ಮಂಡ್ಯ | ಜೈಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯ; ಹನುಮ ಮಾಲಾಧಾರಿಗಳ ವಿರುದ್ಧ ಪ್ರಕರಣ ದಾಖಲು

Date:

ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಗೆ ತೆರಳುತ್ತಿದ್ದ ಮಾಲಾಧಾರಿಗಳು, ಮುಸ್ಲಿಂ ಯುವಕರನ್ನು ಅಡ್ಡಗಟ್ಟಿ ‘ಜೈಶ್ರೀರಾಮ್’ ಕೂಗುವಂತೆ ಒತ್ತಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

- Advertisement -

ಮಂಡ್ಯ ತಾಲೂಕಿನ ಬೆಂಗಳೂರು ಮೈಸೂರು ಹೆದ್ದಾರಿಯ ಸುಂಡಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಹೆದ್ದಾರಿಯ ಅಂಡರ್ ಪಾಸ್ ಸರ್ವೀಸ್ ರಸ್ತೆಯ ಬಳಿ ಬೈಕ್‍ನಲ್ಲಿ ತೆರಳುತ್ತಿದ್ದ ಮೂವರು ಮುಸ್ಲಿಂ ಯುವಕರನ್ನು ಸಂಕೀರ್ತನಾ ಯಾತ್ರೆಗೆ ಹೋಗುತ್ತಿದ್ದ ಸಂಘಪರಿವಾರದ ಕಾರ್ಯಕರ್ತರು ಸುತ್ತುವರಿದು ‘ಜೈಶ್ರೀರಾಮ್’ ಕೂಗುವಂತೆ ಒತ್ತಾಯಿಸುತ್ತಿರುವುದು ವೈರಲ್ ವಿಡಿಯೋದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಈ ಸುದ್ದಿ ಓದಿದ್ದೀರಾ? ಕಲಬುರಗಿ| ಪ್ರತಿಭಟನಾನಿರತ ರೈತರನ್ನು ರಾತ್ರೋರಾತ್ರಿ ವಶಕ್ಕೆ ಪಡೆದ ಪೊಲೀಸರು

ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಹನುಮ ಮಾಲಾಧಾರಿಗಳ ವಿರುದ್ಧ ಸುಮೋಟೊ ಪ್ರಕರಣ ದಾಖಲಾಗಿದೆ. ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಬಿಎನ್‍ಎಸ್ ಅಡಿಯಲ್ಲಿ 189(2), 126(2), 196, 352, ರೆ.ವಿ. 190 ಪ್ರಕರಣ ದಾಖಲಾಗಿದೆ. 8-10 ಅಪರಿಚಿತರು ಕೃತ್ಯ ಎಸಗಿದ್ದಾಗಿ ಎಫ್‍ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...