ಮಂಡ್ಯ | ಏಕರೂಪ ಶಿಕ್ಷಣಕ್ಕಾಗಿ ಆಗ್ರಹಿಸಿ ರೈತ ಸಂಘದಿಂದ 1295ಕಿಮೀ ಪಾದಯಾತ್ರೆ

Date:

ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ರೈತ ಸಂಘದ ಮುಖಂಡರು ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ 1295ಕಿಮೀ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದು, ಏಪ್ರಿಲ್.11ರ ಬೆಳಗ್ಗೆ 6:00ಕ್ಕೆ (ಶನಿವಾರ), ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ಚಾಲನೆ ನೀಡುವುದಾಗಿ ಜಿಲ್ಲಾಧ್ಯಕ್ಷರಾದ ಇಂಡವಾಳು ಚಂದ್ರಶೇಖರ್ ಮಾಹಿತಿ ನೀಡಿದರು.

- Advertisement -

ಮಂಡ್ಯ ಜಿಲ್ಲೆಯ 233 ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಾವಿರಕ್ಕೂ ಹೆಚ್ಚು ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಭೇಟಿ ಮಾಡಿ, ಜನಜಾಗೃತಿ ಮೂಡಿಸಿ, ಭ್ರಷ್ಟ ಶಿಕ್ಷಣ ಇಲಾಖೆಯನ್ನು ಬಡಿದೆಬ್ಬಿಸಲಿದೆ. ಪಾದಯಾತ್ರೆ ಸುಮಾರು 60 ದಿನಗಳ ಕಾಲ ನಡೆಯಲಿದ್ದು, ಪ್ರತಿಯೊಂದು ಹಳ್ಳಿಗಳಲ್ಲೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಮತ ಹಾಕುವುದಿಲ್ಲ ಎಂಬ ಪ್ರತಿಜ್ಞೆ ಮಾಡಿಸಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಲಕ್ಷಾಂತರ ರೂಪಾಯಿ ಸಂಬಳ ಪಡೆದು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಿ, ಪಾಠಕ್ಕಿಂತ ರಾಜಕೀಯ ಮಾಡುತ್ತಿರುವ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಆಯಾಯ ಶಾಲೆಯ ಗೇಟಿಗೆ ಕಟ್ಟುವಂತೆ ಎಸ್ಡಿಎಂಸಿ ಸಂಘದ ಪದಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಹಾಗೂ, ಶಿಕ್ಷಣ ಇಲಾಖೆ ವಿರುದ್ಧ ಕರ್ತವ್ಯ ಲೋಪದ ಆಧಾರದ ಮೇಲೆ ಕಾನೂನು ಕ್ರಮ ಜರುಗಿಸದೇ ಇದ್ದರೆ, ಕರ್ನಾಟಕ ಎಸ್ಡಿಎಂಸಿ ಸಂಘದ ಮೂಲಕ, ಸರ್ಕಾರಿ ಸಂಬಳ ತೆಗೆದುಕೊಂಡು ಪಾಠ ಮಾಡದೆ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತಿರುವ ಆಧಾರದ ಮೇಲೆ ನ್ಯಾಯಾಲಯದ ಮೊರೆ ಹೋಗಿ ಅಂತಹ ಶಿಕ್ಷಕರನ್ನು ಸೇವೆಯಿಂದ ವಜಾ ಮಾಡಿ, ನಿವೃತ್ತಿ ಭತ್ಯೆಯನ್ನು ತಡೆ ಹಿಡಿದು ಸೇವೆಯಿಂದ ಬಿಡುಗಡೆ ಮಾಡುವವರೆಗೂ ಉಗ್ರ ಹೋರಾಟ ನಡೆಸಲಾಗುವುದು. ಈ ಮೂಲಕ ಶಿಕ್ಷಣ ಇಲಾಖೆಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದರು.

ಜಿಲ್ಲೆಯ ವಿದ್ಯಾರ್ಥಿ ಹಾಗೂ ಯುವ ಮಿತ್ರರು, ಪದವೀಧರರು, ನಿರುದ್ಯೋಗಿಗಳು, ನಿವೃತ್ತ ನೌಕರರು ಈ ಐತಿಹಾಸಿಕ ಪಾದಯಾತ್ರೆಗೆ ಬೆಂಬಲಿಸಿ, ಪಾಲ್ಗೊಂಡು ನಮ್ಮ ಜೊತೆ ಸಾವಿರ ಹೆಜ್ಜೆ ಹಾಕಿ ರಾಜ್ಯದಲ್ಲಿ ಕನ್ನಡ ಶಾಲೆ ಉಳಿಸಿಕೊಳ್ಳುವ, ಬೆಳೆಸುವ ಮಹತ್ ಕಾರ್ಯದಲ್ಲಿ ನೀವು ಕೈಜೋಡಿಸಿ ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಎಂ ಸಿದ್ದರಾಮಯ್ಯನವರಿಂದ ಏ.15ರಂದು ‘ಕನ್ನಡ ಸಾಮರಸ್ಯ ನೆಲೆಗಳು’ 41 ಕೃತಿಗಳ ಲೋಕಾರ್ಪಣೆ

ಪತ್ರಿಕಾಗೋಷ್ಠಿಯಲ್ಲಿ ಯುವ ಘಟಕದ ಜಿಲ್ಲಾಧ್ಯಕ್ಷ ಸಂತೋಷ್ ಗೌಡ, ತಾಲ್ಲೂಕು ಅಧ್ಯಕ್ಷ ಸ್ವಾಮಿಗೌಡ, ಶಾಮಿಯಾನ ಚಂದ್ರು ಹಾಗೂ ತೇಜಸ್ ಗೌಡ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...