ಮಂಡ್ಯ | ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮ ರದ್ದಿಗೆ ಆಗ್ರಹ

Date:

Advertisements

ಶ್ರೀರಂಗಪಟ್ಟಣದಲ್ಲಿ ಆಯೋಜಿಸಿರುವ ಹಿಂದೂ ಜಾಗರಣಾ ವೇದಿಕೆಯ ಶಾಂತಿ ಸೌಹಾರ್ದತೆಯ ವಿರೋಧಿ ಕಾರ್ಯಕ್ರಮವನ್ನು ರದ್ದುಪಡಿಸಿ ಜನಸಾಮಾನ್ಯರಿಗೆ ಹನುಮ ಜಯಂತಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟು ಶ್ರೀರಂಗಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು  ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.

ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, “ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್‌ 17ರಿಂದ 24ರವರೆಗೆ ಹನುಮ ಮಾಲೆ ಮತ್ತು ಸಂಕೀರ್ಣತಾ ಯಾತ್ರೆಯನ್ನು ಆಯೋಜಿಸಿದ್ದು, ಸದರಿ ಯಾತ್ರೆಗೆ ಸಾವಿರಾರು ಜನರಿಗೆ ಬಲವಂತದ ಮಾಲೆ ಹಾಕಿ ಹಣ ಕೊಟ್ಟು ಮತ್ತು ಬಾಡಿಗೆ ಜನರು ಬರಲು ತಯಾರಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿದರು.

“ಕಳೆದ ವರ್ಷ ಹಿಂದೂ ಜಾಗರಣಾ ವೇದಿಕೆ ಇದೇ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಮುಸ್ಲಿಮರ ಮನೆಗಳ ಮೇಲೆ ದಾಳಿ ಮಾಡಿ ಮತ್ತು ಜಮಿಯಾ ಮಸೀದಿಗೆ ನುಗ್ಗಲು ಪ್ರಯತ್ನಿಸಿದ್ದರು. ಹಾಗೆಯೇ ಅವರ ಕಾರ್ಯಕ್ರಮದ ಉದ್ದೇಶವು ಜಮಿಯಾ ಮಸೀದಿಯನ್ನು ಕೆಡವಿ ಮೂಡಲ ಬಾಗಿಲು ಆಂಜನೇಯ ದೇವಸ್ಥಾನ ಮಾಡುತ್ತೇವೆಂದು ಕಾರ್ಯಕ್ರಮವೊಂದರಲ್ಲಿ ಬಹಿರಂಗವಾಗಿ ಘೋಷಣೆ ಮಾಡಿದ್ದರು. ಪೂಜಾ ಸ್ಥಳಗಳ ಕಾಯ್ದೆ 1991ರ ಪ್ರಕಾರ ಇದು ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧವಾಗಿರುತ್ತದೆ” ಎಂದು ಹೇಳಿದರು.

Advertisements

“ಈ ಬಾರಿಯೂ ಕೂಡ ಹನುಮ ಜಯಂತಿಯ ಹೆಸರಿನಲ್ಲಿ ಹಿಂದೂ ಜಾಗರಣಾ ವೇದಿಕೆಯು ಮಸೀದಿ ಕೆಡವಿ ಮಂದಿರ ಕಟ್ಟುವ ಘೋಷಣೆಯೊಂದಿಗೆ ಮಾಲಾಧಾರಣೆ-2023 ಕಾರ್ಯಕ್ರಮವನ್ನು ಆಯೋಜಿಸಿದ್ದು, ಅವರ ಕರಪತ್ರದಲ್ಲಿಯೇ “ಮತಾಂಧ ಟಿಪ್ಪುವಿನ ಆಕ್ರಮಣಕ್ಕೆ ಒಳಗಾದ ಶ್ರೀ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ ಸಂಕಲ್ಪಕ್ಕೆ ನಡೆಯುವ ಈ ಜನಾಂದೋಲನದಲ್ಲಿ ಭಾಗವಹಿಸಿ” ಎಂದು ಜನರಿಗೆ ಕರೆ ಕೊಡುತ್ತಾ ಶಾಂತವಾಗಿರುವ ಶ್ರೀರಂಗಪಟ್ಟಣದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಹಾಗೂ ಜನಾಂಗೀಯ ಗಲಭೆ ಹೆಚ್ಚಿಸುವ ಪ್ರಯತ್ನಗಳನ್ನು ಹಿಂದೂ ಜಾಗರಣಾ ವೇದಿಕೆಯು ಮಾಡುತ್ತಿದೆ” ಎಂದರು.

“ಈ ಬಾರಿಯೂ ಶ್ರೀರಂಗಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿ ಮಾಡಲು ಮತ್ತು ಮಸೀದಿ ಕೆಡವಿ ಶಾಂತಿ ಸುವ್ಯವಸ್ಥೆ ಹಾಳುಮಾಡಲು, ಬೇರೆ ಜಿಲ್ಲೆಗಳಿಂದ ಹಣ ಕೊಟ್ಟು ಜನರನ್ನು ಕರೆಸಿ ಕಾರ್ಯಕ್ರಮ ಆಯೋಜಿಸಿರುತ್ತಾರೆ. ಆದ್ದರಿಂದ ಹಿಂದೂ ಜಾಗರಣಾ ವೇದಿಕೆಯ ಶ್ರೀರಂಗಪಟ್ಟಣದ ಡಿಸೆಂಬರ್ 24 ರ ಕಾರ್ಯಕ್ರಮವನ್ನು ರದ್ದುಪಡಿಸಿ, ಈ ಸಂಘಟನೆಯ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ನಿಷೇಧ ಹೇರಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ತಮ್ಮ ಸಂಬಂಧಿಕರಿಗೆ ಟಿಕೆಟ್‌ ಗಿಟ್ಟಿಸಲು ಪ್ರಮುಖ ಕಾಂಗ್ರೆಸ್ಸಿಗರ ಲಾಬಿ

“ಹನುಮ ಮಾಲೆ ಸಂದರ್ಭದಲ್ಲಿ ಜನಸಾಮಾನ್ಯರು ಬಯಸುವುದಾದರೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಹನುಮ ಜಯಂತಿ ಮಾಡಲು ಸೂಕ್ತ ನಿಬಂಧನೆಗಳೊಂದಿಗೆ ಆಚರಣೆಗೆ ಅವಕಾಶ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ವೇಳೆ ಸಮಾನ ಮನಸ್ಕ ವೇದಿಕೆ ಜಿಲ್ಲಾ ಸಂಚಾಲಕರು, ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X