ಮಂಡ್ಯ | ಸಚಿವ ಪ್ರಿಯಾಂಕ್ ಖರ್ಗೆಗೆ ಪ್ರಾಣ ಬೆದರಿಕೆ: ಆ‌ರ್‌ಎಸ್‌ಎಸ್‌, ಬಿಜೆಪಿ ವಿರುದ್ದ ತಮಟೆ ಚಳವಳಿ

Date:

ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಪ್ರಾಣ ಬೆದರಿಕೆ ಹಾಕುತ್ತಿರುವ ಆ‌ರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ತಮಟೆ ಚಳವಳಿ ನಡೆಸಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು.

- Advertisement -

ಮಂಡ್ಯದ ಸಂಜಯ ಸರ್ಕಲ್‌ನಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು, ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ, ಬಿಜೆಪಿ ಹಾಗೂ RSS ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ಹಲವು ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಹೊತ್ತಿರುವ RSS ಅನ್ನು ರಾಜ್ಯದಲ್ಲಿ ಬ್ಯಾನ್ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹಿಸಿದರು.

“ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆ ನಡೆಸದಂತೆ ಕ್ರಮವಹಿಸಲು ಹೇಳಿದ್ದನ್ನು ನಿಷೇಧಿಸುವಂತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಬಿಂಬಿಸಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಸಚಿವ ಪ್ರಿಯಾಂಕ್ ಖರ್ಗೆಯವರ ವಿರುದ್ದ ಸಂವಿಧಾನ ವಿರೋಧಿಗಳಾದ ಮನುವಾದಿಗಳು ಮುಗಿಬಿದ್ದಿದ್ದು, ಅವರನ್ನು ಕೂಡಲೇ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯಾರ್ಥಿನಿಯ ಚಲನವಲನ ತಿಳಿಯಲು ವಾಟ್ಸ್ಯಾಪ್ ಗ್ರೂಪ್: ಮಲ್ಲೇಶ್ವರಂ ಬಳಿ ಹಾಡಹಗಲೇ ಕೊಲೆ

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ ಡಿ ಗಂಗಾಧರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್, ದಲಿತ ಸಂಘಟನೆ ಮುಖಂಡ ಗುರುಪ್ರಸಾದ್ ಕೆರಗೋಡು, ಎಂ ವಿ ಕೃಷ್ಣ, ಶ್ರೀಧರ್, ದೊಡ್ಡಯ್ಯ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಲವ, ಕಬ್ಬಾಳಯ್ಯ, ಹೊಂಬಯ್ಯ, ಹರೀಶ್, ಸಿ ಎಂ ದ್ಯಾವಪ್ಪ, ನರಸಿಂಹಮೂರ್ತಿ, ಗಂಗರಾಜು, ನಿರಂಜನ್, ನಾಗೇಶ್, ಭೈರ, ಕೆಂಪರಾಜು ಹಾಗೂ ರಾಜೇಂದ್ರ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಹಾಲು ಉತ್ಪಾದಕರಿಗೆ ದೀಪಾವಳಿ ಉಡುಗೊರೆ: ಪ್ರತಿ ಲೀಟರ್ ಹಾಲಿಗೆ ₹8 ಹೆಚ್ಚಳ – ಕೆ.ವೈ. ನಂಜೇಗೌಡ

ಹಾಲು ಉತ್ಪಾದಕ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಪ್ರತಿ ಲೀಟರ್ ಹಾಲಿಗೆ...

ಶಿರಸಿ | ಪತಿಯ ಮೇಲೆ ಹಲ್ಲೆ ನಡೆಸಿ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪ: ಪತ್ನಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಶಿರಸಿ: ಕೌಟುಂಬಿಕ ಕಲಹ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚ್ಛೇದನ...

ಉಡುಪಿ | ಹಲ್ಲೆ, ದೌರ್ಜನ್ಯಕ್ಕೆ ಕಡಿವಾಣ ಹಾಕಿ; ವಕೀಲರ ರಕ್ಷಣೆಗೆ ಸರ್ಕಾರ ಮುಂದಾಗಲಿ

ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ...

ಜಗಳ ಬಿಡಿಸಲು ಮುಂದಾದ ಯುವಕನಿಗೆ ಚಾಕು ಇರಿತ: 25 ವರ್ಷದ ನಂದನ್ ಸಾವು; ಕುಟುಂಬಸ್ಥರ ಆಕ್ರಂದನ

ಸ್ನೇಹಿತರ ನಡುವೆ ಕೆಲಸದ ವಿಚಾರವಾಗಿ ನಡೆಯುತ್ತಿದ್ದ ಮಾತಿನ ಚಕಮಕಿ ಬಿಡಿಸಲು ಮಧ್ಯಪ್ರವೇಶಿಸಿದ...