ಮಂಡ್ಯ | ಮನ್ ಮುಲ್​​ನಲ್ಲಿ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ

Date:

ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡ ದುರಂತ ಮಾಸುವ ಮುನ್ನವೇ ಮಂಡ್ಯದ ಮನ್ ಮುಲ್​​ನಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದೆ.

- Advertisement -

ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಮನ್​ ಮುಲ್)ದ ಮೆಗಾ ಡೈರಿ ಘಟಕ ಕಳೆದ ಐದು ತಿಂಗಳ ಹಿಂದೆ ಉದ್ಘಾಟನೆಯಾಗಿತ್ತು. ಎಂದಿನಂತೆ ಕಾರ್ಮಿಕರು ಭಾನುವಾರ ಬೆಳಗ್ಗಿನ ಶಿಫ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಶಾರ್ಟ್‌ ಸರ್ಕ್ಯೂಟ್‌ನಿಂದ ಮನ್‌ ಮುಲ್‌ನ ಪ್ಯಾಕಿಂಗ್‌ ಸೆಕ್ಷನ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿ ಕಟ್ಟಡದಿಂದ ಹೊರಕ್ಕೆ ಓಡಿಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬೆಂಕಿ ಹೊತ್ತಿಕೊಂಡ ಕಾರಣ ಸಿಬ್ಬಂದಿಯಲ್ಲಿ ಆತಂಕ ಮೂಡಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ 3ಕ್ಕೂ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ. ತುಪ್ಪದ ಘಟಕಕ್ಕೆ ಬೆಂಕಿ ತಗುಲಿರುವುದರಿಂದ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರು ಹರಸಾಹಸ ಪಡುತ್ತಿದ್ದಾರೆ. ಇನ್ನು ಬೆಂಕಿಯ ಕೆನ್ನಾಲಿಗೆಗೆ ಬಾಯ್ಲರ್‌ಗಳು ಸ್ಪೋಟಗೊಂಡಿರುವ ಸಾಧ್ಯತೆಯಿದೆ. ಬೆಂಕಿಯಿಂದಾಗಿ ಮನ್ ಮುಲ್ ಆವರಣದಲ್ಲಿ ದಟ್ಟ ಹೊಗೆ ಆವರಿಸಿದೆ.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಪಟಾಕಿ ದುರಂತ | ಮೃತ ಕಾರ್ಮಿಕರಲ್ಲಿ ಒಂದೇ ಗ್ರಾಮದ 8 ವಿದ್ಯಾರ್ಥಿಗಳು

ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಆದರೆ, ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...