೋಡಿಸಬೇಕೆಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ.

- Advertisement -

ಮೈಷುಗರ್ ವ್ಯಾಪ್ತಿಯ ಕಬ್ಬು ಬೆಳೆಗಾರರು ತಮ್ಮ ಕಬ್ಬನ್ನು ಮೈಷುಗರ್ ಕಂಪನಿಗೆ ಸರಬರಾಜು ಮಾಡುವುದು ಮತ್ತು ಕಬ್ಬು ಸರಬರಾಜು ಮಾಡಿದ ಹಣವನ್ನು ಸರಕಾರದ ನಿಯಮದಂತೆ 14 ದಿವಸಗಳ ಒಳಗಾಗಿ ರೈತರಿಗೆ ಕಬ್ಬಿನ ಹಣ ಪಾವತಿಸಲು ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆ ವತಿಯಿಂದ ಕೊಡಿಸುವ ಸಂಬಂಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಸ್ತುತ ಈ ಕಾರ್ಖಾನೆಯು ಈಗಾಗಲೇ ಹಣಕಾಸಿನ ಮುಗ್ಗಟ್ಟಿನಲ್ಲಿದೆ. ಹಣಕಾಸಿನ ಯಾವುದೇ ರೀತಿಯ ಪರ್ಯಾಯ ಏರ್ಪಾಡು ಇಲ್ಲದೆ ಕಾರ್ಖಾನೆ ಪ್ರಾರಂಭಿಸಿ ಕಬ್ಬು ನುರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದಿದ್ದಾರೆ.

2024-25ನೇ ಸಾಲಿನ ಹಂಗಾಮಿನಲ್ಲಿ ಮೈಷುಗರ್ ಕಾರ್ಖಾನೆ, ಮಂಡ್ಯ ವ್ಯಾಪ್ತಿಯ ರೈತರ ಕಬ್ಬನ್ನು ಇತರೆ ಕಾರ್ಖಾನೆಗಳಾದ ಎನ್‌ಎಸ್‌ಎಲ್ ಷುಗರ‍್ಸ್, ಕೊಪ್ಪ, ಐಸಿಎಲ್ ಷುಗರ‍್ಸ್, ಕೆ.ಆರ್.ಪೇಟೆ, ಶ್ರೀ ಚಾಮುಂಡೇಶ್ವರಿ ಷುಗರ‍್ಸ್, ಕೆ.ಎಂ ದೊಡ್ಡಿ ಹಾಗೂ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆ, ಅಳಗಂಚಿ ಮತ್ತು ಕುಂತೂರು ಸಕ್ಕರೆ ಕಾರ್ಖಾನೆಗಳಿಗೆ ರೈತರಾಗಲೀ ಇಲ್ಲವೇ ಕಾರ್ಖಾನೆಯವರಾಗಲೀ ಅನಧಿಕೃತ ಪರಭಾರೆ ಮಾಡಬಾರದೆಂದು ಸೂಚಿಸಿದೆ. ಹಾಗೂ ಅವರಿಗೆ ಮೈಷುಗರ್ ವ್ಯಾಪ್ತಿಯ ಕಬ್ಬು ಖರೀದಿಸದಂತೆ ನೋಟಿಸ್ ನೀಡಿ ಎಚ್ಚರಿಕೆ ನೀಡಿದ್ದಾರೆ.

ಮೈಸೂರು ಸಕ್ಕರೆ ಕಾರ್ಖಾನೆ ಕಂಪನಿಯು ಮಂಡ್ಯ ಜಿಲ್ಲೆಯ ಶತಮಾನದ ಭವ್ಯ ಇತಿಹಾಸವನ್ನು ಹೊಂದಿದ್ದು, ಸದರಿ ಸಕ್ಕರೆ ಕಾರ್ಖಾನೆೆಯನ್ನು ಉಳಿಸುವುದು ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿ ಮೈಸೂರು ಶುಗರ್ ಕಂಪನಿ ಲಿ ಮಂಡ್ಯ ಕಾರ್ಖಾನೆಯ ವ್ಯಾಪ್ತಿಯಲ್ಲಿನ ಕಬ್ಬುನ್ನು ಒಪ್ಪಿಗೆ ಮತ್ತು ಒಪ್ಪಿಗೆ ರಹಿತ ಖಾಸಗಿ ಸಕ್ಕರೆ ಕಾರ್ಖಾನೆಗಳಿಗೆ ಪರಭಾರೆಯಾದರೆ ಕಾರ್ಖಾನೆಯನ್ನು ಪ್ರಾರಂಭಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಕಬ್ಬು ಬೆಳೆಗಾರರು ಕಬ್ಬು ಸರಬರಾಜು ಮಾಡುವ ಮೂಲಕ ಸಹಕರಿಸಬೇಕು ಎಂದು ಕೋರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...