ಮಂಡ್ಯ | ಡೆಂಗ್ಯೂ ದಿನಾಚರಣೆ ಹಾಗೂ ಹೆಣ್ಣು ಮಕ್ಕಳ ಗರ್ಭಕಂಠದ ಕ್ಯಾನ್ಸರ್ ತಡೆ ಜಾಗೃತಿ ಕಾರ್ಯಕ್ರಮ

Date:

ಮಾರಣಾಂತಿಕ ಡೆಂಗ್ಯೂ ಜ್ವರ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಡೆಂಗ್ಯೂ ನಿಯಂತ್ರಣ ಸಾಧ್ಯವೆಂದು ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಎನ್. ಆಶಾಲತಾ ಹೇಳಿದರು.

- Advertisement -

ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಾರಕ್ಕೆ ಎರಡು ಬಾರಿ ಶಾಲಾ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ನೀರು ಸಂಗ್ರಹಣೆ ಮಾಡುವ ಸಿಮೆಂಟ್ ತೊಟ್ಟಿಗಳು, ಪ್ಲಾಸ್ಟಿಕ್ ಡ್ರಮ್ಮುಗಳು ಹಾಗೂ ಮನೆಯ ಸುತ್ತಮುತ್ತ ಬಳಕೆಯಾಗದೆ ಇರುವ ಒಡೆದ ಬಾಟಲಿಗಳು, ವಾಹನದ ಟೈರುಗಳು, ಎಳನೀರು ಚಿಪ್ಪುಗಳು, ಒರಳಕಲ್ಲು ಮೊದಲಾದ ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಪರಿಶೀಲನೆ ನಡೆಸಿ ಮೂಲೋತ್ಪಾದನಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನಂತರ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಿ.ಎಂ. ಶ್ರೀಧರ್ ಮಾತನಾಡಿ, ಡೆಂಗ್ಯೂ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಲಭ್ಯವಿಲ್ಲ. ಸೊಳ್ಳೆಗಳ ನಿಯಂತ್ರಣ ಕ್ರಮಗಳೇ ಡೆಂಗ್ಯೂ ತಡೆಗೆ ಮುಖ್ಯ ಮಾರ್ಗವಾಗಿದ್ದು, ಈಡಿಸ್ ಈಜಿಪ್ಟಿ ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

1000318766

ಇದಕ್ಕೂ ಮುನ್ನ ನ್ಯೂ ಆಕ್ಸ್ಫರ್ಡ್ ಶಾಲೆಯ ಮುಂಭಾಗದಲ್ಲಿ ಹೆಣ್ಣು ಮಕ್ಕಳ ಗರ್ಭಕಂಠದ ಕ್ಯಾನ್ಸರ್ ತಡೆಗಾಗಿ ಸರ್ಕಾರದಿಂದ ಉಚಿತವಾಗಿ 14 ರಿಂದ 15 ವರ್ಷದೊಳಗಿನ ಬಾಲಕಿಯರಿಗೆ ನೀಡಲಾಗುತ್ತಿರುವ HPV ಲಸಿಕಾ ಅಭಿಯಾನ ಕುರಿತು ಜಾಗೃತಿ ಜಾಥಾವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಲಾಯಿತು.

ಈ ವಿಡಿಯೋ ವೀಕ್ಷಿಸಿ:https://youtu.be/AZ7t09oFqBM?si=zbu7mUsSm2Z7zX6L

ಈ ವೇಳೆ ಶಾಲಾ ಮಕ್ಕಳಿಗೆ HPV ಲಸಿಕೆ ಸುರಕ್ಷಿತ ಲಸಿಕೆಯಾಗಿದ್ದು, ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಕೃಷಿ ವೆಚ್ಚ, ತೈಲ ಏರಿಕೆ ವಿರುದ್ಧ ರೈತ ಸಂಘದ ಆಕ್ರೋಶ: ಹುಣಸೂರಿನಲ್ಲಿ ಧರಣಿ

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯೆ ಐಶ್ವರ್ಯ, ಶಿಕ್ಷಕರಾದ ಅರುದಂತಿ, ರಾಹುಲ್, ಮೆರಿಲ್, ಗೋವಿಂದಯ್ಯ, ಕಾವ್ಯ, ವೈಶಾಲಿ, ಪವಿತ್ರ, ಸಲ್ಮಾ, ಚೈತ್ರಾ, ಸೌಂದರ್ಯ, ಸುಸ್ಮಿತಾ, ಪ್ರೀತಿ, ವಾಣಿ, ಅಹಲ್ಯಾ, ಆರೋಗ್ಯ ಇಲಾಖೆಯ ರೋಗಲಕ್ಷಣ ಶಾಸ್ತ್ರಜ್ಞೆ ಮೇಘನಾ, ಸಾರ್ವಜನಿಕ ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಡಾ. ಮೃಣಾಲಿನಿ, ತಾಲ್ಲೂಕು ಆರೋಗ್ಯ ಮೇಲ್ವಿಚಾರಕ ಜಿ. ಮೋಹನ್, ಹೇಮಣ್ಣ ಜಿ.ಬಿ., ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಬಿ. ಮಂಗಳ, ಎಸ್.ಸಿ. ವಾಣಿ, ಸ್ಮಿತಾ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಸ್.ಪಿ. ಪುಣೀಂದ್ರ, ಎಂ.ಎನ್. ಕೃಷ್ಣೇಗೌಡ, ಮೇಘನಾ ಸ್ನೇಹ, ಆಶಾ ಕಾರ್ಯಕರ್ತೆಯರಾದ ಹೇಮಾವತಿ, ಚಾಂದನಿ, ಅಶ್ವಿನಿ, ಮೀನಾ ಹಾಗೂ ಆಕ್ಸ್ಫರ್ಡ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಕೋಲಾರ | ಮಾನವ ಹಕ್ಕುಗಳ ಮಂಡಳಿಯ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ನೇಮಕ

ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್...

ಬಾಗೇಪಲ್ಲಿ | ಎತ್ತಿನಹೊಳೆ ಅಲ್ಲ ಹಣದಹೊಳೆ ಹರಿಸುವ ಯೋಜನೆ-ಸಂಸದ ಡಾ.ಕೆ.ಸುಧಾಕರ್

ಕೇರಳ,ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರ ಪಟ್ಟಿಯಲ್ಲಿ...