ಮಂಡ್ಯ | ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು: ಕೃಷಿ ಇಲಾಖೆ ಜಂಟಿ ನಿರ್ದೇಶಕ ಆಶೋಕ್ ಕರೆ

Date:

ಮುಂದಿನ ದಿನಗಳಲ್ಲಿ ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಇಳುವರಿ ಕುಂಠಿತಗೊಳ್ಳುತ್ತದೆ. ಭೂಮಿ ಫಲವತ್ತತೆ ಕಳೆದುಕೊಂಡು ಬರಡಾಗುತ್ತದೆ ಎಂದು ಮಂಡ್ಯ ಜಿಲ್ಲೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಹೇಳಿದರು.

- Advertisement -

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಕುರಿ ಪಾಪಣ್ಣ ತೋಟದಲ್ಲಿ ʼಮಳವಳ್ಳಿ ಸಂಪೂರ್ಣ ಸಾವಯವ ಕೃಷಿʼಕರ ಸಂಘದಿಂದ ಹಮ್ಮಿಕೊಂಡಿದ್ದ ಮಾಸಿಕ ಸಭೆ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ಭೂಮಿ ತನ್ನ ಫಲವತ್ತತೆ ಕಳೆದುಕೊಳ್ಳುವುದರ ಜತೆಗೆ ಆಹಾರದ ಕೊರತೆ ಉಂಟಾಗಿ ತೀವ್ರ ಸಮಸ್ಯೆಗೆ ಸಿಲುಕುತ್ತೇವೆ. ಆದುದರಿಂದ ಈಗಿನಿಂದಲೇ ಸಾವಯವ ಕೃಷಿಗೆ ಹೊತ್ತು ನೀಡಿ ಭೂಮಿಯ ಫಲವತ್ತತೆ ಉಳಿಸಿದರೆ ಒಳ್ಳೆಯದು” ಎಂದು ಹೇಳಿದರು.

ಮಳವಳ್ಳಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ದೀಪಕ್ ಮಾತನಾಡಿ, “ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸಾವಯವ ಕೃಷಿಕರು ಪಡೆದುಕೊಳ್ಳಲು ನಮ್ಮ ಸಹಕಾರ ಸದಾ ಇರುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಬೇಡ್ಕರ್ ಭಾವಚಿತ್ರ ಭಗ್ನಗೊಳಿಸಿ ವಿಕೃತಿ ಮೆರೆದ ಕಿಡಿಗೇಡಿಗಳು: ಬಂಧನಕ್ಕೆ ದಸಂಸ ಆಗ್ರಹ

ಸಂಘದ ಅಧ್ಯಕ್ಷ ಮಹೇಶ್ ಕುಮಾರ್ ಮಾತನಾಡಿ, “ಸರ್ಕಾರದಿಂದ ಸಿಗುವ ಸೌಲತ್ತುಗಳು ಹಾಗೂ ಪ್ರಶಸ್ತಿಗಳು ಸಾವಯವ ಕೃಷಿಕರಿಗೆ ಪ್ರತ್ಯೇಕವಾಗಿ ದೊರಕುವಂತೆ ಮಾಡಬೇಕು” ಎಂದು ತಿಳಿಸಿದರು.

ಈ ಸಭೆಯಲ್ಲಿ ಭಾರತಿ ಕಾಲೇಜಿನ ಕಾರ್ಯದರ್ಶಿ ಬಿ ಎಂ ನಂಜೇಗೌಡ, ಕೆಆರ್‌ಎಸ್‌ ಅಣೆಕಟ್ಟೆಯ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ಬಸವರಾಜೇಗೌಡ, ಜೈನ್ ಡ್ರಿಪ್‌ ಇರಿಗೇಷನ್‌ನ ವ್ಯವಸ್ಥಾಪಕ ವೃಷಭೇಂದರ್, ಸಾವಯವ ಕೃಷಿಕರಾದ ಪ್ರವೀಣ್, ಬಾದಾಮಿ ಚಿಕ್ಕಣ್ಣ, ವಡ್ಡರಹಳ್ಳಿ ಶಿವಕುಮಾರ್, ಜೆಸಿಬಿ ಶಿವು, ಹಂಚಿಪುರ ನಾಗರಾಜು, ಶಾಂತಕೃಷ್ಣ, ತನುಜಾ, ಸುವರ್ಣ, ಸಿಂಧು, ಡಾ. ಕಬಿನಿಗೌಡ, ವೀರಭದ್ರು ಸೇರಿದಂತೆ ನೂರಾರು ಮಂದಿ ಸಾವಯವ ಕೃಷಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...