ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಬೆಂಬಲ ಅವಶ್ಯ : ಸಚಿವ ಚಲುವರಾಯಸ್ವಾಮಿ

Date:

ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಎಲ್ಲರ ಸಹಕಾರ, ಬೆಂಬಲ ಅತ್ಯವಶ್ಯಕ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಹೇಳಿದರು.

- Advertisement -

ಅವರು ಮಂಡ್ಯ ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಜಿಲ್ಲೆಯ ಸಾಹಿತಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಂಡ್ಯದ ಆತಿಥ್ಯ, ಸತ್ಕಾರವನ್ನು ಎಲ್ಲರೂ ನೆನೆಯಬೇಕು. ಆ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಗೊಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಮಂಡ್ಯಕ್ಕೆ ತನ್ನದೇ ಆದ ಸೊಗಡಿದೆ. ವೈಶಿಷ್ಟ್ಯ ಇದೆ. ಸಮ್ಮೇಳನ ಯಶಸ್ಸಿ ಎಲ್ಲರ ಸಲಹೆ, ಮಾರ್ಗದರ್ಶನ, ಅನಿಸಿಕೆ ಪಡೆಯಲಾಗುತ್ತಿದೆ. ಸಮಿತಿಯೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಸಮ್ಮೇಳನವನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ನೆರವೇರಿಸಲಾಗುವುದು. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸಾಹಿತ್ಯ ಸಮ್ಮೇಳನದ ಕುರುಹು ಉಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಕಲಾಮಂದಿರ, ಅಂಬೇಡ್ಕರ್ ಭವನ, ರೈತ ಭವನಗಳ ದುರಸ್ತಿ ಕಾರ್ಯ ಚಾಲನೆ ನೀಡಲಾಗಿದೆ. ಶಿವಪುರ ಧ್ವಜ ಸತ್ಯಾಗ್ರಹ ಪ್ರತಿಷ್ಠಾನ ರಚನೆ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಸ್ಥಾಪನೆ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಹೇಶ್ ಜೋಷಿ ಮಾತನಾಡಿ, ಪ್ರಜಾಪ್ರಭುತ್ವ ಅಡಿಯಲ್ಲಿ ಕೆಲಸ ಮಾಡಬೇಕಿದೆ. ಸರ್ಕಾರದ ಸಹಕಾರ ಸಹಭಾಗಿತ್ವ, ಸಮನ್ವಯತೆ ಸಮಾಲೋಚನೆ ಮುಖ್ಯ. ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಜಿಲ್ಲಾಡಳಿತ ಅತಿ ಉತ್ಸಾಹದಿಂದ ಕೆಲಸ ಮಾಡುತ್ತಿದೆ. ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಬೆಂಬಲ ಮುಖ್ಯ ಎಂದರು.

ಫ್ರೊ.ಕೃಷ್ಣೇಗೌಡ ಮಾತನಾಡಿ, ಸಮ್ಮೇಳನದಲ್ಲಿ ಬಹುಮುಖ್ಯವಾಗಿ ಜನರು ಗ್ರಹಿಸುವುದು ಸಮ್ಮೇಳನದ ಧ್ವನಿ ಏನು? ಎಂಬುದು. ಸಮ್ಮೇಳನದ ಬಗ್ಗೆ ಜನರ ಗ್ರಹಿಕೆ ಏನು ಎಂಬುದು ಮುಖ್ಯ. ಅತಿ ದೊಡ್ಡ ಕಾರ್ಯಕ್ರಮ ಇದಾಗಿದ್ದು, ಸುಸಂಸ್ಕೃತದ ಸಮ್ಮೇಳನ ಇದಾಗಲಿ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ್ ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನವಲ್ಲ ಇದು ಎಲ್ಲಾ ಕನ್ನಡಿಗರ ಮನ ಮನೆಯ ಸಮ್ಮೇಳನ ಎಂದು ಹೇಳಿದರು.

ಬರಹಗಾರರಾದ ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ, ಯಕ್ಷಗಾನ ಕಲೆಯ ಮೂಲ ಮಂಡ್ಯ. ಯಕ್ಷಗಾನದ ತವರು ಮಂಡ್ಯ. ಕೆಂಪಣ್ಣಗೌಡ ಮೊದಲ ಕವಿ. ಮೂಡಲಪಾಯ ಕಲೆ ಮತ್ತೆ ಬೆಳಕಿಗೆ ಬರಬೇಕು. ಮಂಡ್ಯ ಜಿಲ್ಲೆಯ ಕೊಡುಗೆಗಳನ್ನು ಕೇಂದ್ರವಾಗಿಟ್ಟುಕೊಂಡು  ಚರ್ಚೆಯಾಗಬೇಕು. ರಾಜ್ಯಮಟ್ಟದ ವಿದ್ವಾಂಸರನ್ನು ಕರೆಸಬೇಕು ಎಂದು ಸಲಹೆ ನೀಡಿದರು.

ಕೃಷಿ ಸಂಸ್ಕೃತಿಗೆ ಮಂಡ್ಯ ಕೊಡುಗೆ ಅಪಾರ.  ನೇಗಿಲಯೋಗಿ ಪರಿಕಲ್ಪನೆ ಚರ್ಚೆಯಾಗಬೇಕು. ಸಮ್ಮೇಳನಕ್ಕೆ ಘನತೆಯೇ ಗೋಷ್ಠಿ. ಗೋಷ್ಠಿ ಬಗ್ಗೆ ಚರ್ಚೆ ಆಗಬೇಕು. ಸಾಹಿತ್ಯ, ಕೃಷಿ, ಸಂಸ್ಕೃತಿ ಮತ್ತು ಜಾನಪದ ಗೋಷ್ಠಿಯಾಗಬೇಕು. ಅನುವಾದ ಗೋಷ್ಠಿ ಆರಂಭಿಸುವ ಮೂಲಕ ಅನುವಾದ ಗೋಷ್ಠಿ ಮೊದಲು ಮಾಡಿದ ಕೀರ್ತಿ ಮಂಡ್ಯ ಸಮ್ಮೇಳನಕ್ಕೆ ಸಲ್ಲಬೇಕು ಎಂದರು.

ಇದನ್ನು ಓದಿದ್ದೀರಾ? ಬೆಂಗಳೂರು | ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್​ನಲ್ಲಿ ಭೀಕರ ಅಗ್ನಿ ದುರಂತ: ಸಿಬ್ಬಂದಿ ಯುವತಿ ಸಾವು

ಕನ್ನಡ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಗೌಡ ಮಾತನಾಡಿ, ಮಂಡ್ಯ ಮಾದರಿ ಇಟ್ಟುಕೊಂಡು ಸಮ್ಮೇಳನ ಆಯೋಜಿಸಲಿ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕು. ಜಿ.ನಾರಾಯಣ್, ಶಂಕರೇಗೌಡ್ರು, ಸಾಹುಕಾರ್ ಚೆನ್ನಾಯ್ಯ, ಶೀಂಕಠೇಗೌಡ್ರ ಹೆಸರನ್ನು ಮಹಾದ್ವಾರಗಳಿಗೆ ಇಡಬೇಕು. ಜಿಲ್ಲೆಯ ಮಹನೀಯರನ್ನು ನೆನೆಯಬೇಕು ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಕೃಷ್ಣೇಗೌಡ ಹುಸ್ಕೂರು, ವಿ ಹರ್ಷ ಸೇರಿದಂತೆ ಇನ್ನಿತರರ ಹಿರಿಯ ಸಾಹಿತಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...