ಮಂಡ್ಯ | ಮರ ಪುಡಿಮಾಡುವ ಯಂತ್ರದಿಂದ ಪರಿಸರ ನಾಶ; ಲೈಸೆನ್ಸ್ ಪಡೆಯದೆ ಅಕ್ರಮ

Date:

Advertisements

ಮರ ಪುಡಿಮಾಡುವ ಯಂತ್ರದಿಂದ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿರುವುದರಿಂದ ಪರಿಸರ ನಾಶವಾಗುತ್ತಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ, ಕೆಆರ್‌ಪೇಟೆ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳಲ್ಲಿ, ಅರಣ್ಯ ಇಲಾಖೆಯ ಅನುಮತಿ ಇಲ್ಲದೆ, ಲೈಸೆನ್ಸ್ ಪಡೆಯದೆ ಬಹಳಷ್ಟು ಯಂತ್ರಗಳಿಂದ ಅಕ್ರಮವಾಗಿ ಮರಗಳನ್ನು ಕಡಿದು ಅವಿಗಳನ್ನು ಪುಡಿಮಾಡಲಾಗುತ್ತಿದೆ.

ಪಾಂಡವಪುರ ತಾಲೂಕಿನ ಎಲೆಕೆರೆ, ದೇವೇಗೌಡನ ಕೊಪ್ಪಲು, ಕೆಆರ್‌ಪೇಟೆ ತಾಲೂಕಿನ ಹೊಸಹೊಳಲು, ಹೆಮ್ಮನಹಳ್ಳಿ, ಅಗಸನಹಳ್ಳಿ ಗ್ರಾಮಗಳಲ್ಲಿ ದಿನಕ್ಕೆ ಸರಿಸುಮಾರು 800ರಿಂದ 1000 ಟನ್‌ಗಳವರೆಗೆ ಮರಗಳನ್ನು ಕಡಿದು, ಪರಿಸರ ನಾಶ ಮಾಡಲಾಗುತ್ತಿದೆ.

“ಮರ ಕಡಿಯಲು ಯಾವುದೇ ಲೈಸೆನ್ಸ್ ಇಲ್ಲದೆ ಅಕ್ರಮವಾಗಿ ಮರ ಕಡಿದು ಪುಡಿಮಾಡುವ ಪರಿಸರ ನಾಶ ಮಾಡುತ್ತಿದ್ದಾರೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸದೆ ಕಣ್ಣುಮುಚ್ಚಿ ಕುಳಿತಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

Advertisements

“ಈ ಸಲದ ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪಮಾನ ಮಂಡ್ಯ ಜಲ್ಲೆಯಲ್ಲಿ 43 ಡಿಗ್ರಿ ಸೆಲ್ಸಿಸ್‌ವರೆಗೆ ಕಂಡುಬಂದಿತ್ತು. ಇದೇ ರೀತಿ ಚಿಪ್ಪಿಂಗ್‌ ಮಿಷಿನ್‌ಗಳ ಕಾರ್ಯ ನಿರ್ವಹಣೆಯಿಂದ ಪರಿಸರ ನಾಶ ಮುಂದುವರಿದರೆ ಮುಂದಿನ ದಿನಗಳಲ್ಲಿ 50 ಡಿಗ್ರಿ ಸೆಂಟಿಗ್ರೇಡ್ ದಾಟುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವಂತೆ ಸಚಿವ ಕೆ ಹೆಚ್ ಮುನಿಯಪ್ಪ ಸೂಚನೆ

ಮಂಡ್ಯ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಹೇಳಿಕೆ ಪಡೆಯಲು ಈ ದಿನ.ಕಾಮ್‌ ಪ್ರಯತ್ನಿಸಿದೆಯಾದರೂ ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಕೂಡಲೇ ಎಲ್ಲ ಮರ ಪುಡಿಮಾಡುವ(ಚಿಪ್ಪಿಂಗ್ ಮಿಷಿನ್‌) ಯಂತ್ರಗಳನ್ನು ಸೀಜ಼್ ಮಾಡದೇ ಹೋದರೆ ಸಾರ್ವಜನಿಕರು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X