ಮಂಡ್ಯ | ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ತಂದೆಯೂ ಅರೆಸ್ಟ್‌!

Date:

ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ಆತನ ತಂದೆಯನ್ನೂ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

- Advertisement -

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಮಧುಸೂದನ್ ಎಂಬಾತನನ್ನು ಪೊಲೀಸರು ಈ ಹಿಂದೆಯೇ ಬಂಧಿಸಿದ್ದರು. ಆತನನ್ನು ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆತನಿಗೆ ಬಟ್ಟೆ ಕೊಡಲು ಆತನ ತಂದೆ ಶಿವಣ್ಣ ಪೊಲೀಸ್‌ ಠಾಣೆಗೆ ತೆರಳಿದ್ದು, ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ಶಿವಣ್ಣ ತಂದಿದ್ದ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿದೆ. ಹೀಗಾಗಿ, ಅವರನ್ನೂ ಬಂಧಿಸಿದ್ದೇವೆಂದು ಪೊಲೀಸರು ತಿಳಿಸಿದ್ದಾರೆ.

ಜೈಲಿನಲ್ಲಿದ್ದ ಮಧುಸೂದನ್ ತನ್ನ ಸ್ನೇಹಿತನಿಂದ ಬಟ್ಟೆ ಬ್ಯಾಗ್‌ ಪಡೆದುಕೊಂಡು, ಅದನ್ನು ಜೈಲಿಗೆ ತಂದುಕೊಡುವಂತೆ ತನ್ನ ತಂದೆ ಶಿವಣ್ಣಗೆ ಕರೆಮಾಡಿದ್ದ. ಆತನ ಮಾತಿನಂತೆ ಶಿವಣ್ಣ ಅಪರಿಚಿತ ವ್ಯಕ್ತಿಯಿಂದ ಬಟ್ಟೆ ಬ್ಯಾಗ್ ಪಡೆದು, ಮಂಡ್ಯ ಜೈಲಿಗೆ ಬಂದಿದ್ದಾರೆ. ಈ ವೇಳೆ, ಜೈಲು ಸಿಬ್ಬಂದಿಗಳು ಬ್ಯಾಗ್‌ಅನ್ನು ಪರಿಶೀಲಿಸಿದ್ದು, ಬ್ಯಾಗ್‌ನಲ್ಲಿ 20 ಗ್ರಾಂ ಗಾಂಜಾ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾದ ಹಿನ್ನೆಲೆಯಲ್ಲಿ ಶಿವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. ಮಗನ ಸೂಚನೆಯಂತೆ ಅಪರಿಚಿತನಿಂದ ಬ್ಯಾಗ್ ಪಡೆದು, ಜೈಲಿಗೆ ತಂದಿದ್ದೇನೆಂದು ಶಿವಣ್ಣ ಹೇಳಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...