ಮಂಡ್ಯ | ಅತಿಯಾದ ಮೊಬೈಲ್ ಬಳಕೆ ಅನಾರೋಗ್ಯಗಳಿಗೆ ರಹದಾರಿ: ಡಾ ನಿಶ್ಚಲಾನಂದ ಸ್ವಾಮೀಜಿ

Date:

ಜನಸಾಮಾನ್ಯರು ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಪರಿಣಾಮವಾಗಿ, ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಗಳಾದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.

- Advertisement -

ಕ್ಯಾತಘಟ್ಟದ ಸರ್ಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ, ಮಂಡ್ಯದ ಪರಿಚಯ ಪ್ರಕಾಶನ, ಅಳಿಲು ಸೇವಾ ಬಳಗ ಹಾಗೂ ಮತ್ತಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ಉತ್ತಮ ಆರೋಗ್ಯ ಮತ್ತು ಜೀವನ ಕ್ರಮ’ ಕುರಿತು ಜಾಗೃತಿ ಉಪನ್ಯಾಸ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಮಕ್ಕಳು, ವಿದ್ಯಾರ್ಥಿಗಳು, ಯುವಕರು, ವಯಸ್ಕರು, ವಯೋವೃದ್ಧರು ನಿತ್ಯವೂ ಮೋಬೈಲ್ ನ್ನು ವಿಪರೀತವಾಗಿ ಉಪಯೋಗಿಸುತ್ತಿದ್ದಾರೆ. ಇದರಿಂದ, ಬಹುಮುಖ್ಯವಾಗಿ ನೆನಪಿನ ಶಕ್ತಿ ನಾಶವಾಗುತ್ತಿದೆ. ಮನುಷ್ಯ ಸಂಬಂಧಗಳು ಯಾಂತ್ರಿಕವಾಗಿವೆ. ಜೊತೆಗೆ ಮಾನಸಿಕ, ಬೌದ್ಧಿಕ ಅನಾರೋಗ್ಯವನ್ನು ತಂದೊಡ್ಡುತ್ತಿದೆ ಎಂದು ಎಚ್ಚರಿಸಿದರು.

ರೈತರು ತಮ್ಮ ಕೃಷಿ ಭೂಮಿಗೆ ಅತಿಯಾದ ರಾಸಾಯನಿಕ ಗೊಬ್ಬರ, ಕೀಟನಾಶಕವನ್ನು ಬಳಸುತ್ತಿರುವುದರಿಂದ ಭೂಮಿ ಕ್ರಮೇಣವಾಗಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಾ ಬರುತ್ತಿದೆ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ದೇಶದ ರೈತ ಸಮೂಹ ರಾಸಾಯನಿಕ ಬಳಕೆ ಹೆಚ್ಚು ಉಪಯೋಗಿಸುತ್ತಿರುವ ಪರಿಣಾಮ ನಿರೀಕ್ಷಿತ ಇಳುವರಿ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಜನಸಾಮಾನ್ಯರು ಸೇವಿಸುತ್ತಿರುವ ಆಹಾರ ಪದಾರ್ಥಗಳಲ್ಲಿ ಹಲವು ತರಹದ ರಾಸಾಯನಿಕ ಅಂಶಗಳು ಪತ್ತೆಯಾಗುತ್ತಿವೆ. ಜನತೆ ಗಂಭೀರ ಸ್ವರೂಪದ ಕಾಯಿಲೆಗಳಿಂದ ಬಳಲುವಂತೆ ಮಾಡಿದೆ. ರೈತರು ಹೈಬ್ರಿಡ್ ಮಾದರಿ ತಳಿಯ ಹಸುಗಳನ್ನು ಸಾಕಿ ಹೆಚ್ಚಿನ ಹಾಲನ್ನು ಉತ್ಪಾದಿಸುತ್ತಿದ್ದು, ಇದು ಕೂಡ ವಯಸ್ಕರು, ವಯೋವೃದ್ಧರ ಮೇಲೆ ಅಡ್ಡ ಪರಿಣಾಮಗಳನ್ನು ಬೀರುತ್ತಿದೆ. ಆದ್ದರಿಂದ, ನಮ್ಮ ದೇಶೀಯ ತಳಿಗಳಾದ ಹಳ್ಳಿಕಾರ್, ಮಲೆನಾಡು ಗಿಡ್ಡ ಸೇರಿದಂತೆ ಇತರೆ ದೇಶೀಯ ತಳಿಗಳನ್ನು ಸಾಕಲು ಮುಂದಾಗಬೇಕು. ನಮ್ಮ ಮಠದಿಂದಲೂ ಈ ಕುರಿತಾಗಿ ಹೆಚ್ಚಿನ ಅರಿವನ್ನು ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಮಾತನಾಡಿ, ಕಳೆದ ಇಪ್ಪತ್ತು ಮೂವತ್ತು ವರ್ಷಗಳ ಹಿಂದೆ ಜನಸಾಮಾನ್ಯರಲ್ಲಿ ಪುಸ್ತಕಗಳನ್ನು ಮನೆಯಲ್ಲಿಟ್ಟು ಓದುವ ಹವ್ಯಾಸವಿತ್ತು. ಪೌರಾಣಿಕ ಮತ್ತು ಸಾಮಾಜಿಕ ನಾಟಕಗಳನ್ನು ನೋಡಿ ಆನಂದಿಸುತ್ತಿದ್ದರು. ಅದರಲ್ಲಿನ ಜೀವನ ಮೌಲ್ಯಗಳನ್ನು ಬದುಕಿಗೆ ಅಳವಡಿಸಿಕೊಳ್ಳುತ್ತಿದ್ದರು. ಆ ಮೂಲಕ ಮನೋರಂಜನೆ ಮತ್ತು ಮನೋವಿಕಾಸ ಸಾಧ್ಯವಾಗುತ್ತಿತ್ತು ಎಂದರು.

ಆದರೆ, ಇಂದು ಟಿವಿ, ಮೊಬೈಲ್, ಲ್ಯಾಪ್ ಟಾಪ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳೆ ಜನರ ಆರಾಧ್ಯ ದೈವದಂತಾಗಿವೆ. ಅನಗತ್ಯ ರೀತಿಯಲ್ಲಿ ವೆಚ್ಚ ಮಾಡುವ ಜನತೆ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾದ ಪುಸ್ತಕಗಳಿಗೆ ಏಕೆ ಹಣ ವಿನಿಯೋಗಿಸುವುದಿಲ್ಲ ಎಂದು ಪ್ರಶ್ನಿಸಿದ ಅವರು, ಮನೆಯ ಹಿರಿಯರು ಮೊದಲು ತಾವು ಪುಸ್ತಕಗಳ ಓದುವ ಹವ್ಯಾಸ ಬೆಳೆಸಿಕೊಂಡು, ಬಳಿಕ ಮನೆಮಂದಿಗೆಲ್ಲ ಈ ಅಭಿರುಚಿ ಬೆಳೆಸಬೇಕು ಎಂದು ಕರೆ ನೀಡಿದರು.

ಭಾರತೀ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಎಸ್. ಬೋರೇಗೌಡ ಮಾತನಾಡಿ, ಸಾಲು ಮರದ ತಿಮ್ಮಕ್ಕ ನಮಗೆ ಮಾದರಿಯಾಗಬೇಕು. ಹಲವಾರು ಸಸಿಗಳನ್ನು ನೆಟ್ಟು ಪೋಷಿಸಿ ಮರಗಳನ್ನಾಗಿ ಮಾಡಿದ್ದು ದಂತೆಕತೆ‌. ಹಿಂದೆ ಹಳ್ಳಿಗಳಲ್ಲಿ ಅತಿ ಹೆಚ್ಚು ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸುತ್ತಿದ್ದರು. ಆದರೆ, ಇಂದು ಯಾವುದೇ ಮರಗಳನ್ನು ಬಿಡದೆ ಕಡಿಯುವ ಮನಸ್ಥಿತಿ ರೂಢಿಸಿಕೊಂಡಿರುವುದು ಶೋಚನೀಯ ಎಂದರು.

ಈ ವಿಶೇಷ ವಿಡಿಯೋ ವೀಕ್ಷಿಸಿ: https://www.youtube.com/watch?v=eXeAlpsxb6g

ಇದೇ ವೇಳೆ ಬೆಂಗಳೂರಿನ ಪತಂಜಲಿ ಯೋಗಾಶ್ರಮ ಟ್ರಸ್ಟಿನ ಅಧ್ಯಕ್ಷ ಪ್ರಕಾಶ್ ಗುರೂಜಿ ಮಾತನಾಡಿ, ಗ್ರಾಮದಲ್ಲಿ ಯಾರು ಸಕ್ರಿಯವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲವೋ ಅವರು ಯೋಗಾ, ನಡಿಗೆಯಂತಹ ಹವ್ಯಾಸ ಬೆಳೆಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.21ರಂದು ಅಕ್ಷರ ದಾಸೋಹ ಕಾರ್ಮಿಕರಿಂದ ರಾಜ್ಯವ್ಯಾಪಿ ಪ್ರತಿಭಟನೆ: ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಪತ್ರ ಸಲ್ಲಿಕೆ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯ ಮನ್ ಪ್ರೀತ್ ಸಿಂಗ್, ಹಿರಿಯ ಪತ್ರಕರ್ತ ಸುಭಾಷ್ ಬಣಗಾರ್, ಉಪನ್ಯಾಸಕ ರವಿಕಿರಣ್, ಕ್ಯಾತಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎನ್. ಶಿವನಂಜಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿ ಕೆ.ಎಂ. ರೇಖಾ, ಗ್ರಾಮದ ಪ್ರಮುಖರಾದ ಕೆ.ಟಿ. ಜಯಪ್ರಕಾಶ್, ಬಿ. ಅಜಿತಕುಮಾರ್, ಕೆ. ಗಿರೀಶ್, ರವಿಕುಮಾರ್ ಕ್ಯಾತಘಟ್ಟ, ಬಿಎಂಟಿಸಿ ನೌಕರ ಗುರುದೇವರಹಳ್ಳಿ ಪುಟ್ಟಸ್ವಾಮಿ, ಕವಿಗಳಾದ ಹನುಮಂತಪ್ಪ ಕರಡಕೆರೆ, ಚಂದ್ರು ಬೆಸಗರಹಳ್ಳಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...